Mother’s Day 2022: ಅಮ್ಮನಿಗೆ ಗಿಫ್ಟ್​ ಕೊಡ್ಬೇಕಾ? ಇಲ್ಲಿವೆ ಐಡಿಯಾಗಳು

ತಾಯಿಯ ಪ್ರೀತಿಯನ್ನು ಎಂದಿಗೂ ಮರಳಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನು ನೀಡಿದರೂ ಅದು ಕಡಿಮೆಯೇ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ. ತಾ

Mother's Day 2022: ಅಮ್ಮನಿಗೆ ಗಿಫ್ಟ್​ ಕೊಡ್ಬೇಕಾ? ಇಲ್ಲಿವೆ ಐಡಿಯಾಗಳು
ತಾಯಂದಿರ ದಿನಕ್ಕೆ ಉಡುಗೊರೆ
Follow us
TV9 Web
| Updated By: ನಯನಾ ರಾಜೀವ್

Updated on: May 07, 2022 | 10:06 AM

ತಾಯಂದಿರ ದಿನ( Mother’s Day )ಇನ್ನೇನು ಒಂದೇ ದಿನ ಬಾಕಿ ಇದೆ, ಅಮ್ಮನಿಗೆ ಸರ್ಪ್ರೈಸ್ ಕೊಡ್ಬೇಕಾ, ಒಳ್ಳೆಯ ಉಡುಗೊರೆ ನೀಡುವ ಬಗ್ಗೆ ಆಲೋಚಿಸುತ್ತಿದ್ದೀರಾ ಹಾಗಾದರೆ ಇಲ್ಲಿದೆ ನೋಡಿ ಐಡಿಯಾಗಳು. ನಿಮ್ಮ ಬಜೆಟ್​ಗೆ ಸರಿ ಹೊಂದುವಂತ ಉಡುಗೊರೆಯನ್ನು ನೀವು ಆಯ್ದುಕೊಳ್ಳಿ, ಎಷ್ಟೋ ಮಕ್ಕಳು ತಮ್ಮ ತಾಯಿಗೆ ಹೊರಗಡೆಯಿಂದ ಉಡುಗೊರೆ ತಂದು ನೀಡುತ್ತಾರೆ. ಇನ್ನೂ ಕೆಲವರು ಸ್ವತಃ ಅವರೇ ಉಡುಗೊರೆಯನ್ನು ತಯಾರಿಸಿ ಕೂಡ ನೀಡಬಹುದು. ತಾಯಿಯ ಪ್ರೀತಿಯನ್ನು ಎಂದಿಗೂ ಮರಳಿಸಲು ಸಾಧ್ಯವಿಲ್ಲ. ತಾಯಿಯ ಪ್ರೀತಿ, ತ್ಯಾಗಕ್ಕೆ ನಾವು ಏನು ನೀಡಿದರೂ ಅದು ಕಡಿಮೆಯೇ. ನಮ್ಮನ್ನು ಈ ಜಗತ್ತಿಗೆ ತರುವ ತಾಯಿಗೆ ಗೌರವ ಹಾಗೂ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನ ಅಗತ್ಯವಿಲ್ಲ.

ತಾಯಂದಿರ ದಿನ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಒಂದು ಅವಕಾಶ ನೀಡುತ್ತದೆ. ಹಾಗಾಗಿ ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರವನ್ನು ವಿಶ್ವ ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ.

ಬಜೆಟ್ ಹಾಗೂ ಉಡುಗೊರೆ ಐಡಿಯಾಗಳು -500 ರೂ. ಒಳಗೆ ನೀವು ಹೂಗುಚ್ಚ, ಬ್ರೇಸ್​ಲೆಟ್, ಬುಕ್​ಗಳನ್ನು ನೀಡಬಹುದು -500ರೂ-1000 ರೂ. ಒಳಗೆ ಫೋಟೋ ಫ್ರೇಮ್, ಫೋಟೊವಿರವಿರುವ ಮಗ್​ಗಳನ್ನು ನೀಡಬಹುದು. -1000 ರೂ.ನಿಂದ 2000ರೂ ಒಳಗೆ ಸ್ಕಿನ್ ಕೇರ್ ಕಿಟ್, ಪರ್ಸ್, ಸ್ಕಾರ್ಫ್​ಗಳನ್ನು ನೀಡಬಹುದು. -2 ಸಾವಿರದಿಂದ 5 ಸಾವಿರದ ಒಳಗೆ ಸ್ಮಾರ್ಟ್ ವಾಚ್, ಸ್ಪೀಕರ್, ಬಳೆಗಳನ್ನು ನೀಡಬಹುದು -5 ಸಾವಿರದಿಂದ 10 ಸಾವಿರದ ಒಳಗೆ ಆಭರಣಗಳು, ಡಿಸೈನರ್ ಬ್ಯಾಗ್​ಗಳು, ವಾಚ್, ಸನ್​ಗ್ಲಾಸ್​ಗಳನ್ನು ನೀಡಬಹುದು. -10 ಸಾವಿರ ರೂ.ಕ್ಕೂ ಹೆಚ್ಚಿನ ಹಣವನ್ನು ಖರ್ಚು ಮಾಡಬಹುದಾದರೆ ಗೃಹಪಯೋಗಿ ವಸ್ತುಗಳು, ಡಿಸೈನರ್ ಬಟ್ಟೆಗಳು, ಹಾಗೂ ಅದಕ್ಕೆ ಸರಿ ಹೊಂದುವ ಆಭರಣಗಳನ್ನು ನೀಡಬಹುದು.

2ನೇ ಭಾನುವಾರ ತಾಯಂದಿರ ದಿನ ಏಕೆ ಆಚರಿಸುತ್ತಾರೆ? ಮೇ 9, 1914ರಂದು ಅಮೆರಿಕದ ರಾಷ್ಟ್ರಪತಿ ಆಗಿದ್ದ ವುಡ್ರೋ ವಿಲ್ಸನ್ ಪ್ರತಿ ವರ್ಷ ಮೇ 2ನೇ ಭಾನುವಾರದಂದು ತಾಯಂದಿರ ದಿನ ಎಂದು ಆಚರಿಸಲಾಗುತ್ತದೆ ಎಂದು ಕಾನೂನನ್ನು ಜಾರಿಗೊಳಿಸಿದರು. ಈ ಕಾನೂನು ಜಾರಿ ಮಾಡಿದ ನಂತರ ಅಮೆರಿಕ, ಭಾರತ ಹಾಗೂ ಹಲವು ದೇಶಗಳಲ್ಲಿ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನವನ್ನಾಗಿ ಆಚರಿಸಲಾಗುತ್ತದೆ.

ತಾಯಂದಿರ ದಿನ ಶುರುವಾಗಿದ್ದು ಹೇಗೆ? ತಾಯಂದಿರ ದಿನ 1908ರಲ್ಲಿ ಅಮೆರಿಕದಲ್ಲಿ ಶುರುವಾಗಿತ್ತು. ಅಮೆರಿಕದ ಶಾಂತಿ ಕಾರ್ಯಕರ್ತೆ ಆಗಿದ್ದ ಅನಾ ಜಾರ್ವಿಸ್ ತನ್ನ ತಾಯಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಅನಾ ಜಾರ್ವಿಸ್ ಮದುವೆ ಆಗಿರಲಿಲ್ಲ. 1905ರಲ್ಲಿ ಅನಾ ತಾಯಿ ಮರಣ ಹೊಂದಿದ್ದರು. ತನ್ನ ತಾಯಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲು ಅನಾ ಈ ದಿನ ಆಯ್ಕೆ ಮಾಡಿಕೊಂಡಿದ್ದರು. ಬಳಿಕ ಈ ದಿನವನ್ನು ತಾಯಂದಿರ ದಿನವಾಗಿ ಆಚರಿಸಲು ಶುರು ಮಾಡಿದ್ದರು.

ತಾಯಂದಿರ ದಿನ ಆಚರಣೆ ಏಕೆ? ತಾಯಿಗಾಗಿ ಪ್ರೀತಿ ಹಾಗೂ ಉಡುಗೊರೆ ನೀಡಲು ಯಾವುದೇ ವಿಶೇಷ ದಿನದ ಅಗತ್ಯ ಇಲ್ಲ. ಆದರೂ ಸಹ ತಾಯಂದಿರ ದಿನದಂದು ತಾಯಿಗೆ ಮತ್ತಷ್ಟು ಗೌರವ ನೀಡಲಾಗುತ್ತದೆ. ಈ ದಿನದಂದು ತಾಯಿಗೆ ಸಿಹಿ ಜೊತೆ ಉಡುಗೊರೆ ನೀಡಲಾಗುತ್ತದೆ. ಲಂಡನ್‍ನಲ್ಲಿ ತಾಯಂದಿರ ದಿನವನ್ನು ಮಾರ್ಚ್ ತಿಂಗಳ ನಾಲ್ಕನೇ ಭಾನುವಾರದಂದು ಆಚರಿಸಲಾಗುತ್ತದೆ. ಗ್ರೀಸ್ ದೇಶದಲ್ಲಿ ಫೆಬ್ರವರಿ 2ರಂದು ಆಚರಿಸಲಾಗುತ್ತದೆ. ಭಾರತ ಸೇರಿ ಹಲವಾರು ದೇಶಗಳಲ್ಲಿ ಪ್ರತಿ ವರ್ಷ ಮೇ ತಿಂಗಳ 2ನೇ ಭಾನುವಾರದಂದು ತಾಯಂದಿರ ದಿನ ಆಚರಿಸಲಾಗುತ್ತದೆ. ಈ ವರ್ಷ ಮೇ 8ರಂದು ತಾಯಂದಿರ ದಿನ ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ