ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದ್ದ ಈ ಪಂಚಾಯತ್ ರಾಜ್ ವ್ಯವಸ್ಥೆಗಳು ಗ್ರಾಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದೆ. ‘ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು’ ಎನ್ನುವ ಗಾಂಧೀಜಿಯವರ ಮಾತು ನೆನಪಿರಬಹುದು. ಈ ಮಾತು ದೇಶದ ಅಭಿವೃದ್ಧಿಯ ವಿಚಾರದಲ್ಲಿ ಸತ್ಯಕ್ಕೆ ಹತ್ತಿರವಾದಂತಿದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಬಹಳ ಮುಖ್ಯ. ಗ್ರಾಮಗಳು ಅಭಿವೃದ್ಧಿಯತ್ತ ಸಾಗಲು ಅಲ್ಲಿನ ಗ್ರಾಮ ಪಂಚಾಯತ್ ವ್ಯವಸ್ಥೆ ಅಥವಾ ಪಂಚಾಯತ್ ರಾಜ್ ವ್ಯವಸ್ಥೆಯು ಉತ್ತಮವಾಗಿರದ್ದೇ ಮಾತ್ರ ಅಭಿವೃದ್ಧಿಯೆನ್ನುವುದು ಸಾಧ್ಯ.
ಗ್ರಾಮೀಣ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್‌ನ 1992ರ ಸಂವಿಧಾನ ತಿದ್ದುಪಡಿ (73ನೇ ತಿದ್ದುಪಡಿ)ಯು 1993ರ ಏಪ್ರಿಲ್ 24ರಂದು ಜಾರಿಗೆ ಬಂದವು. ಹೀಗಾಗಿ ಪಂಚಾಯತ್ ರಾಜ್ ಸಚಿವಾಲಯವು ಪ್ರತಿವರ್ಷ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತಿದೆ.
ಇದನ್ನೂ ಓದಿ: ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ
ಪ್ರತೀ ವರ್ಷ ಏಪ್ರಿಲ್ 24ರಂದು ಆಚರಿಸಲಾಗುವ “ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ ದಂದು ಉತ್ತಮ ಸಾಧನೆ ಮಾಡಿದ ರಾಜ್ಯ ಮತ್ತು ರಾಜ್ಯದ ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯನ್ನು ವಿತರಿಸಲಾಗುತ್ತದೆ. ಈ ಪ್ರಶಸ್ತಿಯ ಮುಖ್ಯ ಉದ್ದೇಶವೇ ಪಂಚಾಯತ್ ರಾಜ್ ಸಂಸ್ಥೆಗಳು ಹಳ್ಳಿಗಳ ಅಭಿವೃದ್ಧಿಗೆ ಇನ್ನಷ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದಾಗಿದೆ. ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಕೇಂದ್ರ ಸರಕಾರವು ಪ್ರಮುಖವಾಗಿ ನ್ಯಾನ್‌ಜಿ ದೇಶಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರ್, ದೀನ್ ದಯಾಳ್ ಉಪಾಧ್ಯಾಯ್ ಪಂಚಾಯತ್ ಸಶಕ್ತೀಕರಣ ಪುರಸ್ಕಾರ, ಮಕ್ಕಳ ಸ್ನೇಹಿ ಗ್ರಾಮ ಸಭಾ ಪುರಸ್ಕಾರ, ಗ್ರಾ. ಪಂ. ಅಭಿವೃದ್ಧಿ ಯೋಜನಾ ಪುರಸ್ಕಾರವನ್ನು ನೀಡಿ ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಪಂಚಾಯತನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಮಾಡುತ್ತವೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ