National Doctors Day: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

National Doctors Day: ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನ! ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ
National Doctors Day
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Jun 30, 2024 | 11:01 AM

‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆತನು ರೋಗಿಯ ರೋಗವನ್ನು ಪರಿಹರಿಸುವಾತ. ವೈದ್ಯ ಕೇವಲ ರೋಗ ಪರಿಹಾರಕನಾಗಿರದೇ ರೋಗಿಯ ಸಹಚಿಂತಕನೂ ಆಗಿರುತ್ತಾನೆ. ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೊಲಿಸಲಾಗುತ್ತದೆ. ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ವೈದ್ಯರ ದಿನದ ಇತಿಹಾಸ :

ಭಾರತದಲ್ಲಿ 1991 ರಲ್ಲಿ ವೈದ್ಯರ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು. ಈ ದಿನವನ್ನು ಬಿ ಸಿ ರಾಯ್ ಅವರು ವೈದ್ಯಕೀಯ ರಂಗಕ್ಕೆ ನೀಡಿದ ಅಮೋಘ ಕೊಡುಗೆಗಳನ್ನು ನೆನಯಲು ಮತ್ತು ಪ್ರತಿಯೊಬ್ಬ ವೈದ್ಯರಿಗೂ ಗೌರವ ಸಲ್ಲಿಸಲು ಆಚರಣೆ ಮಾಡಲಾಗುತ್ತದೆ. ಡಾ. ಬಿಧನ್ ಚಂದ್ರ ರಾಯ್ ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಮಂತ್ರಿ, ಹಾಗೂ ಶೇಷ್ಠ ವೈದ್ಯರು. ಅವರು ಜುಲೈ 1, 1882 ರಂದು ಪಶ್ಚಿಮ ಬಂಗಾಳದಲ್ಲಿ ಜನಿಸಿದರು. ಜುಲೈ 1,1962 ರಲ್ಲಿ ಮರಣ ಹೊಂದಿದರು. ಅವರ ಜನನ ಮತ್ತು ಮರಣ ದಿನ ಜುಲೈ 1, ಆದ್ದರಿಂದ ಈ ದಿನವನ್ನು, ಅವರ ಗೌರವಾರ್ಥವಾಗಿ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: Microplastics: ಗರ್ಭಿಣಿಯರಲ್ಲಿ ಹೆಚ್ಚುತ್ತಿವೆ ಡೇಂಜರಸ್​​ ಮೈಕ್ರೋಪ್ಲಾಸ್ಟಿಕ್​ ಕಣಗಳು

ರಾಷ್ಟ್ರೀಯ ವೈದ್ಯರ ದಿನದ ಮಹತ್ವ:

ರಾಷ್ಟ್ರೀಯ ವೈದ್ಯರ ದಿನದಂದು, ವೈದ್ಯರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ನಮ್ಮ ಜೀವನಕ್ಕೆ ವೈದ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಲಾಗುತ್ತದೆ. ಹಾಗಾಗಿ ಈ ದಿನ ಅನೇಕ ಕಡೆಗಳಲ್ಲಿ ವೈದ್ಯರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಈ ವಿಶೇಷ ದಿನವನ್ನು ಜನರ ಸೇವೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುವ ಆರೋಗ್ಯ ಕಾರ್ಯಕರ್ತರಿಗೆ ಗೌರವ ಸಲ್ಲಿಸಲಾಗುತ್ತದೆ. ನೀವು ಕೂಡ ನಿಮ್ಮ ಬದುಕಿಗೆ ಮತ್ತೆ ಜೀವ ತುಂಬಿದ ವೈದ್ಯರಿಗೆ ಈ ದಿನ ಧನ್ಯವಾದ ಹೇಳಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್