National safety day 2024 : ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತಕ್ಕೆ ದಾರಿ, ಎಲ್ಲದರಲ್ಲಿಯೂ ಇರಲಿ ಎಚ್ಚರ!

| Updated By: ಅಕ್ಷತಾ ವರ್ಕಾಡಿ

Updated on: Mar 03, 2024 | 10:40 AM

ಕೆಲವೊಮ್ಮೆ ಗೊತ್ತೋ ಗೊತ್ತಿಲ್ಲದೇನೇ ಅವಘಡಗಳು ಸಂಭವಿಸುತ್ತದೆ. ನಮ್ಮ ಬೇಜವಾಬ್ದಾರಿತನದಿಂದ ಆಸ್ತಿ ಪಾಸ್ತಿ ಸೇರಿದಂತೆ ಜೀವ ಹಾನಿಯು ಆಗಬಹುದು. ಹೀಗಾಗಿ ಜನರಲ್ಲಿ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಿಸುವುದರ ಹಿಂದಿನ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

National safety day 2024 : ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತಕ್ಕೆ ದಾರಿ, ಎಲ್ಲದರಲ್ಲಿಯೂ ಇರಲಿ ಎಚ್ಚರ!
National safety day 2024
Follow us on

ಸುರಕ್ಷತೆಯೆನ್ನುವುದು ಎಲ್ಲರಿಗೂ ಮುಖ್ಯ. ಹೀಗಾಗಿ ತಾವು ಹಾಗೂ ತಮ್ಮ ಕುಟುಂಬದವರು ಸುರಕ್ಷಿತವಾಗಿರಲಿ ಎಂದು ಬಯಸುವುದು ಸಹಜ. ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಾಗ ಎಚ್ಚರ ತಪ್ಪಿದರೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜನಸಾಮಾನ್ಯರು ಎಷ್ಟೇ ಜಾಗರೂಕರಾಗಿದ್ದರೂ ಕೆಲವೊಮ್ಮೆ ಕೆಲಸ ಸ್ಥಳಗಳಲ್ಲಿ ಅಪಘಾತ, ಸಣ್ಣ ಪುಟ್ಟ ಗಾಯ, ಅಗ್ನಿ ಅವಘಡ ಸೇರಿದಂತೆ ಅಚಾನಕ್ಕಾಗಿ  ಅನಾಹುತಗಳು ಸಂಭವಿಸಬಹುದು. ಇಂತಹ ಅಪಘಾತಗಳಾದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಬಗ್ಗೆ ಹಾಗೂ ರಕ್ಷಣಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸದುದ್ದೇಶದಿಂದ ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀ ಯ ಸುರಕ್ಷತಾ ದಿನದ ಇತಿಹಾಸ:

ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಕುರಿತು ಅರಿವು ಮೂಡಿಸಲು ಹಾಗೂ ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಸಲುವಾಗಿ ಭಾರತ ಸರ್ಕಾರವು ರಾಷ್ಟ್ರೀಯ ಸುರಕ್ಷತಾ ಮಂಡಳಿಯ ರಚಿಸಿದೆ. ಇದರಡಿಯಲ್ಲಿ ರಸ್ತೆ ಸುರಕ್ಷತೆ, ಕೆಲಸದ ಸ್ಥಳದಲ್ಲಿನ ಸುರಕ್ಷತೆ, ಮಾನವ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಕುರಿತು ತಿಳಿ ಹೇಳುವುದು ಸೇರಿಕೊಂಡಿದೆ. 1966ರ ಮಾರ್ಚ್ 4ರಂದು ರಾಷ್ಟ್ರೀಯ ಸುರಕ್ಷತಾ ಮಂಡಳಿಯನ್ನು ಪ್ರಾರಂಭಿಸಲಾಯಿತು. ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಪ್ರಾರಂಭವಾದ ಸವಿನೆನಪಿಗಾಗಿ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಹೀಗಾಗಿ ಪ್ರತಿವರ್ಷವು ಮಾರ್ಚ್ 6ರಿಂದ 10ರ ವರೆಗೆ ರಾಷ್ಟ್ರದಾದ್ಯಂ ತ ರಾಷ್ಟ್ರೀ ಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಾರ್ಚ್ ನಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳ ಮಾಹಿತಿ ಇಲ್ಲಿದೆ

ರಾಷ್ಟ್ರೀ ಯ ಸುರಕ್ಷತಾ ದಿನದ ಮಹತ್ವ:

ಅರಿವಿನ ಕೊರತೆಯಿಂದಾಗುವ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಕೆಲಸ ಸ್ಥಳಗಳಲ್ಲಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಅನಾಹುತಗಳು ನಡೆಯದಂತೆ ನೋಡಿಕೊಳ್ಳುವುದು ಈ ದಿನದ ಉದ್ದೇಶವಾಗಿದೆ. ಈ ದಿನದಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ವಿಶೇಷ ತರಬೇತಿ ಕೋರ್ಸ್‌ಗಳು, ಸಮ್ಮೇಳನಗಳು, ಸೆಮಿನಾರ್‌ಗಳು ಮತ್ತು ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ. ರಾಷ್ಟ್ರೀಯ, ರಾಜ್ಯ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಅವಘಡಗಳು ಸಂಭವಿಸಿದಾಗ ಪ್ರಾಥಮಿಕವಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹೇಗೆ ಎನ್ನುವ ಬಗೆಗೆ ತರಬೇತಿಯನ್ನು ನೀಡಲಾಗುತ್ತದೆ. ಅದಲ್ಲದೇ, ಸಮುದಾಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ