National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ದೇಶದ ಆರ್ಥಿಕ ಅಭಿವೃದ್ಧಿಗೆ ಸಮುದ್ರಯಾನವೇ ಮೂಲಧಾರ. ಹೀಗಾಗಿ ಬಹುತೇಕ ದೇಶಗಳು ವಾಣಿಜ್ಯ ಚಟುವಟಿಕೆಗಳಿಗೆ ಈ ಸಮುದ್ರಯಾನವನ್ನು ಅವಲಂಬಿಸಿದೆ. ಅದಲ್ಲದೇ, ಈ ಭಾರತೀಯ ಆರ್ಥಿಕತೆಯ ಮೂಲ ವರಮಾನವೇ ಈ ಬಂದರುಗಳು. ಹೀಗಾಗಿ ಸಮುದ್ರಯಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಎಪ್ರಿಲ್‌ 5ರಂದು ಭಾರತದಲ್ಲಿ ರಾಷ್ಟ್ರೀಯ ಕಡಲ ದಿನವನ್ನು ಆಚರಿಸಲಾಗುತ್ತದೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?
ರಾಷ್ಟ್ರೀಯ ಕಡಲ ದಿನ
Image Credit source: Pinterest

Updated on: Apr 05, 2026 | 10:33 AM

ಬಹುತೇಕ ದೇಶಗಳು ಅಗತ್ಯ ಸರಕುಗಳನ್ನು ಆಮದು ಹಾಗೂ ರಫ್ತು ಮಾಡಿಕೊಳ್ಳಲು ಸಮುದ್ರಯಾನಯನ್ನೇ ಅವಲಂಬಿಸಿದೆ. ಸಮುದ್ರಯಾನವು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾಚೀನ ಕಾಲದಿಂದಲೂ, ನಮ್ಮ ದಕ್ಷಿಣದ ರಾಜ್ಯಗಳು, ಪೂರ್ವ ಏಷ್ಯಾ ಹಾಗೂ ಆಫ್ರಿಕಾದ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಿವೆ. ಈ ಎಲ್ಲಾ ಕಾರಣಕ್ಕಾಗಿ ಭಾರತ ಆರ್ಥಿಕತೆಗೆ ಸಮುದ್ರಯಾನದ ಕೊಡುಗೆ ಅಗಾಧವಾದದ್ದು. ಹೀಗಾಗಿ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ರಾಷ್ಟ್ರೀಯ ಕಡಲ ದಿನ. ಪ್ರತಿ ವರ್ಷ ಏಪ್ರಿಲ್ 5 ರಂದು ರಾಷ್ಟ್ರೀಯ ಕಡಲ ದಿನವನ್ನು (National Maritime day) ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿ ತಿಳಿದುಕೊಳ್ಳಿ.

ರಾಷ್ಟ್ರೀಯ ಕಡಲ ದಿನದ ಇತಿಹಾಸವೇನು?

ಭಾರತೀಯ ಉದ್ಯಮಿಗಳ ದಿ ಸಿಂಧಿಯಾ ಸ್ಟೀಮ್‌ ನ್ಯಾವಿಗೇಶನ್‌ ಲಿ ಈ ಹಡಗು ಕಂಪೆನಿಯ ಮೊದಲ ಹಡಗು ಎಸ್‌ಎಸ್‌ ಲಾಯಲ್ಟಿ ಬಾಂಬೆಯಿಂದ (ಮುಂಬಯಿ) ಯುನೈಟೆಡ್‌ ಕಿಂಗ್‌ಡಮ್‌ ಈ ಸವಿನೆನಪಿಗೆ ರಾಷ್ಟ್ರೀಯ ಕಡಲ ದಿನವನ್ನು 1964ರಿಂದ ಆಚರಿಸಲಾಯಿತು. ಅಂದಿನಿಂದ ಪ್ರತೀ ವರ್ಷ ಎಪ್ರಿಲ್‌ 5ರಂದು ಭಾರತದಲ್ಲಿ ರಾಷ್ಟ್ರೀಯ ಕಡಲ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ರಾಷ್ಟ್ರೀಯ ಕಡಲ ದಿನದ ಮಹತ್ವವೇನು?

ಸಮುದ್ರಯಾನವು ಸರಕುಗಳನ್ನು ಸಾಗಿಸುವ ಅತ್ಯಂತ ಪರಿಣಾಮಕಾರಿ ಮಾರ್ಗಗಳಲ್ಲಿ ಒಂದು. ಅಂತಾರಾಷ್ಟ್ರೀಯ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ಉದ್ದೇಶವನ್ನು ಹೊಂದಿದೆ. ಭಾರತೀಯ ಕಡಲ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರನ್ನು ವರುಣ್’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಹಾಗೂ ಈ ವಿಶೇಷ ದಿನದಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us