National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು?
ಸಮಾಜದಲ್ಲಿ ಇಂದಿಗೂ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಮನೆಯ ನಂದಾದೀಪ ಅಂತಾನೇ ಕರೆಸಿಕೊಳ್ಳುವ ಹೆಣ್ಣು ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲು, ಹಕ್ಕುಗಳು, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಹಿನ್ನೆಲೆಯ ಬಗ್ಗೆ ತಿಳಿಯೋಣ ಬನ್ನಿ.

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಇತಿಹಾಸವೇನು?
ಹೆಣ್ಣು ಮಕ್ಕಳ ಹಕ್ಕುಗಳು, ಕಲ್ಯಾಣ ಮತ್ತು ಸಬಲೀಕರಣವನ್ನು ಉತ್ತೇಜಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಭಾರತ ಸರ್ಕಾರವು 2008 ರಲ್ಲಿ ಪ್ರಾರಂಭಿಸಿತು. ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಹೆಣ್ಣು ಮಕ್ಕಳ ರಕ್ಷಣೆ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸುವುದು. ಅಲ್ಲದೆ ಈ ದಿನ ಲಿಂಗ ಅಸಮಾನತೆ, ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ ಇತ್ಯಾದಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಸವಾಲುಗಳನ್ನು ತೊಡೆದುಹಾಕುವ ಗುರಿಯನ್ನು ಹೊಂದಿದೆ.
ಜನವರಿ 24 ರಂದೇ ಏಕೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ?
ಹೆಣ್ಣು ಮಕ್ಕಳಿಗಾಗಿ ಸಕಾರಾತ್ಮಕ ಮನೋಭಾವ ಮತ್ತು ಸಮಾನ ಅವಕಾಶಗಳನ್ನು ಉತ್ತೇಜಿಸಲು ಭಾರತ ಸರ್ಕಾರವು 2008 ರಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಪ್ರಾರಂಭಿಸಿತು. ಭಾರತದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪ್ರಮಾಣವಚನ ಸ್ವೀಕರಿಸಿದ ದಿನದ ಸ್ಮರಣಾರ್ಥವಾಗಿ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮಹತ್ವವೇನು?
ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆ: ಹೆಣ್ಣುಮಕ್ಕಳ ಹಕ್ಕುಗಳನ್ನು ರಕ್ಷಿಸಲು ಮತ್ತು ಸಮಾಜದಲ್ಲಿ ಅವರಿಗೆ ಸಮಾನ ಅವಕಾಶಗಳನ್ನು ಒದಗಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಹೆಣ್ಣು ಮಕ್ಕಳ ಸಬಲೀಕರಣ: ಈ ದಿನವನ್ನು ಹೆಣ್ಣು ಮಕ್ಕಳ ಸಬಲೀಕರಣ ಮತ್ತು ಅವರ ಕನಸುಗಳನ್ನು ನನಸಾಗಿಸಲು ಪ್ರೇರೇಪಿಸಲು ಆಚರಿಸಲಾಗುತ್ತದೆ.
ಸಮಾನ ಅವಕಾಶ ಒದಗಿಸುವುದು: ಹೆಣ್ಣು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಪೋಷಣೆ ಮತ್ತು ಸಾಮಾಜಿಕ ಹಕ್ಕುಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸುವುದು.
ಲಿಂಗ ಆಧಾರಿತ ತಾರತಮ್ಯವನ್ನು ಹೋಗಲಾಡಿಸುವುದು: ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ ಮತ್ತು ತಾರತಮ್ಯವನ್ನು ತಡೆಗಟ್ಟಲು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
ಸಾಮಾಜಿಕ ಮನಸ್ಥಿತಿಯನ್ನು ಬದಲಾಯಿಸುವುದು: ಈ ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ತಾತ್ಸಾ ಮನೋಭಾವವನ್ನು ಹೋಗಲಾಡಿಸುವುದು ಈ ದಿನದ ಉದ್ದೇಶವಾಗಿದೆ. ಇದರಿಂದ ಹೆಣ್ಣುಮಕ್ಕಳಿಗೆ ಗೌರವ, ಭದ್ರತೆ ಮತ್ತು ಸಮಾನ ಅವಕಾಶಗಳು ಸಿಗುತ್ತವೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




