AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ

ಮಾನವ ಕಳ್ಳಸಾಗಣೆ ಒಂದು ಕ್ರಿಮಿನಲ್ ಕೃತ್ಯವಾಗಿದ್ದು, ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದಾರೆ. ಅಂತಹವರ ರಕ್ಷಣೆಗಾಗಿ ಮತ್ತು ಸಮಾಜದಲ್ಲಿ ಮಾನವ ಕಳ್ಳಸಾಗಣಿಕೆಯನ್ನು ತಡೆಗಟ್ಟುವ ಸಲುವಾಗಿ ಅದರ ಬಗ್ಗೆ ಜಾಗೃತಿಯನ್ನು ಮೂಡಿಸಲು ಪ್ರತಿವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ
ಮಾನವ ಕಳ್ಳ ಸಾಗಾಣಿಕೆಯ ವಿರುದ್ಧದ ಜಾಗೃತಿ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Jan 11, 2026 | 10:00 AM

Share

ಮಾನವ ಕಳ್ಳಸಾಗಾಣಿಕೆಯು (Human Trafficking) ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಪ್ರತಿ ವರ್ಷ ಪ್ರಪಂಚದಲ್ಲಿನ ಲಕ್ಷಾಂತರ ಅಮಾಯಕ ಜನರು ಈ ಮಾನವ ಕಳ್ಳಸಾಗಾಣಿಕೆಯ ಕೂಪಕ್ಕೆ ಬಲಿಯಾಗಿತ್ತಿದ್ದಾರೆ ಮತ್ತು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ. ಇದು ಬಹು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಭಿಕ್ಷಾಟನೆ, ವೇಶ್ಯಾವಾಟಿಕೆ, ಲೈಂಗಿಕ ಚಟುವಟಿಕೆ, ಬಲವಂತದ ದುಡಿಮೆ, ಜೀತ, ಅಂಗಾಂಗ ಮಾರಾಟ ಮತ್ತು ಇತರ ಅನೇಕ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಮಾನವ ಕಳ್ಳಸಾಗಾಣಿಕೆ ಕೃತ್ಯಗಳು ನಡೆಯುತ್ತಿವೆ. ಈ ಕ್ರಿಮಿನಲ್‌ ಕೃತ್ಯಗಳಿಗೆ ಮಕ್ಕಳು, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರು. ಆರ್ಥಿಕವಾಗಿ ಹಿಂದುಳಿದವರು ಬಲಿಯಾಗುತ್ತಿದ್ದು, ಇವರುಗಳ ರಕ್ಷಣೆಗಾಗಿ ಹಾಗೂ ಸಮಾಜದಲ್ಲಿ ಮಾನವ ಕಳ್ಳಸಾಗಣಿಕೆ ಕೃತ್ಯವನ್ನು ತಡೆಗಟ್ಟಲು ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪ್ರತಿ ವರ್ಷ ಜನವರಿ 11 ರಂದು ರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ಮಾನವ ಕಳ್ಳಸಾಗಣಿಕೆ ವಿರುದ್ಧ ಜಾಗೃತಿ ದಿನದ ಇತಿಹಾಸವೇನು?

ಮಾನವ ಕಳ್ಳಸಾಗಾಣಿಕೆ ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಈ ಸಮಸ್ಯೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು  2007 ರಲ್ಲಿ ಯುನೈಟೆಡ್ ಸ್ಟೇಟ್ಸ್ ಸೆನೆಟ್ ಜನವರಿ 11 ರಂದು ʼರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನʼವನ್ನು ಆಚರಿಸಲು ಘೋಷಿಸಿತು. ನಂತರ ಈ ಸಾಮಾಜಿಕ ಪಿಡುಗಿನ ಗಂಭೀರ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು 2010 ರಲ್ಲಿ ಆಗಿನ ಅಮೆರಿಕ ಅಧ್ಯಕ್ಷ  ಬರಾಕ್ ಒಬಾಮ ಸಂಪೂರ್ಣ ಜನವರಿ ತಿಂಗಳನ್ನು ಮಾನವ ಕಳ್ಳಸಾಗಾಣಿಕೆ ಕುರಿತು ಜಾಗೃತಿ ಮೂಡಿಸಲು ಮೀಸಲಿಟ್ಟರು. ಅಂದಿನಿಂದ ಅಮೆರಿಕ ಸೇರಿದಂತೆ ಪ್ರಪಂಚದ ಇತರೆ ರಾಷ್ಟ್ರಗಳಲ್ಲಿಯೂ ಪ್ರತಿವರ್ಷ ಜನವರಿ 11 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿಯೂ ಕೂಡ ಮಾನವ ಕಳ್ಳ ಸಾಗಾಣೆ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮಗಳು, ಜಾಥಗಳು, ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ರಾಷ್ಟ್ರೀಯ ಮಾನವ ಕಳ್ಳಸಾಗಾಣಿಕೆ ವಿರುದ್ಧ ಜಾಗೃತಿ ದಿನದ ಮಹತ್ವವೇನು?

  • ಮಾನವ ಕಳ್ಳಸಾಗಾಣಿಕೆಯು ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಈ ಗುಲಾಮಗಿರಿಯಿಂದ ಜಗತ್ತನ್ನು ಮುಕ್ತಗೊಳಿಸಲು ಈ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನವು ಇಂತಹ ಸಮಸ್ಯೆಗಳನ್ನು ಬೆಳಕಿಗೆ ತರುವುದು, ಭದ್ರತೆಯನ್ನು ಸರಿಪಡಿಸುವುದು ಕಳ್ಳಸಾಗಣೆ ಕೃತ್ಯಗಳು ನಡೆಯದಂತೆ ನೋಡಿಕೊಳ್ಳುವುದು, ಶೋಷಣೆಗೆ ಒಳಗಾದವರಿಗೆ ರಕ್ಷಣೆ ಒದಗಿಸುವ ಗುರಿಯನ್ನು ಹೊಂದಿದೆ.
  • ಈ ದಿನದಂದು ಮಾನವ ಕಳ್ಳ ಸಾಗಾಣಿಕೆಯ ವಿರುದ್ಧ ಜಾಗೃತಿ ಮೂಡಿಸಲು ಕಾನೂನು ಅರಿವು ಕಾರ್ಯಕ್ರಮಗಳು, ಜಾಥಗಳು, ವಿಚಾರ ಸಂಕಿರಣಗಳನ್ನು ಸಹ ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ