AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Doctors’ Day 2023: ವೈದ್ಯೋ ನಾರಾಯಣೋ ಹರಿಃ; ಜೀವಗಳನ್ನು ಉಳಿಸುವ ವೈದ್ಯರೇಕೆ ದೇವರ ಸಮಾನ

ಸೈನಿಕರು ಗಡಿಗಳನ್ನು ರಕ್ಷಿಸಿದರೆ, ವೈದ್ಯರನ್ನು ರೋಗಗಳ ವಿರುದ್ಧ ಹೋರಾಡುವ ಮತ್ತು ಅಸಂಖ್ಯಾತ ವ್ಯಕ್ತಿಗಳ ಜೀವಗಳನ್ನು ಉಳಿಸುವ ಸೈನಿಕರು ಎಂದು ಪರಿಗಣಿಸಲಾಗುತ್ತದೆ.

National Doctors’ Day 2023: ವೈದ್ಯೋ ನಾರಾಯಣೋ ಹರಿಃ; ಜೀವಗಳನ್ನು ಉಳಿಸುವ ವೈದ್ಯರೇಕೆ ದೇವರ ಸಮಾನ
National Doctors’ Day 2023
ಅಕ್ಷತಾ ವರ್ಕಾಡಿ
|

Updated on:Jul 01, 2023 | 10:54 AM

Share

ಪ್ರತಿ ವರ್ಷ ಜುಲೈ 1 ರಂದು, ಭಾರತವು ಗೌರವಾನ್ವಿತ ಡಾ. ಬಿಧನ್ ಚಂದ್ರ ರಾಯ್ ಅವರಿಗೆ ಗೌರವ ಸಲ್ಲಿಸಲು ರಾಷ್ಟ್ರೀಯ ವೈದ್ಯರ ದಿನ(National Doctors’ Day) ವನ್ನು ಆಚರಿಸಲಾಗುತ್ತದೆ. ಅವರು ಹೆಸರಾಂತ ವೈದ್ಯರು ಮಾತ್ರವಲ್ಲದೆ ಒಬ್ಬ ಪ್ರತಿಷ್ಠಿತ ರಾಜಕಾರಣಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಸೈನಿಕರು ಗಡಿಗಳನ್ನು ರಕ್ಷಿಸಿದರೆ, ವೈದ್ಯರನ್ನು ರೋಗಗಳ ವಿರುದ್ಧ ಹೋರಾಡುವ ಮತ್ತು ಅಸಂಖ್ಯಾತ ವ್ಯಕ್ತಿಗಳ ಜೀವಗಳನ್ನು ಉಳಿಸುವ ಸೈನಿಕರು ಎಂದು ಪರಿಗಣಿಸಲಾಗುತ್ತದೆ. ವೈದ್ಯರು ಸಮಾಜದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಮತ್ತು ಅವರ ನಿಸ್ವಾರ್ಥ ಸಮರ್ಪಣೆಯನ್ನು ಅಂಗೀಕರಿಸುವುದು ಮತ್ತು ಅವರ ತ್ಯಾಗವನ್ನು ಗೌರವಿಸುವ ಸಾಧನವಾಗಿ ಈ ದಿನವನ್ನು ಸ್ಮರಿಸುವುದು ಬಹಳ ಮುಖ್ಯ.

ವೈದ್ಯೋ ನಾರಾಯಣೋ ಹರಿಃ:

‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಅಂದರೆ ವೈದ್ಯರನ್ನು ಭಗವಂತ ನಾರಾಯಣನ ರೂಪವಾಗಿ ನೋಡಬೇಕು ಎಂಬ ಮಾತಿದೆ. ಆತನು ರೋಗಿಯ ರೋಗವನ್ನು ಪರಿಹರಿಸುವಾತ. ಮುಚ್ಚುಮರೆ ಮಾಡದೇ ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ಕೇವಲ ವೈದ್ಯನ ಮುಂದೊಂದೇ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಕೊರೊನಾ ಮಹಾಮಾರಿ. ಜಗತ್ತನ್ನು ತೀವ್ರವಾಗಿ ಬೆಚ್ಚಿಬೀಳಿಸಿದ ಈ ಸಾಂಕ್ರಾಮಿಕ ಸಮಯದಲ್ಲಿ, ವೈದ್ಯರು ಮತ್ತು ದಾದಿಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸಿದ್ದಾರೆ. ಇದಲ್ಲದೇ ಎಷ್ಟೋ ಕುಟುಂಬಗಳ ಕಣ್ಣೀರು ಒರೆಸಿದ್ದಾರೆ.

ಇದನ್ನೂ ಓದಿ: ಶೌಚಾಲಯದಲ್ಲಿ ಸ್ಮಾರ್ಟ್ ಫೋನ್ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸಮಸ್ಯೆ ನಿಮ್ಮಲ್ಲೂ ಕಂಡುಬರಬಹುದು

ಸಾಂಕ್ರಾಮಿಕ ರೋಗವು ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಅನೇಕರಿಗೆ ದುಃಖವನ್ನು ನೀಡಿದರೆ, ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಪ್ರಯತ್ನವು ಅನೇಕ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಮತ್ತು ಆ ಮೂಲಕ ಮರಣ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ. ಭಗವಂತ ನಾರಾಯಣನ ರೂಪವಾಗಿ ಕಣ್ಣಿಗೆ ಕಂಡ ದೇವರುಗಳಿವರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:51 am, Sat, 1 July 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?