
ಮಾನವನ ಜೀವನದಲ್ಲಿ ವೈಜ್ಞಾನಿಕ ಬೆಳವಣಿಗೆಗೆ ಬದಲಾವಣೆಯನ್ನು ಧಾರೆಯೆರೆದುಕೊಟ್ಟಿದೆ. ಹೀಗಾಗಿ ಈ ಮಾನವನ ಅಭಿವೃದ್ಧಿಗೂ ವಿಜ್ಞಾನ ಪಾತ್ರವು ಇದೆ. ರೊಬೊಟ್, ಕಂಪ್ಯೂಟರ್, ಮೊಬೈಲ್ ಇನ್ನಿತ್ತರ ಸಾಧನಗಳನ್ನು ವಿಜ್ಞಾನದ ಸಹಾಯದಿಂದ ಕಂಡು ಹಿಡಿಯಲಾಗಿದ್ದು, ಇದೆಲ್ಲವೂ ಮನುಷ್ಯನ ಜೀವನವನ್ನು ಉತ್ತಮವಾಗಿಸಿದ್ದು ಮಾತ್ರವಲ್ಲದೇ ಸುಲಭವಾಗಿ ಸಾಗುವಂತೆ ಮಾಡಿದೆ. ಭಾರತವೂ ವಿಜ್ಞಾನ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಮಹಾನ್ ವಿಜ್ಞಾನಿಗಳು ಭಾರತವನ್ನು ವಿಶ್ವದಲ್ಲಿಯೇ ಗುರುತಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಪ್ರತಿ ವರ್ಷ ಫೆಬ್ರವರಿ 28 ರಂದು ಸರ್ ಸಿ ವಿ ರಾಮನ್ ರ ‘ರಾಮನ್ ಪರಿಣಾಮ’ ಅವಿಷ್ಕಾರದ ಸ್ಮರಣಾರ್ಥವಾಗಿ, ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.
1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಂಮ್ಯುನಿಕೇಷನ್ನ್ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28 ರಂದು ಆಚರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತ್ತು. ಆ ಬಳಿಕ ಎನ್‌ಸಿಎಸ್‌ಟಿಸಿ’ಯ ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಣೆಯನ್ನು ಮಾಡಿತು. ಆ ಬಳಿಕ ಮೊದಲ ಬಾರಿಗೆ 1987 ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಅಂದಿನಿಂದ ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.
ಇದನ್ನೂ ಓದಿ: ಕೇವಲ 18 ತಿಂಗಳಲ್ಲಿ 108 ಕೆಜಿ ಇಳಿಸಿದ್ದ ಅನಂತ್ ಅಂಬಾನಿ; ಇಲ್ಲಿದೆ ಡಯೆಟ್ ಪ್ಲಾನ್
ಪ್ರತಿ ವರ್ಷ ಫೆಬ್ರವರಿ 28 ರಂದು ಆಚರಿಸಲಾಗುವ ರಾಷ್ಟ್ರೀಯ ವಿಜ್ಞಾನ ದಿನದಂದು ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವಲ್ಲಿ ಹಾಗೂ ವೈಜ್ಞಾನಿಕ ಅನ್ವೇಷಣೆಗಳತ್ತ ಯುವ ಮನಸ್ಸುಗಳನ್ನು ಪ್ರೇರೇಪಿಸುವತ್ತ ಕಾರ್ಯನಿರ್ವಹಿಸುತ್ತದೆ. ಅದಲ್ಲದೇ, ನಮ್ಮ ರಾಷ್ಟ್ರದ ಅಭಿವೃದ್ಧಿಗೆ ನಮ್ಮ ವೈಜ್ಞಾನಿಕ ಸಮುದಾಯದ ಕೊಡುಗೆಗಳನ್ನು ಪ್ರಶಂಸಿಸಲು ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವುದಕ್ಕೆ ಇದೊಂದು ಒಳ್ಳೆಯ ವೇದಿಕೆಯಾಗಿದೆ. ಈ ದಿನದಂದು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವುದು. ಹೊಸ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಗುರಿಯನ್ನು ಒಳಗೊಂಡಿದೆ. ಸರ್ಕಾರಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ವೈಜ್ಞಾನಿಕ ಸಂಸ್ಥೆಗಳು ಹೀಗೆ ನಾನಾ ಸಂಸ್ಥೆಗಳು ವಿಜ್ಞಾನ ದಿನವನ್ನು ಆಚರಿಸುತ್ತದೆ. ಈ ದಿನದಂದು ವಿಜ್ಞಾನಕ್ಕೆ ಸಂಬಂಧಪಟ್ಟ ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ