National Girl Child Day 2025: ನಿಮ್ಮ ಮನೆಯ ಮುದ್ದಿನ ಮಗಳಿಗೆ ಈ ರೀತಿ ಶುಭಾಶಯ ಕೋರಿ ಹೆಣ್ಣು ಮಕ್ಕಳ ದಿನ ಆಚರಿಸಿ

ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು. ಅವರ ಶಿಕ್ಷಣ, ಆರೋಗ್ಯ, ಪೋಷಕಾಂಶಕ್ಕೆ ಸಂಬಂಧ ಪಟ್ಟ ಪ್ರಾಮುಖ್ಯತೆಯನ್ನು ತಿಳಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಹಾಗಾದ್ರೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

National Girl Child Day 2025: ನಿಮ್ಮ ಮನೆಯ ಮುದ್ದಿನ ಮಗಳಿಗೆ ಈ ರೀತಿ ಶುಭಾಶಯ ಕೋರಿ ಹೆಣ್ಣು ಮಕ್ಕಳ ದಿನ ಆಚರಿಸಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 24, 2025 | 9:46 AM

ಹೆಣ್ಣು ಸಂಸಾರದ ಕಣ್ಣು. ಮನೆಯ ನಂದಾ ದೀಪ. ಹೆಣ್ಣು ಮಕ್ಕಳು ಇರುವ ಮನೆಯೂ ಸದಾ ಬೆಳಗುತ್ತಿರುತ್ತದೆ. ಒಂದು ಕಾಲದಲ್ಲಿ ಅಡುಗೆ ಮನೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಕೈಯಾಡಿಸುತ್ತಿದ್ದಾಳೆ. ಸಾಧನೆಯ ಶಿಖರ ಏರಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅಸಮಾನತೆಗಳು, ಮಕ್ಕಳ ಹಕ್ಕುಗಳು, ಸ್ತ್ರೀ ಶಿಕ್ಷಣ, ಆರೋಗ್ಯ ಮತ್ತು ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷವು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶದ ಮಹತ್ವ ಸೇರಿದಂತೆ ಹಲವು ವಿಚಾರಗಳ ಬಗೆಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲು ಮುಂದಾಯಿತು. ಅಂದಿನಿಂದ ಪ್ರತಿ ವರ್ಷ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಶಿಕ್ಷಣ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವ ಹಾಗೂ ಆಚರಣೆ

ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವುದು. ಹೆಣ್ಣು ಶಿಶುಹತ್ಯೆ, ಲಿಂಗ ಅಸಮಾನತೆ ಹಾಗೂ ದೈಹಿಕ ದೌರ್ಜನ್ಯ ಸೇರಿದಂತೆ ಇನ್ನಿತರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದಾಗಿದೆ. ಸ್ತ್ರೀಯರ ಶಿಕ್ಷಣದ ಮಹತ್ವ, ಮಹಿಳೆಯರ ಆರೋಗ್ಯ ಮತ್ತು ಪೋಷಣೆಯ ಪ್ರಾಮುಖ್ಯತೆಯನ್ನು ಉತ್ತೇಜಿಸುವ ಉದ್ದೇಶವನ್ನು ಈ ದಿನವು ಹೊಂದಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಹೆಣ್ಣು ಮಗುವನ್ನು ಉಳಿಸಿ, ಬೇಟಿ ಬಚಾವೋ ಬೇಟಿ ಪಢಾವೋ, ಸುಕನ್ಯಾ ಸಮೃದ್ಧಿ ಯೋಜನೆ, ಹೆಣ್ಣು ಮಕ್ಕಳಿಗೆ ಉಚಿತ ಅಥವಾ ಅನುದಾನಿತ ಶಿಕ್ಷಣ, ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಹೆಣ್ಣು ಮಕ್ಕಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನದಂದು ದೇಶದೆಲ್ಲೆಡೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಹೆಣ್ಣು ಮಕ್ಕಳ ದಿನಕ್ಕೆ ಶುಭಾಶಯ ಕೋರಲು ಸಂದೇಶಗಳು ಇಲ್ಲಿವೆ

* ಪ್ರತಿ ಹೆಣ್ಣು ಮಗುವಿಗೆ ಗುಣಮಟ್ಟದ ಶಿಕ್ಷಣ ಮತ್ತು ಅವಕಾಶಗಳು ಸಿಗುವಂತಾಗಲಿ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು.

* ಹೆಣ್ಣು ನಿಮ್ಮ ಮನೆಯ ಬೆಳಕು, ಉಜ್ವಲ ನಾಳೆಗಾಗಿ ಹೆಣ್ಣುಮಕ್ಕಳಿಗೆ ಶಕ್ತಿ ತುಂಬಿ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು.

* ಹೆಣ್ಣುಮಕ್ಕಳೆಂದರೆ ಹೆತ್ತವರ ಪಾಲಿಗೆ ಶಾಶ್ವತವಾಗಿ ಅರಳುವ ಹೂವುಗಳು. ಹೆಣ್ಣು ಮಗುವು ಸಂತೋಷ ತರುತ್ತಾಳೆ. ಅವರು ಹುಡುಗನಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು.

* ಜೀವನದ ನಿಜವಾದ ಉಡುಗೊರೆಯೇ ಹೆಣ್ಣು. ಹೆಣ್ಣು ನಿಮ್ಮ ಮನೆಯನ್ನು ಮಾತ್ರವಲ್ಲ ಇನ್ನೊಬ್ಬರ ಮನೆಯನ್ನು ಬೆಳಗುತ್ತಾಳೆ. ಅವಳಿಲ್ಲದ ನಾಳೆಯೇ ಇಲ್ಲ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು.

* ಹೆಣ್ಣುಮಕ್ಕಳು ವಿದ್ಯಾವಂತರಾದಾಗ ಆ ದೇಶಗಳು ಬಲಿಷ್ಠವಾಗುತ್ತವೆ ಹಾಗೂ ಹೆಚ್ಚು ಸಮೃದ್ಧವಾಗುತ್ತವೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ