National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ?
ಯಾವಾಗ, ಹೇಗೆ, ಯಾವ ರೀತಿ ಅವಘಗಡಗಳು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇಂತಹ ದುರ್ಘಟನೆಗಳು ಸಂಭವಿಸಿದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಹೇಗೆಂಬುದನ್ನು ತಿಳಿಸಲು ಹಾಗೂ ಸುರಕ್ಷತೆ ಮತ್ತು ಭದ್ರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಪ್ರಾರಂಭವಾದದ್ದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.

ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 4 ರಂದು ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ರಾಷ್ಟ್ರೀಯ ಸುರಕ್ಷತಾ ದಿನದ ಇತಿಹಾಸವೇನು?
ಸುರಕ್ಷತಾ ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಹಾಗೂ ನಮ್ಮನ್ನು ನಾವು ರಕ್ಷಿಸಿಕೊಳ್ಳುವ ಕುರಿತು ಅರಿವು ಮೂಡಿಸುವ ಸಲುವಾಗಿ ಭಾರತ ಸರ್ಕಾರದ ಕಾರ್ಮಿಕ ಸಚಿವಾಲಯವು ರಾಷ್ಟ್ರೀಯ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿತು. ರಸ್ತೆ ಸುರಕ್ಷತೆ, ಕೆಲಸದ ಸ್ಥಳದಲ್ಲಿನ ಸುರಕ್ಷತೆ, ಮಾನವ ಆರೋಗ್ಯ ಮತ್ತು ಪರಿಸರ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಈ ಮಂಡಳಿಯ ಗುರಿಯಾಗಿದೆ. ಈ ರಾಷ್ಟ್ರೀಯ ಸುರಕ್ಷತಾ ಮಂಡಳಿ ಪ್ರಾರಂಭವಾದ ಸವಿನೆನಪಿಗಾಗಿ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ಮೊದಲ ರಾಷ್ಟ್ರೀಯ ಸುರಕ್ಷತಾ ದಿನವನ್ನು 1972 ರಲ್ಲಿ ಆಚರಿಸಲಾಯಿತು. ಕೈಗಾರಿಕಾ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಅಲ್ಲದೆ ಪ್ರತಿವರ್ಷವು ಮಾರ್ಚ್ 6ರಿಂದ 10ರ ವರೆಗೆ ರಾಷ್ಟ್ರದಾದ್ಯಂತ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಭದ್ರತಾ ದಿನದ ಉದ್ದೇಶವೇನು?
ಸುರಕ್ಷತೆಯ ಮಹತ್ವವನ್ನು ಉತ್ತೇಜಿಸಲು ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 4 ರಂದು ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸಲಾಗುತ್ತದೆ. ಜನರು ಕೆಲಸದ ಸ್ಥಳಗಳಲ್ಲಿ, ತಮ್ಮ ಮನೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಈ ದಿನ ಸುರಕ್ಷತಾ ರ್ಯಾಲಿಗಳು, ಸುರಕ್ಷತಾ ತರಬೇತಿ, ಜಾಗೃತಿ ಅಭಿಯಾನಗಳು ಮತ್ತು ಕೆಲಸದ ಸ್ಥಳದಲ್ಲಿ ಸುರಕ್ಷತಾ ಪ್ರಮಾಣಪತ್ರಗಳ ವಿತರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಇದನ್ನೂ ಓದಿ: ನಮ್ಮಂತೆಯೇ ವನ್ಯಜೀವಿಗಳಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ
ರಾಷ್ಟ್ರೀಯ ಭದ್ರತಾ ದಿನದ ಮಹತ್ವವೇನು?
- ಎಲ್ಲಾ ವಲಯಗಳಲ್ಲಿ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಅಪಘಾತಗಳನ್ನು ಕಡಿಮೆ ಮಾಡುವುದು ರಾಷ್ಟ್ರೀಯ ಸುರಕ್ಷತಾ ದಿನದ ಉದ್ದೇಶವಾಗಿದೆ.
- ಕೈಗಾರಿಕಾ ಅಪಘಾತಗಳನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ದಿನವು ಕಾರ್ಮಿಕರು ಮತ್ತು ಉದ್ಯೋಗಿಗಳ ಜೀವಗಳನ್ನು ರಕ್ಷಿಸಲು ಕಾರ್ಖಾನೆಗಳು, ನಿರ್ಮಾಣ ಸ್ಥಳಗಳು ಮತ್ತು ಇತರ ಕೆಲಸದ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಕಾರ್ಮಿಕರಿಗೆ ನೆನಪಿಸುತ್ತದೆ.
- ಯಾವುದೇ ವಲಯದಲ್ಲಿ ಕೆಲಸ ಮಾಡುವ ನಾಗರಿಕರ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸುರಕ್ಷತಾ ಸಪ್ತಾಹವನ್ನು ಸಹ ಆಚರಿಸಲಾಗುತ್ತದೆ. ಈ ಸಮಯದಲ್ಲಿ, ಪ್ರತಿಯೊಂದು ವಲಯದ ಕಾರ್ಮಿಕರಿಗೆ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಕೈಗಾರಿಕಾ ಅಪಘಾತಗಳನ್ನು ತಪ್ಪಿಸುವ ಮಾರ್ಗಗಳು ಮತ್ತು ಅವುಗಳಿಂದ ಉಂಟಾಗುವ ಹಾನಿಯ ಬಗ್ಗೆ ತಿಳಿಸಲಾಗುತ್ತದೆ. ಇದಕ್ಕಾಗಿ, ಅನೇಕ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
