AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ

ಉಗುರು ಕಚ್ಚುವಿಕೆಯು ಸಾಮಾನ್ಯವಾಗಿ ಬಾಲ್ಯದಲ್ಲಿ ಪ್ರಾರಂಭವಾಗುತ್ತದೆ. ಇದು ಕೆಲವರಲ್ಲಿ ಪ್ರೌಢಾವಸ್ಥೆಯಲ್ಲಿ ಮುಂದುವರಿಯುತ್ತದೆ. ಇದರಿಂದ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತದೆ. ಆರೋಗ್ಯಕ್ಕೂ ಈ ಉಗುರು ಕಚ್ಚುವಿಕೆ ಒಳ್ಳೆಯದಲ್ಲ. ನಿಮಗೂ ಈ ರೀತಿ ಉಗುರು ಕಚ್ಚುವ ಅಭ್ಯಾಸವಿದ್ದರೆ ಅದನ್ನು ಅವಾಯ್ಡ್ ಮಾಡಲು ಕೆಲವು ಸಲಹೆಗಳು ಇಲ್ಲಿವೆ.

Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ
ಉಗುರು ಕಚ್ಚುವ ಅಭ್ಯಾಸ Image Credit source: iStock
ಸುಷ್ಮಾ ಚಕ್ರೆ
|

Updated on: Feb 02, 2024 | 7:04 PM

Share

ಉಗುರು ಕಚ್ಚುವಿಕೆಯು ನಿಮ್ಮ ಉಗುರುಗಳ ಸುತ್ತಲಿನ ಚರ್ಮವನ್ನು ನೋಯುವಂತೆ ಮಾಡುತ್ತದೆ. ಇದು ಉಗುರುಗಳನ್ನು ಬೆಳೆಯುವಂತೆ ಮಾಡುವ ಅಂಗಾಂಶವನ್ನು ಹಾನಿಗೊಳಿಸುತ್ತದೆ. ಇದರಿಂದ ಉಗುರುಗಳು ಅಸಹಜವಾಗಿ ಕಾಣುತ್ತದೆ. ದೀರ್ಘಕಾಲದ ಉಗುರು ಕಚ್ಚುವಿಕೆಯು ನಿಮ್ಮ ಬಾಯಿಯಿಂದ ನಿಮ್ಮ ಬೆರಳುಗಳಿಗೆ ಮತ್ತು ನಿಮ್ಮ ಉಗುರುಗಳಿಂದ ನಿಮ್ಮ ಮುಖ ಮತ್ತು ಬಾಯಿಗೆ ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ರವಾನಿಸುವುದರಿಂದ ನೀವು ಸೋಂಕಿಗೆ ಗುರಿಯಾಗಬಹುದು.

ಉಗುರು ಕಚ್ಚುವಿಕೆಯನ್ನು ನಿಲ್ಲಿಸಲು ಪರಿಣಾಮಕಾರಿ ಮಾರ್ಗಗಳು ಇಲ್ಲಿವೆ…

– ನಿಮ್ಮ ಉಗುರುಗಳನ್ನು ಚಿಕ್ಕದಾಗಿ ಟ್ರಿಮ್ ಮಾಡಿ. ಇದು ಉಗುರುಗಳನ್ನು ಕಚ್ಚುವ ಪ್ರಲೋಭನೆಯನ್ನು ಕಡಿಮೆ ಮಾಡಿ, ಆರೋಗ್ಯಕರ ಉಗುರು ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಗಟ್ಟಿಯಾದ ಉಗುರುಗಳನ್ನು ಪಡೆಯಲು ಈ 8 ಆಹಾರ ಸೇವಿಸಿ

– ಉಗುರು ಕಚ್ಚುವಿಕೆಯನ್ನು ಚೂಯಿಂಗ್ ಗಮ್ ಅಥವಾ ತರಕಾರಿ, ಡ್ರೈಫ್ರೂಟ್​ ಮುಂತಾದ ಆರೋಗ್ಯಕರ ಅಭ್ಯಾಸಗಳೊಂದಿಗೆ ಬದಲಿಸಿ.

– ಉಗುರು ಕಚ್ಚುವ ಪ್ರಚೋದನೆಯನ್ನು ಕಡಿಮೆ ಮಾಡಲು ಒತ್ತಡ ನಿವಾರಣೆ ಮಾಡುವ ತಂತ್ರಗಳನ್ನು ರೂಢಿಸಿಕೊಳ್ಳಿ.

– ಉಗುರು ಕಚ್ಚುವಿಕೆಯನ್ನು ದೈಹಿಕವಾಗಿ ತಡೆಗಟ್ಟಲು ಕೈಗೆ ಗ್ಲೌಸ್​ಗಳನ್ನು ಧರಿಸುವುದನ್ನು ಅಥವಾ ಬೆರಳ ತುದಿಯಲ್ಲಿ ಬ್ಯಾಂಡೇಜ್​ಗಳನ್ನು ಬಳಸುವುದನ್ನು ಮರೆಯಬೇಡಿ.

– ಸ್ಟ್ರೆಸ್ ಬಾಲ್ ಮುಂತಾದ ಚಟುವಟಿಕೆಗಳಲ್ಲಿ ನಿಮ್ಮ ಕೈಗಳನ್ನು ತೊಡಗಿಸಿಕೊಳ್ಳಿ.

– ನಿಮ್ಮ ಉಗುರುಗಳಿಗೆ ಕಹಿ ರುಚಿಯ ನೇಲ್ ಪಾಲಿಷ್ ಅನ್ನು ಹಚ್ಚಿ. ಇದರಿಂದ ಉಗುರು ಕಚ್ಚುವ ಅಭ್ಯಾಸ ನಿಧಾನವಾಗಿ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ