AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Morning Routine: ಬೆಳಗ್ಗೆ ಈ ಮೂರು ಕೆಲಸಗಳನ್ನು ಮಾಡಿ, ಆರೋಗ್ಯ, ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ

ನಮ್ಮ ದಿನವನ್ನು ಸರಿಯಾಗಿ ಪ್ರಾರಂಭಿಸುವುದು ತುಂಬಾನೇ ಮುಖ್ಯ. ಇದು ಮನಸ್ಥಿತಿಯನ್ನು ಸುಧಾರಿಸಲು, ದಿನವಿಡೀ ಚೈತನ್ಯಶೀಲರಾಗಿರಲು ಸಹಾಯ ಮಾಡುವುದು ಮಾತ್ರವಲ್ಲದೆ ಆರೋಗ್ಯ ಮೇಲೂ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಬೆಳಗ್ಗೆ ಎದ್ದ ಬಳಿಕ ಈ ಮೂರು ಕೆಲಸಗಳನ್ನು ಮಾಡುವುದರಿಂದ ಆರೋಗ್ಯ ಮತ್ತು ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ.

Morning Routine: ಬೆಳಗ್ಗೆ ಈ ಮೂರು ಕೆಲಸಗಳನ್ನು ಮಾಡಿ, ಆರೋಗ್ಯ, ಮನಸ್ಥಿತಿ ಎರಡೂ ಉತ್ತಮವಾಗಿರುತ್ತದೆ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Aug 22, 2026 | 8:20 PM

Share

ಬೆಳಗಿನ ಸಮಯ (morning) ನಾವು ದಿನವಿಡೀ ಹೇಗಿರಬೇಕು ಎಂಬುದನ್ನು ನಿರ್ಧರಿಸುತ್ತದೆ. ಇದು ನಮ್ಮ ಮನಸ್ಥಿತಿ, ಚಟುವಟಿಕೆಯ ಮೇಲೂ ಪರಿಣಾಮ ಬೀರುತ್ತದೆ. ಅದಕ್ಕಾಗಿ ಬೆಳಗ್ಗಿನ ಸಮಯವನ್ನು ಸಕಾರಾತ್ಮಕ ರೀತಿಯಲ್ಲಿ ಕಳೆಯಬೇಕು. ಜೊತೆಗೆ ಬೆಳಗಿನ ದಿನಚರಿಯಲ್ಲಿ ಪಾಲಿಸುವ ಕೆಲವೊಂದು ಅಭ್ಯಾಸಗಳು ನಮ್ಮ ದಿನವನ್ನು ಸುಂದರಗೊಳಿಸುವುದು ಮಾತ್ರವಲ್ಲ ನಮ್ಮ ಆರೋಗ್ಯದ ಮೇಲೂ ಧನಾತ್ಮಕ ಪರಿಣಾಮವನ್ನು ಬೀರುತ್ತದೆ. ನಿಮ್ಮ ಮನಸ್ಥಿತಿ ಮತ್ತು ಆರೋಗ್ಯ ಎರಡೂ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಬಯಕೆ ನಿಮಗಿದ್ದರೆ, ಪ್ರತಿನಿತ್ಯ ಬೆಳಗಿನ ದಿನಚರಿಯಲ್ಲಿ ಈ ಮೂರು ಅಭ್ಯಾಸಗಳನ್ನು ಪಾಲಿಸಲು ಮರೆಯದಿರಿ.

ಉತ್ತಮ ಆರೋಗ್ಯಕ್ಕಾಗಿ ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ಪಾಲಿಸಿ:

ಬೆಳಿಗ್ಗೆ ಸಾಕಷ್ಟು ನೀರು ಕುಡಿಯಿರಿ:

ರಾತ್ರಿಯ ನಿದ್ರೆಯ ಸಮಯದಲ್ಲಿ ನಮ್ಮ ದೇಹವು ನಿರ್ಜಲೀಕರಣಗೊಳ್ಳುತ್ತದೆ. ಹಾಗಾಗಿ ದೇಹವನ್ನು ಹೈಡ್ರೇಟ್‌ ಆಗಿಡಲು ಬೆಳಿಗ್ಗೆ ಎದ್ದ ತಕ್ಷಣ ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ಒಂದು ಅಥವಾ ಎರಡು ಲೋಟ ನೀರು ಕುಡಿಯುವುದು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ  ಉಗುರು ಬೆಚ್ಚಗಿನ ನೀರನ್ನು ಕುಡಿಯುವುದು ಉತ್ತಮ. ಇದು  ದೇಹ ಮತ್ತು ಮೆದುಳಿನಾದ್ಯಂತ ರಕ್ತ ಪರಿಚಲನೆ ಸುಧಾರಿಸುತ್ತದೆ. ಜಲಸಂಚಯನವು ಒತ್ತಡವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ದಿನವಿಡೀ ನಿಮ್ಮನ್ನು ಚೈತನ್ಯದಿಂದ ಇಡಲು ಸಹಾಯ ಮಾಡುತ್ತದೆ. ಇದಲ್ಲದೆ ದಿನವಿಡೀ ನಿಯಮಿತವಾಗಿ ಸಾಕಷ್ಟು ನೀರು ಕುಡಿಯುವುದು ಹೆಚ್ಚು ಮುಖ್ಯ.

ಬೆಳಿಗ್ಗೆ ಸ್ವಲ್ಪ ದೈಹಿಕ ಚಟುವಟಿಕೆ ಮಾಡಿ:

ನಿಮ್ಮ ದಿನವನ್ನು ಹಗುರವಾದ ದೈಹಿಕ ಚಟುವಟಿಕೆಯೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುವುದರಿಂದ ನಿಮ್ಮ ದೇಹವು ಸಕ್ರಿಯವಾಗಿರಲು ಸಹಾಯವಾಗುತ್ತದೆ. ಪ್ರತಿದಿನ ಜಿಮ್‌ಗೆ ಹೋಗಬೇಕಾಗಿಲ್ಲ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ 15 ರಿಂದ 30 ನಿಮಿಷಗಳ ವಾಕಿಂಗ್, ಸ್ಟ್ರೆಚಿಂಗ್, ಯೋಗ, ಸೈಕ್ಲಿಂಗ್ ಅಥವಾ‌  ಲಘು ವ್ಯಾಯಾಮವನ್ನು ಮಾಡಿ. ನಿಯಮಿತ ದೈಹಿಕ ಚಟುವಟಿಕೆಯು ನಿಮ್ಮನ್ನು ಫಿಟ್‌ ಆಗಿ ಇರಿಸುವುದಲ್ಲದೆ, ಮನಸ್ಥಿತಿಯನ್ನು ಸುಧಾರಿಸಲು ಮತ್ತು ದಿನವಿಡಿ ಚುರುಕಾಗಿರಲು, ಚೈತನ್ಯದಿಂದಿರಲು ಸಹಾಯ ಮಾಡುತ್ತದೆ. ಆದ್ದರಿಂದ ಬೆಳಗಿನ ದಿನಚರಿಯಲ್ಲಿ ವ್ಯಾಯಾಮ, ಯೋಗ ಮಾಡಿ.

ಇದನ್ನೂ ಓದಿ: ಊಟ ಮಾಡಿದ ಬಳಿಕ 10 ನಿಮಿಷಗಳ ಕಾಲ ಅತ್ತಿಂದಿತ್ತ ನಡೆದಾಡುವುದರಿಂದ ಲಭಿಸುವ ಪ್ರಯೋಜನಗಳು

ಪೌಷ್ಟಿಕ ಉಪಹಾರ ಸೇವಿಸಿ:

ಬೆಳಗ್ಗಿನ ಉಪಹಾರವು ದಿನದ ಅತ್ಯಂತ ಮುಖ್ಯವಾದ ಆಹಾರವಾಗಿದ್ದು, ಇದು ದೇಹಕ್ಕೆ ದಿನವಿಡೀ ಶಕ್ತಿ ನೀಡುತ್ತದೆ. ಆದ್ದರಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಉಪಹಾರಗಳನ್ನೇ ಬೆಳಗ್ಗಿನ ಸಮಯದಲ್ಲಿ ಸೇವಿಸಬೇಕು.  ಚಹಾ ಮತ್ತು ಬಿಸ್ಕತ್ತುಗಳು ಅಥವಾ ಅತಿಯಾದ ಸಿಹಿ ಪದಾರ್ಥಗಳನ್ನು ತಿನ್ನುವ ಬದಲು ಪ್ರೋಟೀನ್ ಮತ್ತು ಫೈಬರ್-ಭರಿತ ಆಯ್ಕೆಗಳನ್ನು ಒಳಗೊಂಡ ಆಹಾರಗಳನ್ನು ಸೇವನೆ ಮಾಡಿ.  ಮೊಟ್ಟೆ, ಮೊಸರು, ಓಟ್ಸ್, ಬೇಳೆ, ಧಾನ್ಯಗಳು, ಡ್ರೈ ನಟ್ಸ್‌-ಫ್ರೂಟ್ಸ್ ಮತ್ತು ಕಾಲೋಚಿತ ಹಣ್ಣುಗಳಂತಹ ಆರೋಗ್ಯಕರ ಆಹಾರ ಸೇವಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್