AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ವಾಸ್ತು ಶಾಸ್ತ್ರದ ಪ್ರಕಾರ, ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ
Mirror Vastu Tips
ಅಕ್ಷತಾ ವರ್ಕಾಡಿ
|

Updated on: May 09, 2024 | 9:58 AM

Share

ಹೆಚ್ಚಿನವರಿಗೆ ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸವಿರುತ್ತದೆ. ಆದರೆ ಜ್ಯೋತಿಷ್ಯ ತಜ್ಞರ ಪ್ರಕಾರ ಇಂತಹ ಅಭ್ಯಾಸವನ್ನು ಅಶುಭ ಎಂದು ಪರಿಗಣಿಸಲಾಗಿದೆ. ವಾಸ್ತು ನಿಯಮಗಳ ಪ್ರಕಾರ ಬೆಳಗ್ಗೆ ಬೇಗ ಎದ್ದು ಕನ್ನಡಿಯಲ್ಲಿ ಮುಖ ನೋಡಬಾರದು. ಇದು ಜೀವನದಲ್ಲಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಕಾರಣಕ್ಕಾಗಿ ಮಲಗುವ ಕೋಣೆಯಲ್ಲಿ ಕನ್ನಡಿ ಇರಬಾರದು ಎಂಬ ನಿಯಮವಿದೆ. ಮುಂಜಾನೆ ಕನ್ನಡಿ ನೋಡುವುದು ವಾಸ್ತುದಲ್ಲಿ ನಿಷಿದ್ಧ. ನೀವು ಬೆಳಿಗ್ಗೆ ಎದ್ದಾಗ ಕನ್ನಡಿಯಲ್ಲಿ ನೋಡುವುದು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ರಾತ್ರಿ ಹೊತ್ತಿನಲ್ಲಿ ನಕಾರಾತ್ಮಕ ಶಕ್ತಿಯು ಕನ್ನಡಿಯನ್ನು ಸುತ್ತುವರಿಯುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ನೀವು ಬೆಳಿಗ್ಗೆ ಎದ್ದ ತಕ್ಷಣ ಮತ್ತು ಕನ್ನಡಿಯಲ್ಲಿ ನೋಡಿದ ತಕ್ಷಣ, ಈ ನಕಾರಾತ್ಮಕ ಶಕ್ತಿಯು ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಪರಿಣಾಮವಾಗಿ ವ್ಯಕ್ತಿಯು ಅನಗತ್ಯ ಆಯಾಸ ಮತ್ತು ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ನೋಡಿಕೊಂಡರೆ ಮನಸ್ಸಿಗೆ ತೊಂದರೆಯಾಗುತ್ತದೆ ಎಂಬ ನಂಬಿಕೆ ಇದೆ. ಬೆಳಗ್ಗೆ ಎದ್ದು ಕನ್ನಡಿಯಲ್ಲಿ ನೋಡಿದಾಗ ಮುಖದ ಮೇಲೆ ಮೊಡವೆ, ಸುಕ್ಕು, ಬೂದು ಕೂದಲು, ಕಲೆಗಳು ಕಾಣಿಸುತ್ತವೆ. ಇದು ವ್ಯಕ್ತಿಯ ಆತ್ಮವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸುತ್ತಾರೆ ಜ್ಯೋತಿಷ್ಯ ಶಾಸ್ತ್ರಜ್ಞರು.

ಇದನ್ನೂ ಓದಿ: ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

ವಾಸ್ತು ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಕನ್ನಡಿಯಲ್ಲಿ ಮುಖವನ್ನು ನೋಡುವುದು ಮತ್ತು ಒಬ್ಬರ ನೆರಳನ್ನು ನೋಡುವುದು ಅಶುಭ. ಬೆಳಿಗ್ಗೆ ನೆರಳನ್ನು ನೋಡುವುದು ವ್ಯಕ್ತಿಯೊಳಗೆ ನಕಾರಾತ್ಮಕ ಶಕ್ತಿಯನ್ನು ತರುತ್ತದೆ. ನೆರಳು ಕಂಡಾಗ ವ್ಯಕ್ತಿಯ ಮಾನಸಿಕ ಉದ್ವೇಗ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್