
ಹೈನುಗಾರಿಕೆ (dairy farming) ಗ್ರಾಮೀಣ ಜನರ ಆರ್ಥಿಕತೆಯನ್ನು ಸುಧಾರಿಸುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸಿದೆ. ಅದೆಷ್ಟೋ ಜನರಿಗೆ ಹೈನುಗಾರಿಕೆ ಜೀವನಾಧಾರವಾಗಿದೆ. ಇದಕ್ಕೆಲ್ಲಾ ಮೂಲ ಕಾರಣಕರ್ತರು ಶ್ವೇತಕ್ರಾಂತಿಯ ಹರಿಕಾರ ಡಾ. ವರ್ಗೀಸ್ ಕುರಿಯನ್ ಅವರು. ಹಾಲು ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯಾಗಿಸಲು, ರೈತರ ಜೀವನಮಟ್ಟವನ್ನು ಸುಧಾರಿಸಲು ಶ್ರಮಿಸಿದ ಇವರು ಭಾರತವನ್ನು ವಿಶ್ವದಲ್ಲೇ ಅತಿ ಹೆಚ್ಚು ಹಾಲು ಉತ್ಪಾದಿಸುವ ದೇಶವನ್ನಾಗಿ ಮಾಡಿದರು. ಹಾಗಾಗಿ ಇವರ ಜನ್ಮಜಯಂತಿಯ ಸವಿನೆನಪಿಗಾಗಿ, ಭಾರತದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಕ್ಷೀರ ದಿನವನ್ನು ಆಚರಿಸಲಾಗುತ್ತದೆ.
ಪ್ರಸ್ತುತ ಭಾರತವು ಹಾಲು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಮಿಲ್ಕ್ ಮ್ಯಾನ್ ಆಫ್ ಇಂಡಿಯಾ ಡಾ. ವರ್ಗೀಸ್ ಕುರಿಯನ್ ಅವರಿಗೆ ಸಲ್ಲುತ್ತದೆ. ಕುರಿಯನ್ ಅವರು ದೇಶದಲ್ಲಿ ಹಾಲು ಉತ್ಪಾದನೆಯನ್ನು ಉತ್ತೇಜಿಸುವಲ್ಲಿ, ಹೈನುಗಾರಿಕೆಯನ್ನು ಉತ್ತೇಜಿಸುವಲ್ಲಿ ಬಹಳಷ್ಟು ಕೊಡುಗೆ ನೀಡಿದ್ದಾರೆ. ಇವರ ಈ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ (NDDB), ಇಂಡಿಯನ್ ಡೈರಿ ಅಸೋಸಿಯೇಷನ್ (IDA) ಮತ್ತು 22 ರಾಜ್ಯಮಟ್ಟದ ಡೈರಿ ಫೆಡರೇಷನ್ ಸಹಯೋಗದಲ್ಲಿ 2014 ರಲ್ಲಿ ವರ್ಗೀಸ್ ಅವರ ಜನ್ಮ ಜಯಂತಿಯಂದು ರಾಷ್ಟ್ರೀಯ ಹಾಲು ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಈ ದಿನವನ್ನು ಆಚರಿಸಲಾಗುತ್ತಿದೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಲಿ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:39 am, Wed, 26 November 25