AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mosquito repellent plants: ಮನೆಯಲ್ಲಿ ಸೊಳ್ಳೆ ಕಾಟವೇ? ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ನಿಮ್ಮ ಹತ್ತಿರ ಸುಳಿಯುವುದಿಲ್ಲ

ಮಳೆಗಾಲ ಮಾತ್ರವಲ್ಲದೇ ಈ ಬೇಸಿಗೆಯಲ್ಲಿಯು ಸೊಳ್ಳೆಗಳ ಕಾಟ ವಿಪರೀತವಾಗಿರುತ್ತದೆ. ರಾತ್ರಿಯಾದರೆ ಸಾಕು, ಕಿವಿ ಬಳಿ ಗುಯಿಂಗುಟ್ಟುತ್ತ ನಿದ್ದೆ ಮಾಡಲು ಕೂಡ ಬಿಡುವುದಿಲ್ಲ. ಸೊಳ್ಳೆಗಳ ಸಂತತಿಯು ವಿಪರೀತವಾದರೆ ಇನ್ನಿತ್ತರ ಆರೋಗ್ಯ ಸಮಸ್ಯೆಗಳಿಗೂ ದಾರಿ ಮಾಡಿಕೊಡುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ ಮಲೇರಿಯಾ, ಗುನ್ಯಾದಂಥಹ ಕಾಯಿಲೆಗಳು ಬರುತ್ತವೆ. ಹೀಗಾಗಿ ನಮ್ಮ ಆರೋಗ್ಯವನ್ನು ರಕ್ಷಿಸಲು ಸೊಳ್ಳೆ ಕಾಟದಿಂದ ಮನೆಯ ಸುತ್ತ ಇಂತಹ ಗಿಡಗಳನ್ನು ನೆಡುವುದು ಉತ್ತಮ.

Mosquito repellent plants: ಮನೆಯಲ್ಲಿ ಸೊಳ್ಳೆ ಕಾಟವೇ? ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ನಿಮ್ಮ ಹತ್ತಿರ ಸುಳಿಯುವುದಿಲ್ಲ
ಸಾಯಿನಂದಾ
| Edited By: |

Updated on:May 09, 2024 | 4:40 PM

Share

ಸೊಳ್ಳೆ ಏನಾದರೂ ಕಚ್ಚಿ ಬಿಟ್ಟರೆ ಆ ಜಾಗವು ಊದಿಕೊಂಡು ತುರಿಕೆ ಆರಂಭವಾಗಿ ಚರ್ಮದ ಗಂಭೀರ ಸಮಸ್ಯೆಗೆ ಕಾರಣವಾಗಬಹುದು. ಹೆಚ್ಚಿನವರು ಸೊಳ್ಳೆ ಪರದೆ, ಕಾಯಿಲ್, ಕ್ರೀಮ್ ಹೀಗೆ ನಾನಾ ರೀತಿಯಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಮನೆಯ ಸುತ್ತ ಮುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆಗಳು ನಿಮ್ಮ ಹತ್ತಿರವೇ ಸುಳಿಯುವುದಿಲ್ಲ.

  • ಸೊಳ್ಳೆಗಳನ್ನು ಓಡಿಸಲು ಸುಲಭ ಉಪಾಯವೆಂದರೆ ಮನೆಯ ಸುತ್ತ ಮುತ್ತ ತುಳಸಿ ಮತ್ತು ಪುದೀನ ಸಸ್ಯವನ್ನು ನೆಡುವುದು. ಈ ಸಸ್ಯದ ಎಲೆಯಲ್ಲಿರುವ ಪರಿಮಳದಿಂದ ಸೊಳ್ಳೆಗಳು ಮತ್ತು ಕೀಟಗಳು ಮನೆಯೊಳಗೆ ಬರುವುದಿಲ್ಲ.
  • ರೋಸರಿ ಸಸ್ಯ ವನ್ನು ಮನೆಯ ಹಾಸುಮಾಸಿನಲ್ಲಿ ನೆಡುವುದರಿಂದ ಸೊಳ್ಳೆಗಳು ಬರುವುದಿಲ್ಲ. ಇದರ ಪರಿಮಳಯುಕ್ತವಾದ ಸುವಾಸನೆಗೆ ಈ ಸೊಳ್ಳೆಗಳು ಹಾಗೂ ಕೀಟಗಳು ದೂರ ಓಡುತ್ತವೆ.
  • ಲ್ಯಾವೆಂಡರ್ ಸಸ್ಯವು ಕೂಡ ಸೊಳ್ಳೆಗಳ ಕಾಟಕ್ಕೆ ಪ್ರಯೋಜನಕಾರಿಯಾಗಿದೆ. ಈ ಎಲೆಗಳಲ್ಲಿ ಕಂಡುಬರುವ ಎಸೆನ್ಶಿಯಲ್ ಆಯಿಲ್ ಪರಿಮಳದಿಂದ ಸೊಳ್ಳೆಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದಾಗಿದೆ.
  •  ಮನೆಯ ಮುಂದೆ ಚೆಂಡು ಹೂವಿನ ಸಸ್ಯವನ್ನು ನೆಡುವುದರಿಂದ ನೋಡುವುದಕ್ಕೆ ಸುಂದರವಾಗಿ ಕಾಣುವುದಲ್ಲದೇ ಸೊಳ್ಳೆಗಳನ್ನು ಸುಲಭವಾಗಿ ಓಡಿಸಬಹುದು. ಈ ಹೂವಿನ ಸುವಾಸನೆಯು ಸೊಳ್ಳೆಗಳಿಗೆ ತೊಂದರೆ ಉಂಟುಮಾಡಿ ಅವುಗಳನ್ನು ಓಡಿಸುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Thu, 9 May 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್