National Civil Services Day 2024: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲರ ಬಗ್ಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು!

ಭಾರತ ದೇಶದ ವಿವಿಧ ಸಾರ್ವಜನಿಕ ಸೇವಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಿಸುವುದರ ಹಿಂದಿನ ಇತಿಹಾಸ ಹಾಗೂ ಮಹತ್ವ ಬಗೆಗಿನ ಮಾಹಿತಿಯು ಇಲ್ಲಿದೆ.

National Civil Services Day 2024: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲರ ಬಗ್ಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು!
Sardar Valla Bhai Patel
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 20, 2024 | 5:30 PM

ಒಂದು ದೇಶದ ಅಭಿವೃದ್ಧಿಯತ್ತ ಸಾಗಲು ಹಾಗೂ ಆಡಳಿತವು ಉತ್ತಮ ರೀತಿಯಲ್ಲಿ ನಡೆಯಲು ನಾಗರಿಕ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸ ಮಾಡುವುದು ಬಹಳ ಮುಖ್ಯ. ನಾಗರಿಕ ಸೇವಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವೈಖರಿಯನ್ನು ಗುರುತಿಸುವ ಉದ್ದೇಶದಿಂದ ಈ ದಿನವು ಹೊಂದಿದೆ.

ರಾಷ್ಟ್ರೀಯ ನಾಗರಿಕ ಸೇವೆಗಳ ದಿನದ ಇತಿಹಾಸ:

ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 1947 ರಲ್ಲಿ ನವದೆಹಲಿಯ ಮೆಟ್‌ಕಾಫ್ ಹೌಸ್‌ನಲ್ಲಿ ಆಡಳಿತಾತ್ಮಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ದಿನದ ಸವಿನೆನಪಿಗಾಗಿ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಮೊದಲ ಬಾರಿಗೆ 2006 ರಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ಈ ದಿನವನ್ನು ಆಚರಿಸಲಾಯಿತು.

ರಾಷ್ಟ್ರೀಯ ನಾಗರಿಕ ಸೇವೆಗಳ ದಿನದ ಮಹತ್ವ:

ರಾಷ್ಟ್ರೀಯ ನಾಗರಿಕ ಸೇವಾ ದಿನವು ರಾಷ್ಟ್ರದ ಸೇವೆಗಾಗಿ ನಾಗರಿಕ ಸೇವಾ ವರ್ಗದ ಅಧಿಕಾರಿಗಳ ಕಾರ್ಯವನ್ನು ಗುರುತಿಸಲು ಇರುವ ದಿನವಾಗಿದೆ. ಸಾರ್ವಜನಿಕ ಸೇವಾ ಇಲಾಖೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು, ಉತ್ತಮ ಆಡಳಿತವನ್ನು ನೀಡುವಲ್ಲಿ ಅವರ ನಿರಂತರ ಪರಿಶ್ರಮವನ್ನು ಶ್ಲಾಘಿಸುವ ಮೂಲಕ ಅಂತಹವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುವ ಕೆಲಸವಾಗುತ್ತದೆ.

ಇದನ್ನೂ ಓದಿ: Summer Health: ಭಾರತದಲ್ಲಿ ಉಷ್ಣದ ಅಲೆಯ ಹೆಚ್ಚಳ; ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ತಡೆಯುವ 5 ಮಾರ್ಗಗಳಿವು

ಸರ್ದಾರ್ ವಲ್ಲಭಭಾಯಿ ಪಟೇಲರ ಬಗ್ಗೆ ಕುತೂಹಲಕಾರಿ ವಿಚಾರಗಳು:

  • ಅಸಹಕಾರ ಚಳುವಳಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಭಾರತದಾದಂತ್ಯ ಪ್ರಯಾಣಿಸಿ ಸುಮಾರು 300,000 ಸದಸ್ಯರನ್ನು ನೇಮಿಸಿಕೊಂಡು, ಪಕ್ಷದ ನಿಧಿಗಾಗಿ 1.5 ಮಿಲಿಯನ್‌ಗಿಂತಲೂ ಹೆಚ್ಚು ಹಣವನ್ನು ಸಂಗ್ರಹಿಸಿದ್ದರು.
  • ಮಹಾತ್ಮಾ ಗಾಂಧಿಯವರ ಸೆರೆವಾಸದ ಅವಧಿಯಲ್ಲಿ ಸರ್ದಾರ್ ಪಟೇಲ್ ಅವರು 1923 ರಲ್ಲಿ ಸತ್ಯಾಗ್ರಹ ಚಳುವಳಿಯ ನೇತೃತ್ವ ವಹಿಸಿ ಸ್ವಾತಂತ್ರ ಹೋರಾಟಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.
  • ಸರ್ದಾರ್ ಪಟೇಲ್ ಅವರು ಭಾರತೀಯ ಆಡಳಿತ ಸೇವೆಗಳಲ್ಲಿ ಅಳಿಸಲಾಗದ ಛಾಪು ಮೂಡಿಸಿದರು. ಅವರ ನಾಯಕತ್ವವು ದೇಶದ ಆಡಳಿತಾತ್ಮಕ ಚೌಕಟ್ಟನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ, ‘ಭಾರತದ ನಾಗರಿಕ ಸೇವಕರ ಪೋಷಕ ಸಂತ’ ಎಂಬ ಬಿರುದನ್ನು ತಂದುಕೊಟ್ಟಿತು.
  • 1928 ರಲ್ಲಿ ಬಾರ್ಡೋಲಿ ಸತ್ಯಾಗ್ರಹದ ಸಮಯದಲ್ಲಿ ಮಹಿಳೆಯರು ವಲ್ಲಭಭಾಯಿ ಪಟೇಲ್ ಅವರಿಗೆ ಮೊದಲ ಬಾರಿಗೆ ‘ಸರ್ದಾರ್’ ಎಂಬ ಬಿರುದನ್ನು ನೀಡಿದರು.
  • ಸರ್ದಾರ್ ಪಟೇಲ್ ಅವರಿಗೆ ಮರಣೋತ್ತರವಾಗಿ 1991 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಯಿತು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ