National Fish Farmer’s Day 2024 : ರಾಷ್ಟ್ರೀಯ ಮೀನು ಕೃಷಿಕರ ದಿನವನ್ನು ಭಾರತೀಯ ವಿಜ್ಞಾನಿಗಳಿಗೆ ಸಮರ್ಪಿಸುವುದು ಏಕೆ? ಇಲ್ಲಿದೆ ಮಾಹಿತಿ

ಕರಾವಳಿಯ ಪ್ರಮುಖ ಆದಾಯದ ಮೂಲಗಳಲ್ಲಿ ಮೀನುಗಾರಿಕೆ ಕೂಡ ಒಂದು. ಈ ಉದ್ಯಮವನ್ನು ನಂಬಿಕೊಂಡೇ ಅದೆಷ್ಟೋ ಕುಟುಂಬಗಳು ಬದುಕುತ್ತಿದ್ದಾರೆ. ಈ ಮೀನು ಕೃಷಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 10 ರಂದು ರಾಷ್ಟ್ರೀಯ ಮೀನು ಕೃಷಿಕರ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

National Fish Farmer’s Day 2024 : ರಾಷ್ಟ್ರೀಯ ಮೀನು ಕೃಷಿಕರ ದಿನವನ್ನು ಭಾರತೀಯ ವಿಜ್ಞಾನಿಗಳಿಗೆ ಸಮರ್ಪಿಸುವುದು ಏಕೆ? ಇಲ್ಲಿದೆ ಮಾಹಿತಿ
National Fish Farmer’s Day 2024
Follow us
| Updated By: ಅಕ್ಷತಾ ವರ್ಕಾಡಿ

Updated on: Jul 09, 2024 | 6:21 PM

ಕರಾವಳಿಗರ ಜೀವನಾಡಿ ಮೀನುಗಾರಿಕೆ ಇಂದು ಬಹುದೊಡ್ಡ ಉದ್ಯಮವಾಗಿ ಬೆಳೆದಿದೆ. ಭಾರತದಿಂದ ಐರೋಪ್ಯ ದೇಶಗಳು, ಬ್ಯಾಂಕಾಕ್, ಥೈಲ್ಯಾಂಡ್, ಮಲೇಷ್ಯಾ, ಕೊರಿಯಾ ಸೇರಿದಂತೆ ಮತ್ತಿತ್ತರ ದೇಶಗಳಿಗೆ ಮೀನನ್ನು ರಫ್ತು ಮಾಡಲಾಗುತ್ತಿದೆ. ಈ ಮೀನು ಸಾಗಣಿಕೆಯಲ್ಲಿ ತೊಡಗಿಸಿಕೊಂಡಿರುವವರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ಪ್ರತಿ ವರ್ಷ ಜುಲೈ 10 ರಂದು ರಾಷ್ಟ್ರೀಯ ಮೀನು ಕೃಷಿಕರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ಮೀನು ಕೃಷಿಕರ ದಿನದ ಇತಿಹಾಸ:

ಡಾ.ಹೀರಾಲಾಲ್ ಚೌಧುರಿ ಮತ್ತು ಡಾ.ಕೆ.ಎಚ್.ಆಲಿಕುನ್ನಿ ಎಂಬಿಬ್ಬರು ವಿಜ್ಞಾನಿಗಳು ಐವತ್ತರ ದಶಕದ ಅಂತ್ಯದಲ್ಲಿ ಮೀನಿನ ಪಿಟ್ಯುಟರಿ ಗ್ರಂಥಿಯಿಂದ ತಯಾರಿಸಿದ ಹಾಮೋನನ್ನು ಬಳಸಿ ಕೃತಕ ವಿಧಾನದಿಂದ ಗೆಂಡೆ ಮೀನುಗಳನ್ನು ವಂಶಾಭಿವೃದ್ಧಿ ಮಾಡಿಸಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಭಾರತೀಯ ಮೀನುಗಾರಿಕಾ ರಂಗದಲ್ಲಿ ಈ ಹೊಸಕ್ರಾಂತಿಗೆ ನಾಂದಿ ಹಾಡಿದ ಮಹಾನ್ ವಿಜ್ಞಾನಿಗಳನ್ನು ನೆನಪಿಸುವುದಾಗಿದೆ. ಹೀಗಾಗಿ ಭಾರತ ಸರ್ಕಾರದ ಆದೇಶಾನ್ವಯ ಪ್ರತಿ ವರ್ಷ ಜುಲೈ 10ರಂದು ದೇಶಾದಾದ್ಯಂತ ‘ರಾಷ್ಟ್ರೀಯ ಮೀನು ಕೃಷಿಕರ ದಿನ’ವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಮೀನು ಕೃಷಿಕರ ದಿನದ ಥೀಮ್:

ಮೀನು ಸಾಕಣಿಕೆ, ಸಮುದ್ರ ಮತ್ತು ಜಲಚರಗಳ ಪ್ರಾಮುಖ್ಯತೆ, ನೀರಿನ ಸಂರಕ್ಷಣೆ, ಹವಾಮಾನ ಬದಲಾವಣೆಯ ಪರಿಣಾಮ, ಮೀನು ತಂತ್ರಜ್ಞಾನದ ಅಭಿವೃದ್ಧಿ ಮತ್ತು ಮೀನು ಕೃಷಿಕರ ಉನ್ನತಿಯ ಥೀಮ್ ನಡಿ ಈ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಇದು ಕರಾವಳಿ ಸ್ಟೈಲ್​​ನ ಪತ್ರೊಡೆ, ಇದನ್ನು ಮಾಡುವುದು ತುಂಬಾ ಸುಲಭ

ರಾಷ್ಟ್ರೀಯ ಮೀನು ಕೃಷಿಕರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಮೀನು ಸಾಕಾಣಿಕೆ ಮತ್ತು ಮೀನುಗಾರಿಕೆಯಲ್ಲಿ ವೈಜ್ಞಾನಿಕ ವಿಧಾನಗಳು, ತಂತ್ರಗಳ ಬಳಕೆಯನ್ನು ಉತ್ತೇಜಿಸುವುದಾಗಿದೆ. ಆಧುನಿಕ ತಂತ್ರಜ್ಞಾನ ಮತ್ತು ಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸುವುದು. ಮೀನು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ದೇಶದ ಆಹಾರ ಭದ್ರತೆಯನ್ನು ಬಲಪಡಿಸುವುದು ದಿನದ ಉದ್ದೇಶವಾಗಿದೆ. ಈ ದಿನದಂದು ಮೀನು ಕೃಷಿಯಲ್ಲಿ ಹೊಸ ತಂತ್ರಗಳು, ಸರ್ಕಾರದ ನೀತಿಗಳು ಮತ್ತು ರೈತರ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕಾರ್ಯಕ್ರಮಗಳು, ಕಾರ್ಯಾಗಾರಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮಗಳು ಮೀನು ಕೃಷಿಕರಿಗೆ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್