
ಎಲ್ಲರಿಗೂ ಕೂಡ ತಿಳಿದಿರುವಂತೆ ಒಂದು ಕೈಯಲ್ಲಿ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ. ಹೀಗಾಗಿ ಎರಡು ಕೈ ಸೇರಿದರೇನೇ ಚಪ್ಪಾಳೆ. ಅದೇ ರೀತಿ ಒಂದು ದೇಶ (country) ವು ಅಭಿವೃದ್ಧಿಯತ್ತ ಸಾಗಬೇಕೆಂದರೆ ಪ್ರತಿಯೊಂದು ಇಲಾಖಗಳ ಪಾತ್ರ ದೊಡ್ಡದು. ದೇಶದ ಆಡಳಿತವು ಸರಿಯಾದ ರೀತಿಯಲ್ಲಿ ನಡೆಯಬೇಕಾದರೆ ನಾಗರಿಕ ಸೇವಾ ಇಲಾಖೆ (civil service department) ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಅದಲ್ಲದೇ, ರಾಷ್ಟ್ರ ಸೇವೆಯಲ್ಲಿ ನಾಗರಿಕ ಸೇವಕರ ಕಠಿಣ ಪರಿಶ್ರಮ, ಸಮರ್ಪಣೆ, ಬದ್ಧತೆಯನ್ನು ಗುರುತಿಸುವುದು ಹಾಗೂ ನಾಗರಿಕ ಸೇವಕರನ್ನು ಗುರುತಿಸಲು, ಪ್ರಶಂಸಿಸಲು ಈ ದಿನವು ಸೂಕ್ತವಾಗಿದೆ. ಹೀಗಾಗಿ ಪ್ರತಿ ವರ್ಷ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನ (National Civil Services Day) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು 1947 ರಲ್ಲಿ ನವದೆಹಲಿಯ ಮೆಟ್‌ಕಾಫ್ ಹೌಸ್‌ನಲ್ಲಿ ಆಡಳಿತಾತ್ಮಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ದಿನದ ಸವಿನೆನಪಿಗಾಗಿ ಏಪ್ರಿಲ್ 21 ರಂದು ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆಚರಣೆಯು ಪ್ರಾರಂಭವಾಯಿತು. ಮೊದಲ ಬಾರಿಗೆ 2006 ರಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ಈ ದಿನವನ್ನು ಆಚರಿಸಲಾಯಿತು, ಅಂದಿನಿಂದ ಈ ದಿನದ ಆಚರಣೆಯು ಚಾಲ್ತಿಯಲ್ಲಿದೆ.
ಇದನ್ನೂ ಓದಿ : Garlic Pickle: ನಾಲಿಗೆ ರುಚಿ ಹೆಚ್ಚಿಸೋದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ ಈ ಬೆಳ್ಳುಳ್ಳಿ ಉಪ್ಪಿನಕಾಯಿ
ದೇಶದ ಅಭಿವೃದ್ಧಿಗೆ ಸಾರ್ವಜನಿಕ ಸೇವಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಗರಿಕ ಸೇವಕರ ಕೆಲಸವನ್ನು ಗುರುತಿಸಲು ಹಾಗೂ ಅವರ ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಉತ್ತಮ ಆಡಳಿತವನ್ನು ನೀಡಿದ ನಾಗರಿಕ ಸೇವಕರನ್ನು ಗುರುತಿಸಿ ಗೌರವ ಸಲ್ಲಿಸಲಾಗುತ್ತದೆ. ಹೌದು, ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಸೇವೆಗೈದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾರೆ. ಅದರೊಂದಿಗೆ ಈ ದಿನದಂದು ದೇಶದಾದಂತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ