AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Milk Day 2025: ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಟ್ಟ ಹೈನುಗಾರಿಕೆ

ಶ್ವೇತಕ್ರಾಂತಿಯ ಹರಿಕಾರ ಡಾ. ವರ್ಗೀಸ್ ಕುರಿಯನ್ ಅವರ ಜನ್ಮದಿನದ ಸವಿನೆನಪಿಗಾಗಿ ಭಾರತದಲ್ಲಿ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವುದು ಮತ್ತು ಹಾಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ದಿನಾಚರಣೆಯನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.

National Milk Day 2025: ಗ್ರಾಮೀಣ ಭಾಗದ ಜನರಿಗೆ ಬದುಕು ಕಟ್ಟಿಕೊಟ್ಟ ಹೈನುಗಾರಿಕೆ
ರಾಷ್ಟ್ರೀಯ ಕ್ಷೀರ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on:Nov 26, 2025 | 9:40 AM

Share

ಹೈನುಗಾರಿಕೆ (dairy farming) ಗ್ರಾಮೀಣ ಜನರ ಆರ್ಥಿಕತೆಯನ್ನು ಸುಧಾರಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸಿದೆ. ಅದೆಷ್ಟೋ ಜನರಿಗೆ ಹೈನುಗಾರಿಕೆ ಜೀವನಾಧಾರವಾಗಿದೆ. ಇದಕ್ಕೆಲ್ಲಾ ಮೂಲ ಕಾರಣಕರ್ತರು ಶ್ವೇತಕ್ರಾಂತಿಯ ಹರಿಕಾರ ಡಾ. ವರ್ಗೀಸ್‌ ಕುರಿಯನ್‌ ಅವರು. ಹಾಲು ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯಾಗಿಸಲು, ರೈತರ ಜೀವನಮಟ್ಟವನ್ನು ಸುಧಾರಿಸಲು ಶ್ರಮಿಸಿದ ಇವರು ಭಾರತವನ್ನು ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ದೇಶವನ್ನಾಗಿ ಮಾಡಿದರು. ಹಾಗಾಗಿ ಇವರ ಜನ್ಮಜಯಂತಿಯ ಸವಿನೆನಪಿಗಾಗಿ, ಭಾರತದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕ್ಷೀರ ದಿನದ ಇತಿಹಾಸವೇನು?

ಪ್ರಸ್ತುತ ಭಾರತವು ಹಾಲು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಮಿಲ್ಕ್ ಮ್ಯಾನ್ ಆಫ್ ಇಂಡಿಯಾ ಡಾ. ವರ್ಗೀಸ್ ಕುರಿಯನ್ ಅವರಿಗೆ ಸಲ್ಲುತ್ತದೆ. ಕುರಿಯನ್ ಅವರು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವಲ್ಲಿ, ಹೈನುಗಾರಿಕೆಯನ್ನು ಉತ್ತೇಜಿಸುವಲ್ಲಿ ಬಹಳಷ್ಟು ಕೊಡುಗೆ ನೀಡಿದ್ದಾರೆ. ಇವರ ಈ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (NDDB), ಇಂಡಿಯನ್ ಡೈರಿ ಅಸೋಸಿಯೇಷನ್ (IDA) ಮತ್ತು 22 ರಾಜ್ಯಮಟ್ಟದ ಡೈರಿ ಫೆಡರೇಷನ್ ಸಹಯೋಗದಲ್ಲಿ 2014 ರಲ್ಲಿ ವರ್ಗೀಸ್ ಅವರ ಜನ್ಮ ಜಯಂತಿಯಂದು ರಾಷ್ಟ್ರೀಯ ಹಾಲು ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಈ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಲಿ

ರಾಷ್ಟ್ರೀಯ ಕ್ಷೀರ ದಿನದ ಮಹತ್ವವೇನು?

  • ಭಾರತದಲ್ಲಿ ಹಾಲಿನ ಉತ್ಪಾದನೆಯನ್ನು ಉತ್ತೇಜಿಸುವುದು ಮತ್ತು ಹಾಲಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
  • ಈ ದಿನದಂದು ಜನರಿಗೆ ಹಾಲು ಉತ್ಪಾದನೆ ಮತ್ತು ಅದರ ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತದೆ.
  • ಈ ದಿನದಂದು ಸಾರ್ವಜನಿಕರಿಗೆ ಡೈರಿ ಉತ್ಪನ್ನಗಳು ಮತ್ತು ಹಾಲಿನ ಪ್ರಯೋಜನಗಳ ಬಗ್ಗೆ ತಿಳಿಸಲು ಅನೇಕ ಅಭಿಯಾನಕಾರ್ಯಗಳನ್ನು ಸಹ ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Wed, 26 November 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ