National Girl Child Day: ಇಂದೇ ಯಾಕೆ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಗುತ್ತದೆ?

ರಾಷ್ಟ್ರೀಯ ಹೆಣ್ಣುಮಕ್ಕಳ ದಿನವು ಹೆಣ್ಣು ಮಗುವಿನ ವಿವಿಧ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ, ಲಿಂಗ ಭೇದವನ್ನು ತೊಡೆದುಹಾಕುತ್ತದೆ. ಹೆಣ್ಣುಮಕ್ಕಳ ಶಿಕ್ಷಣ, ಪೋಷಣೆ ಮತ್ತು ಆರೋಗ್ಯದ ಮಹತ್ವವನ್ನು ಒತ್ತಿಹೇಳುತ್ತದೆ.

National Girl Child Day: ಇಂದೇ ಯಾಕೆ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಗುತ್ತದೆ?
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on:Jan 24, 2024 | 11:51 AM

ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಶಿಕ್ಷಣ, ಆರೋಗ್ಯ ಮತ್ತು ಪೋಷಣೆಯಲ್ಲಿ ಸಮಾನ ಅವಕಾಶಗಳನ್ನು ಪ್ರತಿಪಾದಿಸುವುದಲ್ಲದೆ ಹೆಣ್ಣು ಮಗುವಿನ ಹಕ್ಕುಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ. ಬಾಲ್ಯ ವಿವಾಹ, ತಾರತಮ್ಯ ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದಂತಹ ಸಮಸ್ಯೆಗಳನ್ನು ಬಗೆಹರಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ಸರ್ಕಾರವು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮೂಲಕ ಪ್ರತಿ ಹೆಣ್ಣು ಮಗುವಿಗೆ ಸಮಾನತೆ ನೀಡಬೇಕು ಎಂಬ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದೆ. ಪ್ರತಿ ವರ್ಷ ಈ ದಿನ ಹೆಣ್ಣುಮಕ್ಕಳ ಸಬಲೀಕರಣದ ಸಂದೇಶವನ್ನು ಹರಡಲು ದೇಶದಾದ್ಯಂತ ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಗುತ್ತದೆ. ಈ ದಿನವು ಬೇಟಿ ಬಚಾವೋ, ಬೇಟಿ ಪಢಾವೋ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ) ಸೇರಿದಂತೆ ಭಾರತ ಸರ್ಕಾರ ನಡೆಸುವ ವಿವಿಧ ಅಭಿಯಾನಗಳು ಮತ್ತು ಕಾರ್ಯಕ್ರಮಗಳನ್ನು ಪ್ರಚಾರ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ನೈಸರ್ಗಿಕವಾಗಿ ಹೊಳೆಯುವ ತ್ವಚೆ ಪಡೆಯುವುದು ಹೇಗೆ?

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸ:

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಮೊದಲ ಬಾರಿಗೆ 2008ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಆರಂಭಿಸಿತು. ಅಂದಿನಿಂದ, ಪ್ರತಿ ವರ್ಷ ಭಾರತದಾದ್ಯಂತ ಸಾಮಾನ್ಯ ವಾರ್ಷಿಕ ಥೀಮ್‌ನೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಲಿಂಗ ಅಸಮಾನತೆ, ಶಿಕ್ಷಣ ಮಿತಿಗಳು, ಶಾಲೆ ಬಿಟ್ಟ ಹೆಣ್ಣುಮಕ್ಕಳು, ಆರೋಗ್ಯ ರಕ್ಷಣೆ, ಬಾಲ್ಯವಿವಾಹ ಮತ್ತು ಲಿಂಗ ಆಧಾರಿತ ಹಿಂಸಾಚಾರವನ್ನು ಎದುರಿಸುತ್ತಿರುವ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಸವಾಲುಗಳನ್ನು ಒಪ್ಪಿಕೊಳ್ಳುವ ಗುರಿಯನ್ನು ಈ ಕ್ರಮವು ಹೊಂದಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ 2024ರ ಥೀಮ್:

ಇಲ್ಲಿಯವರೆಗೆ 2024ರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಸರ್ಕಾರವು ಯಾವುದೇ ಥೀಮ್ ಅನ್ನು ಘೋಷಿಸಿಲ್ಲ. ‘ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು’ ಎಂಬುದು 2019ರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ವಿಷಯವಾಗಿತ್ತು. 2020ರ ಥೀಮ್ ‘ನನ್ನ ಧ್ವನಿ, ನಮ್ಮ ಭವಿಷ್ಯ’ ಎಂಬುದಾಗಿತ್ತು. ‘ಡಿಜಿಟಲ್ ಜನರೇಷನ್, ನಮ್ಮ ಪೀಳಿಗೆ’ ಎಂಬುದು 2021ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ವಿಷಯವಾಗಿತ್ತು

ಇದನ್ನೂ ಓದಿ: ನಿಮ್ಮ ಸಂಗಾತಿ ಜೊತೆ ಜಗಳವಾಡಿದಾಗ ಈ ತಪ್ಪನ್ನೆಂದೂ ಮಾಡಬೇಡಿ!

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಜನವರಿ 24ರಂದು ಏಕೆ ಆಚರಿಸಲಾಗುತ್ತದೆ?:

2015ರಲ್ಲಿ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ) ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯ ಮೂರೂ ಇಲಾಖೆಗಳು ಜಂಟಿಯಾಗಿ ಈ ದಿನವನ್ನು ಆಚರಿಸುತ್ತವೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಉದ್ದೇಶಗಳು:

– ಲಿಂಗ ಸಮಾನತೆಯನ್ನು ಉತ್ತೇಜಿಸುವುದು.

– ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು.

– ಹೆಣ್ಣು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಭಾರತದಲ್ಲಿ ಹುಡುಗಿಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಮಹತ್ವವನ್ನು ಹೊಂದಿದೆ. ಇದು ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಬೆಂಬಲದ ಮೂಲಕ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತದೆ.

ಇದರ ಪರಿಣಾಮವಾಗಿ ಈಗೀಗ ಹೆಚ್ಚಿನ ಹೆಣ್ಣುಮಕ್ಕಳು ಶಿಕ್ಷಣವನ್ನು ಪಡೆಯುವ ಪ್ರಮಾಣ ಹೆಚ್ಚಾಗುತ್ತಿದೆ. ಉನ್ನತ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಇದು ಹೆಚ್ಚಿನ ಸಾಕ್ಷರತೆಯ ಪ್ರಮಾಣಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ಬಾಲ್ಯವಿವಾಹ ಪ್ರಕರಣಗಳು ಕೂಡ ಕಡಿಮೆಯಾಗುತ್ತಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 am, Wed, 24 January 24

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ