National Human Trafficking Awareness Day 2025: ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ ದಿನ; ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ

ಮಾನವ ಕಳ್ಳಸಾಗಣಿಕೆ ಅನ್ನೋದು ಸಮಾಜದ ಬಹುದೊಡ್ಡ ಪಿಡುಗಾಗಿ ಪರಿಣಮಿಸಿದೆ. ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದು, ಇಂತಹ ಮುಗ್ಧ ಜೀವಗಳ ರಕ್ಷಣೆಗಾಗಿ ಹಾಗೂ ಮಾನವ ಕಳ್ಳ ಸಾಗಣೆ ಅನ್ನೋ ಪಿಡುಗನ್ನು ತಡೆಗಟ್ಟುವ ಉದ್ದೇಶದಿಂದ ಪ್ರತಿವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಾಣೆ ವಿರುದ್ಧ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

National Human Trafficking Awareness Day 2025: ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ ದಿನ; ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ
National Human Trafficking Awareness Day
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jan 11, 2025 | 8:35 AM

ನಮ್ಮ ಸಮಾಜ ಎಷ್ಟೇ ಮುಂದುವರೆದಿದ್ದರೂ ಕೆಲವೊಂದು ಪಿಡುಗಗಳು ಮಾತ್ರ ಹಾಗೇನೇ ಇದೆ. ಹೌದು ಇಂದಿಗೂ ಹೆಣ್ಣಿನ ಮೇಲೆ ಶೋಷಣೆ ನಡೆಯುವಂತಹ, ಮಕ್ಕಳನ್ನು ಅಪಹರಿಸಿ ಭಿಕ್ಷಾಟಣನೆಗೆ ತಳ್ಳುವಂತಹದ್ದು, ಮಾನವ ಕಳ್ಳ ಸಾಗಣೆ ಹೀಗೆ ಇಂತಹ ಅದೆಷ್ಟೋ ಪ್ರಕರಣಗಳು ನಡೆಯುತ್ತಿವೆ. ಅದರಲ್ಲೂ ಮಾನವ ಕಳ್ಳಸಾಗಣಿಕೆ ಅನ್ನೋದು ಸಮಾಜದ ಬಹುದೊಡ್ಡ ಪಿಡುಗಾಗಿ ಪರಿಣಮಿಸಿದೆ. ಭಿಕ್ಷಾಟನೆ, ಲೈಂಗಿಕ ಚಟುವಟಿಕೆ, ಬಲವಂತದ ದುಡಿಮೆ, ಜೀತ ಇನ್ನಿತರೆ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಪ್ರಪಂಚದಾದ್ಯಂತ ಅದೆಷ್ಟೋ ಕಡೆ ಮಾನವ ಕಳ್ಳ ಸಾಗಣೆ ದಂಧೆ ನಡೆಯುತ್ತಿದೆ. ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದು, ಇಂತಹ ಮುಗ್ಧ ಜೀವಗಳ ರಕ್ಷಣೆಗಾಗಿ ಹಾಗೂ ಮಾನವ ಕಳ್ಳ ಸಾಗಣೆ ಅನ್ನೋ ಪಿಡುಗನ್ನು ತಡೆಗಟ್ಟುವ ಉದ್ದೇಶದಿಂದ ಪ್ರತಿವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಾಣೆ ವಿರುದ್ಧ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

ರಾಷ್ಟ್ರೀಯ ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ ದಿನದ ಇತಿಹಾಸ:

ಇಂದಿಗೂ ಭಿಕ್ಷಾಟನೆ, ಅಂಗಾಂಗ ಮಾರಾಟ ಸೇರಿದಂತೆ ಇನ್ನಿತರ ಹಲವಾರು ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಮಕ್ಕಳು, ಅಮಾಯಕ ಜನ, ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆಯನ್ನು ಮಾಡಲಾಗುತ್ತಿದೆ. ಈ ಪಿಡುಗಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ 2007 ರಲ್ಲಿ ಅಮೆರಿಕಾದ ಯುನೈಟೆಡ್ ಸ್ಟೇಟ್ಸ್ ಸೆನೆಟ್ ʼಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನʼವಾಗಿ ಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿತು. ನಂತರ ಇದರ ಗಂಭೀರ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು 2010 ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಇಡೀ ಜನವರಿ ತಿಂಗಳನ್ನು ಮಾನವ ಕಳ್ಳಸಾಗಣೆಯ ಜಾಗೃತಿ ಮತ್ತು ತಡೆಗಟ್ಟುವಿಕೆಗೆ ಮೀಸಲಿಟ್ಟರು. ಇಂದು, ಜಾಗತಿಕವಾಗಿ ಈ ಕಾನೂನುಬಾಹಿರ ಚಟುವಟಿಕೆಯನ್ನು ತಡೆಗಟ್ಟುವ ಸಲುವಾಗಿ 50 ಕ್ಕೂ ಹೆಚ್ಚು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: ದೇಶದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು, ಈ ಅಂಕಿಅಂಶದಲ್ಲಿ ಏನಿದೆ?

ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನದ ಮಹತ್ವ:

ಮಾನವ ಕಳ್ಳಸಾಗಣೆಯು ಅಪರಾಧ ಕೃತ್ಯವಾಗಿದ್ದು, ಹಾಗೂ ಇದೊಂದು ಗುಲಾಮಗಿರಿಯ ರೂಪವಾಗಿದ್ದು, ಪ್ರಪಂಚದಾದ್ಯಂತ ಲಕ್ಷಾಂತರ ಜನರು ಈ ಅನಿಷ್ಟ ಕೂಪಕ್ಕೆ ಸಿಲುಕಿ ಬಲಿಯಾಗುತ್ತಿದ್ದಾರೆ. ಮಹಿಳೆಯರು, ಮಕ್ಕಳು, ಅಪ್ರಾಪ್ತ ಹೆಣ್ಣು ಮಕ್ಕಳು, ಅಮಾಯಕ ಜನ ಮಾನವ ಕಳ್ಳ ಸಾಗಾಣಿಕೆ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ. ಇದನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಧರ್ಮ. ಆದ್ದರಿಂದ, ವಿಶೇಷವಾಗಿ ಈ ದಿನದಂದು, ಅನೇಕ ಸ್ಥಳಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ ಜನರನ್ನು ಜಾಗೃತಗೊಳಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ