National Science Day 2025: ಸಿವಿ ರಾಮನ್​​ಗೂ ರಾಷ್ಟ್ರೀಯ ವಿಜ್ಞಾನ ದಿನಕ್ಕೂ ಏನು ಸಂಬಂಧ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತದ ಶ್ರೇಷ್ಠ ವಿಜ್ಞಾನಿ ಡಾ. ಸಿ. ವಿ. ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರದ ಸ್ಮರಣಾರ್ಥ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಜನಸಾಮಾನ್ಯರಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವುದೇ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮೂಲ ಉದ್ದೇಶವಾಗಿದ್ದು, ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ನೆನಪಿಸಲಾಗುತ್ತದೆ. ಹಾಗಾದ್ರೆ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ ಶುರುವಾದದ್ದು ಹೇಗೆ? ಏನಿದರ ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

National Science Day 2025: ಸಿವಿ ರಾಮನ್​​ಗೂ ರಾಷ್ಟ್ರೀಯ ವಿಜ್ಞಾನ ದಿನಕ್ಕೂ ಏನು ಸಂಬಂಧ? ಇಲ್ಲಿದೆ ಸಂಪೂರ್ಣ ಮಾಹಿತಿ
ಸಿವಿ ರಾಮನ್
Edited By:

Updated on: Feb 27, 2025 | 5:43 PM

ಫೆಬ್ರವರಿ 28 ಎಂದರೆ ನೆನಪಾಗೋದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day). ಈ ದಿನ 1928 ರಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಚಂದ್ರಶೇಖರ ವೆಂಕಟ ರಾಮನ್ (C.V.Raman) ಸ್ಪೆಕ್ಟ್ರೋಸ್ಕೋಪಿ ಕ್ಷೇತ್ರದಲ್ಲಿ ಪ್ರಮುಖ ಆವಿಷ್ಕಾರವನ್ನು ಮಾಡಿದರು, ಇದನ್ನು ‘ರಾಮನ್ ಎಫೆಕ್ಟ್’ ಎಂದು ಹೆಸರಿಸಲಾಯಿತು. ಇದರ ಸ್ಮರಣಾರ್ಥವಾಗಿ ಫೆಬ್ರವರಿ 28 ರಂದು ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಜನ ಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಉದ್ದೇಶವು ಈ ದಿನದ್ದಾಗಿದೆ.

ರಾಷ್ಟ್ರೀಯ ವಿಜ್ಞಾನದ ದಿನದ ಇತಿಹಾಸ

1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ನ್ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28 ರಂದು ಆಚರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತ್ತು. ಆ ಬಳಿಕ ಎನ್‌ಸಿಎಸ್‌ಟಿಸಿ’ಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರವು ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಣೆಯನ್ನು ಮಾಡಿತು. ತದನಂತರದಲ್ಲಿ ಮೊದಲ ಬಾರಿಗೆ 1987 ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಅಂದಿನಿಂದ ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಪ್ರೀತಿಯಲ್ಲಿ ಮೋಸ ಹೋಗದಿರಲು ಚಾಣಕ್ಯ ಹೇಳುವ ಈ ಸಲಹೆ ತಪ್ಪದೇ ಪಾಲಿಸಿ

ಇದನ್ನೂ ಓದಿ
ಈ ವಿಷಯ ತಿಳಿದಿದ್ದರೆ ಪ್ರೀತಿಯಲ್ಲಿ ನಿಮಗೆ ಯಾರು ಮೋಸ ಮಾಡಲಾರರು
ಎರಡು ಕೈ ಜೋಡಿಸಿದಾಗ ನಿಮ್ಮ ಹೆಬ್ಬೆರಳೇ ಹೇಳುತ್ತೆ ರಹಸ್ಯಮಯ ವ್ಯಕ್ತಿತ್ವ
ಪೋಷಕರೇ, ಒಂದೇ ಮಗು ಎಂದು ಈ ರೀತಿ ಬೆಳೆಸುವ ಮುನ್ನ ಇರಲಿ ಎಚ್ಚರ
ಚಿತ್ರದಲ್ಲಿ ಮೊದಲು ಈ ಪ್ರಾಣಿ ನೋಡಿದ್ರೆ ನಿಮ್ಮದು ಅಂತರ್ಮುಖಿ ವ್ಯಕ್ತಿತ್ವ

ರಾಷ್ಟ್ರೀಯ ವಿಜ್ಞಾನದ ದಿನದ ಮಹತ್ವ ಹಾಗೂ ಆಚರಣೆ

ವಿಜ್ಞಾನ ಹಾಗೂ ತಂತ್ರಜ್ಞಾನದ ಕುರಿತಾದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುವುದು. ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಹಾಗೂ ವೈಜ್ಞಾನಿಕ ಅನ್ವೇಷಣೆಗಳತ್ತ ಯುವ ಮನಸ್ಸುಗಳನ್ನು ಪ್ರೇರೇಪಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಪ್ರಶಂಸಿಸಲು, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವುದು. ಹೊಸ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದಂದು ದೇಶಾದ್ಯಂತ ವಿಶೇಷವಾಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಅನೇಕ ರೀತಿಯ ಸ್ಪರ್ಧೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ