AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miss Universe 2023: 2023ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಸುಂದರಿ ಯಾರು ಗೊತ್ತಾ?

ಆಗಸ್ಟ್‌ನಲ್ಲಿ ನಡೆದ ಮಿಸ್ ದಿವಾ ಯೂನಿವರ್ಸ್ 2023ರ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಶ್ವೇತಾ ಈ ಮೂಲಕ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಆದ್ದರಿಂದ ಶ್ವೇತಾ ಶಾರ್ದಾ ಯಾರು? ಹಾಗೂ ಅವರ ಕುರಿತ ಕೆಲವೊಂದಿಷ್ಟು ಇಂಟರೆಸ್ಟಿಂಗ್​​ ಸಂಗತಿಯನ್ನು ಇಲ್ಲಿ ತಿಳಿದುಕೊಳ್ಳಿ.

Miss Universe 2023: 2023ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಸುಂದರಿ ಯಾರು ಗೊತ್ತಾ?
Miss Universe 2023
ಅಕ್ಷತಾ ವರ್ಕಾಡಿ
|

Updated on:Nov 18, 2023 | 12:33 PM

Share

72ನೇ ಮಿಸ್‌ ಯೂನಿವರ್ಸ್‌ (Miss Universe)  ಸ್ಪರ್ಧೆಯು ಇಂದು(ನವೆಂಬರ್‌ 18) ಎಲ್‌ ಸಾಲ್ವಡಾರ್‌ನಲ್ಲಿ ನಡೆಯಲಿದೆ. 90 ಕ್ಕೂ ಹೆಚ್ಚು ದೇಶಗಳಿಂದ ಸ್ಪರ್ಧಿಸುತ್ತಿದ್ದು, 23 ವರ್ಷದ ಶ್ವೇತಾ ಶಾರ್ದಾ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಭಾರತದ ಕಾಲಮಾನದ ಪ್ರಕಾರ ನವೆಂಬರ್ 19ರಂದು ಬೆಳಿಗ್ಗೆ 6:30 ಕ್ಕೆ ಮಿಸ್ ಯೂನಿವರ್ಸ್ ಎಕ್ಸ್ (ಹಿಂದೆ ಟ್ವಿಟರ್) ಖಾತೆ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ. ಇತ್ತೀಚಿಗಷ್ಟೇ ಆಗಸ್ಟ್‌ನಲ್ಲಿ ನಡೆದ ಮಿಸ್ ದಿವಾ ಯೂನಿವರ್ಸ್ 2023 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಶ್ವೇತಾ ಈ ಮೂಲಕ 2023ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಆದ್ದರಿಂದ ಶ್ವೇತಾ ಶಾರ್ದಾ ಯಾರು? ಹಾಗೂ ಅವರ ಕುರಿತ ಕೆಲವೊಂದಿಷ್ಟು ಇಂಟರೆಸ್ಟಿಂಗ್​​ ಸಂಗತಿಯನ್ನು ಇಲ್ಲಿ ತಿಳಿದುಕೊಳ್ಳಿ.

Shweta Sharda

ಶ್ವೇತಾ ಶಾರ್ದಾ ಬಗೆಗಿನ ಕೆಲವೊಂದು ಇಂಟರೆಸ್ಟಿಂಗ್​ ಸಂಗತಿಗಳು:

  • ಶ್ವೇತಾ ಅವರು ಮೇ 24, 2000 ಇಸವಿಯಲ್ಲಿ ಚಂಡೀಗಢದಲ್ಲಿ ಜನಿಸಿದರು. ತಂದೆಯ ಆಸರೆಯಿಲ್ಲದೇ(Single parent) ತಾಯಿಯೊಂದಿಗೆ ಬೆಳೆದ ಶಾರ್ದಾ ತನ್ನ 16 ನೇ ವಯಸ್ಸಿನಲ್ಲಿ ತಾಯಿಯೊಂದಿಗೆ ಮುಂಬೈಗೆ ತೆರಳಿದರು. ಫೆಮಿನಾ ಬ್ಯೂಟಿ ಪೆಜೆಂಟ್ಸ್ ಪ್ರಕಾರ , ಶ್ವೇತಾ ದೆಹಲಿಯ ಇಂದಿರಾ ಗಾಂಧಿ ನ್ಯಾಷನಲ್ ಒಪನ್​ ​ ಯೂನಿವರ್ಸಿಟಿಯಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
  • ನೃತ್ಯಗಾರ್ತಿಯಾಗಿ ಗುರುತಿಸಿಕೊಂಡಿರುವ ಶ್ವೇತಾ ಶಾರ್ದಾ ಡ್ಯಾನ್ಸ್ ಪ್ಲಸ್​​​​ ಮತ್ತು ಡ್ಯಾನ್ಸ್ ಇಂಡಿಯಾ ಡ್ಯಾನ್ಸ್‌ ಸೇರಿದಂತೆ ಹಲವಾರು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಇದಲ್ಲದೇ ಡ್ಯಾನ್ಸ್​​​ ಕೊರಿಯೋಗ್ರಾಫರ್‌ ಆಗಿ ಹೆಸರು ಗಳಿಸಿದ್ದಾರೆ.
  • ಆಗಸ್ಟ್‌ನಲ್ಲಿ ಮುಂಬೈನಲ್ಲಿ ನಡೆದ ಫಿನಾಲೆಯಲ್ಲಿ ಶ್ವೇತಾ ಶಾರ್ದಾ ಮಿಸ್ ದಿವಾ ಯೂನಿವರ್ಸ್ 2023 ಕಿರೀಟವನ್ನು ಗೆದ್ದು, ಮಿಸ್ ಯೂನಿವರ್ಸ್ 2023ರ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಅರ್ಹತೆ ಗಳಿಸಿದ್ದಾರೆ. ಮಿಸ್ ದಿವಾ ಅಂತಿಮ ಹಂತದಲ್ಲಿ, ಶ್ವೇತಾ ಶಾರ್ದಾ ತನ್ನ ತಾಯಿಯನ್ನು “ತಮ್ಮ ಜೀವನದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿ” ಎಂದು ಉಲ್ಲೇಖಿಸಿ ತೀರ್ಪುಗಾರರ ಮನಗೆದ್ದಿದ್ದಾರೆ.
  • ಇದಲ್ಲದೇ ಬಾಲಿವುಡ್​​​ನ ದೀಪಿಕಾ ಪಡುಕೋಣೆ ಮತ್ತು ಮಾಧುರಿ ದೀಕ್ಷಿತ್, ಸಲ್ಮಾನ್ ಖಾನ್, ಕತ್ರಿನಾ ಕೈಫ್, ಮೌನಿ ರಾಯ್ ಮುಂತಾದ ಜನಪ್ರಿಯ ನಟರೊಂದಿಗೆ ಡ್ಯಾನ್ಸ್​​​ ಕೊರಿಯೋಗ್ರಾಫರ್‌ ಆಗಿ ಕೆಲಸಮಾಡಿರುವ ಶ್ವೇತಾ.
  • ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿರುವ ಶ್ವೇತಾ ಇನ್ಟ್ಸಾಗ್ರಾಮ್​ನಲ್ಲಿ 5 ಲಕ್ಷಕ್ಕೂ ಹೆಚ್ಚು ಹಿಂಬಾಲಕರನ್ನು ಪಡೆದುಕೊಂಡಿದ್ದಾರೆ. ಇದಲ್ಲದೇ “ಮಸ್ತ್ ಆಂಖೇನ್” ಎಂಬ ಹಾಡಿನ ಮ್ಯೂಸಿಕ್ ವಿಡಿಯೋದಲ್ಲಿ ನಟ ಶಂತನು ಮಹೇಶ್ವರಿ ಜೊತೆ ಕಾಣಿಸಿಕೊಂಡಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:14 pm, Sat, 18 November 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು