National Nutrition Week 2025: ಆರೋಗ್ಯದ ಬಗ್ಗೆ ಇರಲಿ ಅರಿವು; ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ
ಭಾರತದಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ಸಪ್ತಾಹವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಉತ್ತಮ ಆರೋಗ್ಯದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮತ್ತು ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರ ಸೇವನೆ ಎಷ್ಟು ಮುಖ್ಯ ಎಂಬ ಮಹತ್ವದ ಬಗ್ಗೆ ಮಾಹಿತಿ ನೀಡುವುದಾಗಿದೆ. ಈ ಆಚರಣೆ ಹೇಗೆ ಪ್ರಾರಂಭವಾಯಿತು? ಇದರ ಮಹತ್ವ ಮತ್ತು ಇತಿಹಾಸವನ್ನು ತಿಳಿಯೋಣ ಬನ್ನಿ.

ಸುಖ ಜೀವನದ ಕೀಲಿಕೈ ಆರೋಗ್ಯ (Health). ಮನುಷ್ಯನಿಗೆ ಆರೋಗ್ಯಕ್ಕಿಂತ ಭಾಗ್ಯ ಇನ್ನೊಂದಿಲ್ಲ ಹಾಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕ ಜೀವನಶೈಲಿಯನ್ನು ಪಾಲಿಸುವುದರ ಜೊತೆಗೆ ಸಮತೋಲಿತ, ಪೌಷ್ಟಿಕಾಂಶಯುಕ್ತ ಸೇವನೆ ಮಾಡಬೇಕು. ಜೊತೆಗೆ ಬಲವಾದ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಒಬ್ಬ ವ್ಯಕ್ತಿ ತಾಸು ಸೇವನೆ ಮಾಡುವ ಆಹಾರದಲ್ಲಿ ಅಗತ್ಯ ಪೋಷಕಾಂಶಗಳನ್ನು ಸೇವನೆ ಮಾಡಬೇಕು. ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಆಹಾರಗಳು ಅತ್ಯಗತ್ಯ. ಹಾಗಾಗಿ ಪೌಷ್ಟಿಕಾಂಶಯುಕ್ತ ಆಹಾರದ ಸೇವೆನೆ ಮತ್ತು ಅದರಿಂದ ಲಭಿಸುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸೆಪ್ಟೆಂಬರ್ ಮೊದಲ ವಾರ ಅಂದರೆ ಸೆಪ್ಟೆಂಬರ್ 1 ರಿಂದ 7 ರವರೆಗೆ ಭಾರತದಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ (National Nutrition Week) ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ಸಪ್ತಾಹದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಇತಿಹಾಸ:
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಮೊದಲ ಬಾರಿಗೆ ಅಮೆರಿಕನ್ ಡಯೆಟಿಕ್ ಅಸೋಸಿಯೇಷನ್ ಈಗಿನ ಅಕಾಡೆಮಿ ಆಫ್ ನ್ಯೂಟ್ರಿಷನ್ & ಡಯಟ್ ಸೈನ್ಸಸ್ 1975 ರಲ್ಲಿ ಆಚರಿಸಿತು. ಪೌಷ್ಟಿಕಾಂಸದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಆಚರಣೆಯ ಹಿಂದಿನ ಉದ್ದೇಶವಾಗಿತ್ತು. ಈ ಆಚರಣೆ ವ್ಯಾಪಕ ಮನ್ನಣೆ ಪಡೆದ ನಂತರ 1982 ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಆಚರಿಸಲಾಯಿತು. ಜನರಿಗೆ ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಾಗಿದೆ.
ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಮಂಡಳಿಯುವ ಪ್ರತಿವರ್ಷ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕಾರ್ಯವನ್ನು ಆಯೋಜಿಸುತ್ತದೆ.
ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಲ್ಲಿ ಆಚರಿಸುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಮಹತ್ವ:
ನವಜಾತ ಶಿಶುವಿನಿಂದ ಹಿಡಿದು ವಯಸ್ಸಾದವರವರೆಗೆ ಪ್ರತಿಯೊಬ್ಬರ ಪೋಷಣೆಯ ಬಗ್ಗೆಯೂ ಕಾಳಜಿ ವಹಿಸಲು ಮತ್ತು ಪೌಷ್ಟಿಕಾಂಶ ಆಹಾರ ಸೇವನೆಯ ಪ್ರಾಮುಖ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ಆಚರಣೆಯ ಮೂಲ ಉದ್ದೇಶವಾಗಿದೆ. ಈ ಆಚರಣೆಯ ಏಳು ದಿನವೂ ವಿವಿಧ ಅಭಿಯಾನಗಳು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಜನರು ಸಮತೋಲಿತ ಆಹಾರವನ್ನು ಸೇವನೆ ಮಾಡುವಂತೆ ಪ್ರೋತ್ಸಾಹಿಸಲಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:03 pm, Sun, 31 August 25








