ಪ್ರತಿಯೊಂದು ರಾಷ್ಟ್ರಕ್ಕೂ ತನ್ನದೇ ಆದ ಧ್ವಜವನ್ನು ಹೊಂದಿದೆ. ಆದರೆ ನಮ್ಮ ಭಾರತದ ರಾಷ್ಟ್ರೀಯ ಧ್ವಜವು ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಕಡು ಹಸಿರು ಬಣ್ಣ ಹೊಂದಿದ್ದು, ತ್ರಿವರ್ಣ ಧ್ವಜವಾಗಿದೆ. ಬಿಳಿಭಾಗದ ಮಧ್ಯದಲ್ಲಿ ಅಶೋಕ ಚಕ್ರವನ್ನು ಹೊಂದಿದೆ. ರಾಷ್ಟ್ರವನ್ನು ಪ್ರತಿನಿಧಿಸುವ ಭಾರತೀಯ ಧ್ವಜದ ಬಗ್ಗೆ ಜನರಿಗೆ ಅರಿವು ಮೂಡಿಸಲು ಸಲುವಾಗಿ ಜುಲೈ 22 ರಂದು ರಾಷ್ಟ್ರೀಯ ಧ್ವಜ ಸ್ವೀಕಾರ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.
ತ್ರಿವರ್ಣಧ್ವಜ ಸ್ವೀಕರಿಸಿದ ದಿನವೇ ಜುಲೈ 22, 1947. ಈ ತ್ರಿವರ್ಣ ಧ್ವಜವನ್ನು ಭಾರತದ ರಾಷ್ಟ್ರೀಯ ಧ್ವಜವನ್ನಾಗಿ ಸ್ವೀಕರಿಸಲಾಯಿತು. ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುನ್ನವೇ ನಮ್ಮ ನಾಯಕರು ವಿಶ್ವಕ್ಕೆ ರಾಷ್ಟ್ರಧ್ವಜ ಹೇಗಿರಲಿದೆ ಎಂದು ಸ್ಪಷ್ಟಪಡಿಸಿದ್ದರು. ಹೀಗಾಗಿ 1947 ರ ಜುಲೈ 22 ರಂದು ಸಂವಿಧಾನ ಸಭೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಅಳವಡಿಸಿಕೊಂಡ ಸವಿ ನೆನಪಿಗಾಗಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಜನವರಿ 26, 2002ರಲ್ಲಿ ಧ್ವಜವನ್ನು ಹಾರಿಸುವ ನಿಯಮಗಳಲ್ಲಿ ಸ್ವಲ್ಪ ಬದಲಾವಣೆಗಳನ್ನು ತಂದಿದೆ. ಧ್ವಜದ ನಿಯಮಗಳನ್ನು ಪಾಲಿಸುವ ಮೂಲಕ ಧ್ವಜವನ್ನು ಹಾರಿಸಬಹುದಾಗಿದೆ.
ಇದನ್ನೂ ಓದಿ: ಜಗತ್ತಿನಾದ್ಯಂತ 500ಕ್ಕೂ ಹೆಚ್ಚು ಮಾವಿನ ತಳಿಗಳಿವೆ! ಯಾವುವು?
ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ