National Press Day 2024: ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಕರ್ತವ್ಯವೇನು? ಇಲ್ಲಿದೆ ಮಾಹಿತಿ

ಭಾರತದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಕ್ರಾಂತಿಕಾರಿಗಳ ದೊಡ್ಡ ಅಸ್ತ್ರವಾಗಿತ್ತು ಈ ಮುದ್ರಣಾಲಯ. ಸ್ವಾತ್ರಂತ್ರ್ಯದ ಬಳಿಕವೂ ಭಾರತದಲ್ಲಿ ಪತ್ರಿಕಾ ಮಾಧ್ಯಮವು ಪ್ರಮುಖ ಪಾತ್ರವನ್ನು ವಹಿಸಿದೆ. ಈ ಮಾಧ್ಯಮವನ್ನು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಕರೆಯಲಾಗಿದೆ. ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕಾ ಮಾಧ್ಯಮವು ವಹಿಸುವ ಪಾತ್ರವೂ ಬಹು ದೊಡ್ಡದಿದೆ. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈ ಸಂಸ್ಥೆಯ ಸ್ಥಾಪನೆಯ ಸ್ಮರಣಾರ್ಥವಾಗಿ ರಾಷ್ಟ್ರೀಯ ಪತ್ರಿಕಾ ದಿನವನ್ನು ಪ್ರತಿವರ್ಷ ನವೆಂಬರ್ 16 ರಂದು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿಯು ಇಲ್ಲಿದೆ.

National Press Day 2024: ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಕರ್ತವ್ಯವೇನು? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 16, 2024 | 9:02 AM

ನಾವಿಂದು ಆಧುನಿಕ ಯುಗದಲ್ಲಿದ್ದೇವೆ. ಸ್ಮಾರ್ಟ್ ಫೋನ್ ಗಳ ಮೂಲಕ ಕುಳಿತಲ್ಲಿಯೇ ದೇಶ ವಿದೇಶಗಳಲ್ಲಿ ಏನೇನು ನಡೆಯುತ್ತಿದೆ ಎನ್ನುವ ಸುದ್ದಿಯನ್ನು ತಿಳಿದುಕೊಳ್ಳಬಹುದು. ಈ ಪತ್ರಿಕಾ ಮಾಧ್ಯಮವು ಈ ಜಗತ್ತಿನಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದರ ಕ್ಷಣ ಕ್ಷಣದ ಮಾಹಿತಿಗಳನ್ನು ನೀಡುತ್ತದೆ. ರಾಜಕೀಯ, ಕ್ರೀಡೆ, ವಿಜ್ಞಾನ, ಮನೋರಂಜನೆ ಹೀಗೆ ಎಲ್ಲಾ ಕ್ಷೇತ್ರದ ವಿಷಯಗಳ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ಈ ಪತ್ರಿಕಾ ಮಾಧ್ಯಮವೂ ಮಾಡುತ್ತದೆ. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಪತ್ರಿಕಾ ಮಾಧ್ಯಮವನ್ನು ಕಾವಲು ನಾಯಿ ಎಂದು ಕರೆಯಲಾಗುತ್ತದೆ. ಯಾವುದೇ ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಆ ದೇಶದ ಪ್ರಜಾಪ್ರಭುತ್ವದ ಕನ್ನಡಿ ಎಂದು ಕರೆದರೂ ತಪ್ಪಾಗಲಾರದು. ಪತ್ರಕರ್ತರ ಹಕ್ಕುಗಳು ಮತ್ತು ಗೌರವವನ್ನು ಕಾಪಾಡಿಕೊಳ್ಳಲು ಹಾಗೂ ಭಾರತದಲ್ಲಿ ಸ್ವತಂತ್ರ ಮತ್ತು ಜವಾಬ್ದಾರಿಯುತ ಪತ್ರಿಕಾ ಅಸ್ತಿತ್ವದ ಸ್ಮರಣಾರ್ಥವಾಗಿ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನ ವನ್ನು ಆಚರಿಸಲಾಗುತ್ತಿದೆ.

*ರಾಷ್ಟ್ರೀಯ ಪತ್ರಿಕಾ ದಿನದ ಇತಿಹಾಸ*

1956 ರಲ್ಲಿ ಮೊದಲ ಪತ್ರಿಕಾ ಆಯೋಗವು ಪತ್ರಿಕೋದ್ಯಮದ ನೈತಿಕತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಪೂರೈಸುವ ಉದ್ದೇಶದಿಂದ ಶಾಸನಬದ್ಧ ಅಧಿಕಾರವನ್ನು ಹೊಂದಿರುವ ಸಂಸ್ಥೆಯನ್ನು ರಚಿಸಲು ನಿರ್ಧರಿಸಿತು. ಹೀಗಾಗಿ ಭಾರತದಲ್ಲಿ 1966, ಜುಲೈ 4 ರಂದು ಪ್ರೆಸ್ ಕೌನ್ಸಿಲ್ ಅನ್ನು ಸ್ಥಾಪಿಸಲಾಯಿತು. ಆದರೆ ಈ ಸಂಸ್ಥೆಯು ನವೆಂಬರ್ 16, 1966 ರಿಂದ ತನ್ನ ಔಪಚಾರಿಕ ಕೆಲಸವನ್ನು ಪ್ರಾರಂಭಿಸಿತು. ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಈ ಸಂಸ್ಥೆಯ ಸ್ಥಾಪನೆಯ ಸ್ಮರಣಾರ್ಥವಾಗಿ ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತಿದೆ.

*ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ*

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವೂ ಒಂದು ಶಾಸನಬದ್ಧ ಸಂಸ್ಥೆಯಾಗಿದ್ದು, ಇದು ಮಾಧ್ಯಮದ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ಹೊಂದಿದೆ. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವನ್ನು ನೈತಿಕ ಕಾವಲು ನಾಯಿ ಎಂದು ಕರೆಯಲಾಗುತ್ತದೆ. ಇದು ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಸಂಸ್ಥೆಯಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಿರುತ್ತಾರೆ. ಅವರನ್ನು ಹೊರತುಪಡಿಸಿ 28 ಇತರ ಸದಸ್ಯರಿದ್ದಾರೆ, ಅದರಲ್ಲಿ 20 ಮಂದಿ ಪತ್ರಿಕಾ ಮಾಧ್ಯಮದವರು, ಐವರು ಸದಸ್ಯರನ್ನು ಸಂಸತ್ತಿನ ಉಭಯ ಸದನಗಳಿಂದ ನಾಮನಿರ್ದೇಶನ ಮಾಡಲಾಗುತ್ತದೆ. ಉಳಿದ ಮೂವರು ಸದಸ್ಯರು ಸಾಂಸ್ಕೃತಿಕ, ಸಾಹಿತ್ಯ ಮತ್ತು ಕಾನೂನು ಕ್ಷೇತ್ರಗಳ ಪ್ರತಿನಿಧಿಗಳಾಗಿದ್ದಾರೆ.

ಇದನ್ನೂ ಓದಿ: ಬದುಕನ್ನೇ ಹಾಳುಮಾಡುವ ಮನುಷ್ಯನ ಕೆಟ್ಟ ಗುಣಗಳು ಇವೆಯಂತೆ

*ರಾಷ್ಟ್ರೀಯ ಪತ್ರಿಕಾ ದಿನದ ಮಹತ್ವ*

ಪತ್ರಿಕಾ ಸ್ವಾತಂತ್ರ್ಯವು ಅತೀ ಮುಖ್ಯವಾಗಿದೆ. ಇದು ಸರ್ಕಾರ ಮತ್ತು ನಾಗರಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪತ್ರಿಕಾ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಶದ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರವನ್ನು ಒದಗಿಸುವ ಕೆಲಸ ಮಾಡುತ್ತದೆ. ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕಾ ಮಾಧ್ಯಮವು ವಹಿಸುವ ಪಾತ್ರದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನವೂ ಮಹತ್ವದ್ದಾಗಿದೆ. ಈ ದಿನದಂದು ದೇಶದೆಲ್ಲೆಡೆ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ