National Safe Motherhood Day 2024: ತಾಯ್ತನದ ಬೆಚ್ಚನೆ ಅನುಭವದ ಜೊತೆಗೆ ಆರೋಗ್ಯದ ಮೇಲೂ ಇರಲಿ ಗಮನ!

ಮನೆಗೆ ಹೊಸ ಅತಿಥಿಯ ಆಗಮನ ಎಷ್ಟು ಸಂತೋಷ ತರುತ್ತದೆಯೇ, ಹೆರಿಗೆ ಎನ್ನುವುದು ಅಷ್ಟೇ ಭಯ ಪಡಿಸುತ್ತದೆ. ಈ ತಾಯಿ ಹಾಗೂ ನವಜಾತ ಶಿಶುಗಳ ಮರಣದ ಪ್ರಮಾಣವನ್ನು ಕಡಿಮೆ ಮಾಡುವ ಸದುದ್ದೇಶದಿಂದ ಏಪ್ರಿಲ್ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಹಿಂದಿನ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

National Safe Motherhood Day 2024: ತಾಯ್ತನದ ಬೆಚ್ಚನೆ ಅನುಭವದ ಜೊತೆಗೆ ಆರೋಗ್ಯದ ಮೇಲೂ ಇರಲಿ ಗಮನ!
National Safe Motherhood Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: Apr 10, 2024 | 5:49 PM

ಒಂದು ಹೆಣ್ಣು ತಾಯಿಯಾದಾಗಲೇ ಆ ಹೆಣ್ಣಿನ ಜೀವನ ಪರಿಪೂರ್ಣವಾಗುತ್ತದೆ ಎನ್ನುವ ಮಾತಿದೆ. ಆದರೆ ತಾಯಿಯಾಗುವುದೆಂದರೆ ಅಷ್ಟು ಸುಲಭದ ಮಾತಲ್ಲ ಬಿಡಿ. ಹೆಣ್ಣು ಮಗುವಿಗೆ ಜನ್ಮ ನೀಡುವ ಸಮಯದಲ್ಲಿ ಆಕೆಯು ಅನುಭವಿಸುವ ನೋವನ್ನು ಹೇಳಲು ಅಸಾಧ್ಯ. ಹೆಣ್ಣು ಗರ್ಭಿಣಿಯಾದಾಗಿನಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲವಾರು ತೊಂದರೆಗಳನ್ನು ಅನುಭವಿಸುತ್ತಾಳೆ. ವಾಂತಿ, ವಾಕರಿಕೆ, ಮೂಡ್ ಬದಲಾವಣೆಗಳು ಮತ್ತು ಅಸಾಮಾನ್ಯ ಕಡುಬಯಕೆಗಳು ಈ ಎಲ್ಲಾ ಪರಿಸ್ಥಿತಿಗಳನ್ನು ಅನುಭವಿಸುತ್ತಾಳೆ. ಅದಲ್ಲದೇ, ಮಗುವಿಗೆ ಜನ್ಮ ನೀಡುವ ಸಮಯದಲ್ಲಿ ಸಾವನ್ನಪ್ಪಿದ ಅದೆಷ್ಟೋ ಪ್ರಕರಣಗಳಿವೆ. ಹೀಗಾಗಿ ಗರ್ಭಿಣಿಯರು ಹಾಗೂ ತಾಯಂದಿರ ಆರೋಗ್ಯ ರಕ್ಷಣೆಯ ಉದ್ದೇಶದಿಂದಲೇ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಪ್ರತಿ ವರ್ಷ ಏಪ್ರಿಲ್ 11 ರಂದು ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಇತಿಹಾಸ:

2003 ರಲ್ಲಿ, ಭಾರತ ಸರ್ಕಾರವು ಏಪ್ರಿಲ್ 11 ರಂದು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲು ಘೋಷಿಸಿತು. ಅದಕ್ಕೂ ಮೊದಲು ಈ ಅಭಿಯಾನವನ್ನು ವೈಟ್ ರಿಬ್ಬನ್ ಅಲೈಯನ್ಸ್ ಇಂಡಿಯ ಆರಂಭಿಸಿತು. ಈ ಸಂಸ್ಥೆಯು ತಾಯಂದಿರು ಮತ್ತು ಗರ್ಭಿಣಿಯರ ಆರೋಗ್ಯ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಕೊನೆಗೆ ಸರ್ಕಾರವು ಈ ದಿನವನ್ನು ಆಚರಿಸಲು ಮುಂದಾಯಿತು. ಅಂದಿನಿಂದ ಪ್ರತಿ ವರ್ಷವು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಯುವಜನರಲ್ಲಿ ಹೃದಯಾಘಾತಕ್ಕೆ ಕಾರಣವೇನು? ಈ ತಪ್ಪು ಮಾಡಬೇಡಿ

ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನದ ಮಹತ್ವ:

ಮಹಿಳೆಯೂ ಗರ್ಭಧರಿಸಿದ ನಂತರದಲ್ಲಿ ಆಕೆಯ ಆರೋಗ್ಯವು ಬಹಳ ಮುಖ್ಯವಾಗುತ್ತದೆ. ಹೀಗಾಗಿ ಗರ್ಭಧಾರಣೆ, ಹೆರಿಗೆ ಹಾಗೂ ಹೆರಿಗೆಯ ನಂತರದ ಆರೋಗ್ಯ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಆಚರಿಸಲಾಗುತ್ತದೆ. ಅದಲ್ಲದೇ ಸುರಕ್ಷಿತ ತಾಯ್ತನವನ್ನು ಪಡೆಯಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹಾಗೂ ವೈದ್ಯಕೀಯ ತಪಾಸಣೆ ಎಷ್ಟು ಮುಖ್ಯ ಎನ್ನುವುದನ್ನು ತಿಳಿಸಲಾಗುತ್ತದೆ. ಈ ಬಗ್ಗೆ ಪ್ರಾಥಮಿಕ ಆರೋಗ್ಯ ಸಂಸ್ಥೆಗಳು ಸೇರಿದಂತೆ ಇತರ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ