National Science Day 2023: ಸಿವಿ ರಾಮನ್​ ಜನ್ಮದಿನದಂದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸುವುದೇಕೆ? ಇಲ್ಲಿದೆ ಮಾಹಿತಿ

Raman Effect: ಒಂದು ದಿನ ಹೀಗೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಸಿವಿ ರಾಮನ್‌ ಅವರಿಗೆ ಸಮುದ್ರ ಏಕೆ ನೀಲಿಯಾಗಿದೆ ಎಂಬ ಪ್ರಶ್ನೆ ಉದ್ಭವಿಸಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆ ಮಾಡಲು ಹೊರಟ ರಾಮನ್‌ ಮಹತ್ವದ ಆವಿಷ್ಕಾರವನ್ನು ಮಾಡಿದರು.

National Science Day 2023: ಸಿವಿ ರಾಮನ್​ ಜನ್ಮದಿನದಂದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸುವುದೇಕೆ? ಇಲ್ಲಿದೆ ಮಾಹಿತಿ
ಸಿವಿ ರಾಮನ್
Follow us
TV9 Web
| Updated By: ಆಯೇಷಾ ಬಾನು

Updated on:Feb 28, 2023 | 11:03 AM

National Science Day 2023 & DR CV Raman: ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನ (National Science Day) ವನ್ನು ಆಚರಣೆ ಮಾಡಲಾಗುತ್ತದೆ. ಜನಸಾಮನ್ಯರಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮೂಲ ಉದ್ದೇಶ. ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಇಂದು ಸ್ಮರಿಸಲಾಗುತ್ತೆ.

ಫೆಬ್ರವರಿ 28 ರಂದೇ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಣೆ ಮಾಡಬೇಕು ಎಂದು 1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ (NCSTC) ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆಗ ಎನ್‌ಸಿಎಸ್‌ಟಿಸಿಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಿಸಿತು. ನಂತರ ಮೊದಲ ರಾಷ್ಟ್ರೀಯ ವಿಜ್ಞಾನ ದಿನವನ್ನು 1987 ಫೆಬ್ರವರಿ 28 ರಂದು ಆಚರಣೆ ಮಾಡಲಾಯಿತು.

ಈ ದಿನ, 1928 ರಲ್ಲಿ, ಭಾರತೀಯ ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟ ರಾಮನ್(ಸಿವಿ ರಾಮನ್) ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ರಾಮನ್ ಪರಿಣಾಮ ಎಂಬ ಮಹತ್ವದ ಆವಿಷ್ಕಾರವನ್ನು ಮಾಡಿದರು. ಅವರ ಈ ಕೆಲಸಕ್ಕಾಗಿ 1930 ರಲ್ಲಿ ಭೌತಶಾಸ್ತ್ರದ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನು ನೀಡಲಾಯಿತು. ವಿಜ್ಞಾನ ವಿಭಾಗದಿಂದ ನೊಬೆಲ್ ಪಡೆದ ಏಷ್ಯಾದ ಮೊಟ್ಟ ಮೊದಲ ವಿಜ್ಞಾನಿ ಎಂಬ ಖ್ಯಾತಿ ರಾಮನ್ ಅವರಿಗಿದೆ.

ರಾಮನ್ ಪರಿಣಾಮ ಎಂದರೇನು?

ಒಂದು ದಿನ ಹೀಗೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದ ಸಿವಿ ರಾಮನ್‌ ಅವರಿಗೆ ಸಮುದ್ರ ಏಕೆ ನೀಲಿಯಾಗಿದೆ ಎಂಬ ಪ್ರಶ್ನೆ ಉದ್ಭವಿಸಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆ ಮಾಡಲು ಹೊರಟ ರಾಮನ್‌ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯವನ್ನು ಕಂಡುಹಿಡಿದರು. ಇದೇ ಅಂಶವನ್ನು ಇಟ್ಟುಕೊಂಡು ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದರು.

ಕೋಲ್ಕತಾದ ಇಂಡಿಯನ್‌ ಅಸೋಸಿಯೇಷನ್‌ ಫಾರ್‌ ಕಲ್ಟಿವೇಷನ್‌ ಆಫ್‌ ಸೈನ್ಸ್‌ನಲ್ಲಿ ರಾಮನ್‌ ಅವರು ತಮ್ಮ ಸಹೋದ್ಯೋಗಿಗಳೊಡನೆ ಅಧ್ಯಯನ ನಡೆಸಿ ರಾಮನ್‌ ಪರಿಣಾಮವನ್ನು ಅವಿಷ್ಕಾರ ಮಾಡಿದರು. ಅವರ ಈ ಸಾಧನೆಗೆ 1930ರಲ್ಲಿ ನೊಬೆಲ್‌ ಪುರಸ್ಕಾರ ದೊರೆತಿತು.

ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡುವ ಉದ್ದೇಶವೇನು?

ಈ ದಿನವನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು, ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲು, ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸಲು, ಪ್ರಯೋಗಗಳ ಮೂಲಕ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದಕ್ಕೆ ಈ ದಿನವನ್ನು ಆಚರಿಸಲಾಗುತ್ತೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 11:03 am, Tue, 28 February 23

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ