National Panchayati Raj Day 2024: ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ!

ಭಾರತವು ಹಳ್ಳಿಗಳಿಂದ ಕೂಡಿದ ದೇಶ, ಹೀಗಾಗಿ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದು ಮುಖ್ಯ. ದೇಶದಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿದ್ದರೂ, ಸ್ಥಳೀಯ ಆಡಳಿತ ವ್ಯವಸ್ಥೆಗಳು ಅಲ್ಲಿನ ಜನರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತವೆ. ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತಿದ್ದು, ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

National Panchayati Raj Day 2024: ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ!
National Panchayati Raj Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 23, 2024 | 6:29 PM

ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದ್ದ ಈ ಪಂಚಾಯತ್ ರಾಜ್ ವ್ಯವಸ್ಥೆಗಳು ಗ್ರಾಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದೆ. ‘ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು’ ಎನ್ನುವ ಗಾಂಧೀಜಿಯವರ ಮಾತು ನೆನಪಿರಬಹುದು. ಈ ಮಾತು ದೇಶದ ಅಭಿವೃದ್ಧಿಯ ವಿಚಾರದಲ್ಲಿ ಸತ್ಯಕ್ಕೆ ಹತ್ತಿರವಾದಂತಿದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಬಹಳ ಮುಖ್ಯ. ಗ್ರಾಮಗಳು ಅಭಿವೃದ್ಧಿಯತ್ತ ಸಾಗಲು ಅಲ್ಲಿನ ಗ್ರಾಮ ಪಂಚಾಯತ್ ವ್ಯವಸ್ಥೆ ಅಥವಾ ಪಂಚಾಯತ್ ರಾಜ್ ವ್ಯವಸ್ಥೆಯು ಉತ್ತಮವಾಗಿರದ್ದೇ ಮಾತ್ರ ಅಭಿವೃದ್ಧಿಯೆನ್ನುವುದು ಸಾಧ್ಯ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಇತಿಹಾಸ:

ಗ್ರಾಮೀಣ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್‌ನ 1992ರ ಸಂವಿಧಾನ ತಿದ್ದುಪಡಿ (73ನೇ ತಿದ್ದುಪಡಿ)ಯು 1993ರ ಏಪ್ರಿಲ್ 24ರಂದು ಜಾರಿಗೆ ಬಂದವು. ಹೀಗಾಗಿ ಪಂಚಾಯತ್ ರಾಜ್ ಸಚಿವಾಲಯವು ಪ್ರತಿವರ್ಷ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ ಹಾಗೂ ಆಚರಣೆ:

ಪ್ರತೀ ವರ್ಷ ಏಪ್ರಿಲ್ 24ರಂದು ಆಚರಿಸಲಾಗುವ “ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ’ ದಂದು ಉತ್ತಮ ಸಾಧನೆ ಮಾಡಿದ ರಾಜ್ಯ ಮತ್ತು ರಾಜ್ಯದ ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ. ಈ ಪ್ರಶಸ್ತಿಯ ಮುಖ್ಯ ಉದ್ದೇಶವೇ ಪಂಚಾಯತ್‌ ರಾಜ್‌ ಸಂಸ್ಥೆಗಳು ಹಳ್ಳಿಗಳ ಅಭಿವೃದ್ಧಿಗೆ ಇನ್ನಷ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದಾಗಿದೆ. ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನದಂದು ಕೇಂದ್ರ ಸರಕಾರವು ಪ್ರಮುಖವಾಗಿ ನ್ಯಾನ್‌ಜಿ ದೇಶಮುಖ್‌ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರ್‌, ದೀನ್‌ ದಯಾಳ್‌ ಉಪಾಧ್ಯಾಯ್‌ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ, ಮಕ್ಕಳ ಸ್ನೇಹಿ ಗ್ರಾಮ ಸಭಾ ಪುರಸ್ಕಾರ, ಗ್ರಾ. ಪಂ. ಅಭಿವೃದ್ಧಿ ಯೋಜನಾ ಪುರಸ್ಕಾರವನ್ನು ನೀಡಿ ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಪಂಚಾಯತನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ