AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Education Day 2026: ಶಿಕ್ಷಣದಿಂದ ವ್ಯಕ್ತಿತ್ವ ವಿಕಸನ, ದೇಶದ ಅಭಿವೃದ್ಧಿ ಸಾಧ್ಯ

ಶಿಕ್ಷಣವು ಮೂಲಭೂತ ಹಕ್ಕಾಗಿದ್ದು, ಇದು ಒಬ್ಬ ವ್ಯಕ್ತಿಯ ಜೀವನವನ್ನು, ಸಮಾಜವನ್ನು ಸರಿಯಾದ ದಿಕ್ಕಿನಲ್ಲಿ ರೂಪಿಸುವ ಸಾಮರ್ಥ್ಯವನ್ನು ಹೊಂದಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯ ಮತ್ತು ವ್ಯಕ್ತಿತ್ವವನ್ನು ಅಭಿವೃದ್ದಿಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ನವೆಂಬರ್‌ 11 ರಂದು ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಇದೇ ದಿನದಂದು ಏಕೆ ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ ಎಂಬುದನ್ನು ತಿಳಿಯೋಣ ಬನ್ನಿ.

National Education Day 2026: ಶಿಕ್ಷಣದಿಂದ ವ್ಯಕ್ತಿತ್ವ ವಿಕಸನ, ದೇಶದ ಅಭಿವೃದ್ಧಿ ಸಾಧ್ಯ
ರಾಷ್ಟ್ರೀಯ ಶಿಕ್ಷಣ ದಿನImage Credit source: Unsplash
ಮಾಲಾಶ್ರೀ ಅಂಚನ್​
|

Updated on:Nov 11, 2026 | 6:59 AM

Share

ಶಿಕ್ಷಣವು (Education) ಮೂಲಭೂತ ಹಕ್ಕಾಗಿದ್ದು, ಇದು ವ್ಯಕ್ತಿಯ ಜೀವನವನ್ನು ರೂಪಿಸುವಲ್ಲಿ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಶಿಕ್ಷಣದ ಗುರಿ ಕೇವಲ ಸಾಕ್ಷರತೆಗೆ ಸೀಮಿತವಾಗಿಲ್ಲ, ವ್ಯಕ್ತಿಯ ವ್ಯಕ್ತಿತ್ವ  ನಿರ್ಮಾಣ, ಸಮಾಜ ಬದಲಾವಣೆ, ದೇಶವನ್ನು ಅಭಿವೃದ್ಧಿಯತ್ತ ಸಾಗಿಸುವ ಗುರಿಯನ್ನು ಹೊಂದಿದೆ. ಶಿಕ್ಷಣದ ಈ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಕ್ಷೇತ್ರಕ್ಕೆ ಅತ್ಯದ್ಭುತ ಕೊಡುಗೆಗಳನ್ನು ನೀಡಿದ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್‌ ಕಲಾಂ ಆಜಾದ್‌ ಅವರ ಜನ್ಮ ಜಯಂತಿಯಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಶಿಕ್ಷಣ ದಿನದ ಇತಿಹಾಸವೇನು?

ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ಜಯಂತಿಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.  ಮೌಲಾನಾ ಅಬುಲ್ ಕಲಾಂ ಆಜಾದ್ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ, ಭಾರತೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ  ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ, ಇವರ ಈ ಅತ್ಯಮೂಲ್ಯ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2008 ರಲ್ಲಿ ಆಜಾದ್  ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವಾಗಿ ಆಚರಿಸಲು ಘೋಷಿಸಿತು. ಅಂದಿನಿಂದ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ.

ಮೌಲಾನ ಅಬುಲ್ ಕಲಾಂ ಆಜಾದ್ ಯಾರು?

ಭಾರತವು ಇಂದು ದೃಢವಾದ  ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ, ಆ ವ್ಯವಸ್ಥೆಗೆ  ಅಡಿಪಾಯವನ್ನು ಹಾಕಿದ ಕೀರ್ತಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಲ್ಲುತ್ತದೆ.   ಸಮಾಜವನ್ನು ಪರಿವರ್ತಿಸಲು ಮತ್ತು ಜನಸಾಮಾನ್ಯರನ್ನು ಸಬಲಗೊಳಿಸು ಪ್ರಬಲವಾದ ಅಸ್ತ್ರ ಶಿಕ್ಷಣ ಎಂದು  ದೃಢವಾಗಿ ನಂಬಿದ್ದ ಆಜಾದ್,  ಭಾರತದ ಮೊದಲ ಶಿಕ್ಷಣ ಸಚಿವರಾಗಿ ದೇಶದ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅಡಿಪಾಯ ಹಾಕಿದರು. ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ನೇಮಕಗೊಂಡ ಇವರು ತಮ್ಮ ಅಧಿಕಾರವಧಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಮತ್ತು ಎಲ್ಲರಿಗೂ ಶಿಕ್ಷಣವನ್ನು ದೊರೆಯುವಂತೆ ಮಾಡುವಲ್ಲಿ ಗಮನಾರ್ಹವಾಗಿ ಕೊಡುಗೆಯನ್ನು ನೀಡಿದ್ದಾರೆ.

ಮೌಲಾನ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣವನ್ನು ಭಾರತದ ಅಭಿವೃದ್ಧಿಯ ಆಧಾರವೆಂದು ಪರಿಗಣಿಸಿದ್ದರು ಮತ್ತು ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯ ಮತ್ತು ಉಚಿತ ಮಾಡಲು ಪ್ರಸ್ತಾಪಿಸಿದರು. ಇದಲ್ಲದೆ  ಅವರು ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರಿಸರ್ಚ್ (ICSSR), ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸ್ಥಾಪನೆ ಮಾಡಿದರು.  ಹೀಗೆ ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ದಿನದ ಮಹತ್ವವೇನು?

  • ಗುಣಮಟ್ಟದ ಶಿಕ್ಷಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು.
  • ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿನ ಪ್ರಗತಿ ಮತ್ತು ಸವಾಲುಗಳನ್ನು ಪ್ರತಿಬಿಂಬಿಸುವುದು.
  • ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ಡಿಜಿಟಲ್ ಕಲಿಕೆಯನ್ನು ಉತ್ತೇಜಿಸುವುದು.
  • ಎಲ್ಲರಿಗೂ ಶಿಕ್ಷಣದ ಹಕ್ಕನ್ನು ಎತ್ತಿಹಿಡಿಯಲು ನೀತಿ ನಿರೂಪಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು.

ಇದನ್ನೂ ಓದಿ: ಸಾರ್ವಜನಿಕ ಸಾರಿಗೆಯನ್ನು ಬಳಸುವುದರಿಂದ ಈ ಎಲ್ಲಾ ಪ್ರಯೋಜನಗಳು ಲಭಿಸುತ್ತವೆ

ಶಿಕ್ಷಣ ಏಕೆ ಮುಖ್ಯ? ಶಿಕ್ಷಣದ ಮಹತ್ವವೇನು?

  • ಶಿಕ್ಷಣವು ಸಮಾಜದ ಪ್ರಗತಿಗೆ ಅಡಿಪಾಯವಾಗಿದೆ, ನಮ್ಮ ಭವಿಷ್ಯವನ್ನು ನಿರ್ಮಿಸುವ ಆಧಾರಸ್ತಂಭವಾಗಿದೆ. ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ಇದು ನಮ್ಮ ಜ್ಞಾನವನ್ನು ವಿಸ್ತರಿಸಲು, ಜೀವನದ ಸವಾಲುಗಳನ್ನು ಅರ್ಥಮಾಡಿಕೊಳ್ಳಲು, ಅವುಗಳನ್ನು ಎದುರಿಸಲು ಮತ್ತು ಅಭಿವೃದ್ಧಿ ಹೊಂದಲು ನಮ್ಮನ್ನು ಸಿದ್ಧಪಡಿಸುತ್ತದೆ. ಆತ್ಮವಿಶ್ವಾಸವನ್ನು ನೀಡುತ್ತದೆ.
  • ಸಮಾಜದ ಒಟ್ಟಾರೆ ಅಭಿವೃದ್ಧಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣಕ್ಕಿರುವ ಶಕ್ತಿಯೇ ಅಂತಹದ್ದು, ಇದು  ಜ್ಞಾನ ಕೌಶಲ್ಯ, ವ್ಯಕ್ತಿತ್ವವನ್ನು ಅಭಿವೃದ್ದಿಪಡಿಸುವುದು ಮಾತ್ರವಲ್ಲದೆ ಒಬ್ಬ ವ್ಯಕ್ತಿಯ ಜೀವನವನ್ನು ಸಕಾರಾತ್ಮಕ ರೀತಿಯಲ್ಲಿ ಬದಲಾಯಿಸುವ ಶಕ್ತಿಶಾಲಿ ಅಸ್ತ್ರವಾಗಿದೆ. ಅಲ್ಲದೆ ಬಡತನವನ್ನು ಹೋಗಲಾಡಿಸುವಲ್ಲಿ, ಸುಸ್ಥಿರ ಸಮಾಜವನ್ನು ರೂಪಿಸುವಲ್ಲಿ, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹುದೊಡ್ಡ ಪಾತ್ರವನ್ನು ವಹಿಸುತ್ತದೆ.
  • ಬದುಕು ಕಟ್ಟಿಕೊಳ್ಳಲು ಮಾತ್ರವಲ್ಲ, ಮೌಲ್ಯಗಳನ್ನು ಕಲಿಯಲು ಶಿಕ್ಷಣ ಬೇಕಾಗುತ್ತದೆ. ಶಿಕ್ಷಣವು ಸ್ಥಿರತೆಯನ್ನು ಒದಗಿಸುತ್ತದೆ, ಉತ್ತಮ ಉದ್ಯೋಗವನ್ನು ಪಡೆಯಲು ಸಹಾಯ ಮಾಡುವ ಮೂಲಕ ಹಣಕಾಸಿನ ಭದ್ರತೆಯನ್ನು ಒದಗಿಸುತ್ತದೆ. ಶಿಕ್ಷಣವು ಸ್ವಾವಲಂಬನೆಗೆ ಅವಕಾಶ ನೀಡುತ್ತದೆ. ಸಮಾಜದಲ್ಲಿ ನಡೆಯುವ ತಪ್ಪುಗಳು ಮತ್ತು ಅನ್ಯಾಯಗಳನ್ನು ಪ್ರಶ್ನಿಸುವ, ಅದರ ವಿರುದ್ಧ ಧ್ವನಿ ಎತ್ತುವ ಶಕ್ತಿಯನ್ನು ಶಿಕ್ಷಣ ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 am, Wed, 11 November 26

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಮಲ್ಲೇಶ್ವರಂ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದಲ್ಲಿ ಜೀವ ಭಯ
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಸಂಸತ್ ಭವನದಲ್ಲಿ ಮಹನೀಯರ ಫೋಟೋ ಜತೆ ಟಿಪ್ಪು ಫೋಟೋ ಇಡಬೇಕು: ವಾಟಾಳ್ ನಾಗರಾಜ್
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ