National Space Day 2024 : ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ

ಬಾಹ್ಯಕಾಶ ಕ್ಷೇತ್ರದಲ್ಲಿಇಡೀ ವಿಶ್ವವೇ ನಿಬ್ಬೆರಾಗುವಂತೆ ಮಾಡಿದ ಭಾರತದ ಸಾಧನೆ ಚಂದ್ರಯಾನ -3. ಹೌದು, ಇಂದು ಮೊದಲ ವರ್ಷದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಸ್ಮರಣಾರ್ಥವಾಗಿ ಆಗಸ್ಟ್ 23ರಂದು ಪ್ರತಿವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಹಾಗಾದರೆ ಈ ದಿನದ ಇತಿಹಾಸ, ಮಹತ್ವ ಹಾಗೂ ಆಚರಣೆ ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

National Space Day 2024 : ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ
ಟಿವಿ9 ಕನ್ನಡ ಫೋಟೋ ( ಸಾಂದರ್ಭಿಕ ಚಿತ್ರ)
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 23, 2024 | 9:10 AM

ಕಳೆದ ವರ್ಷ 2023 ಆಗಸ್ಟ್ 23 ರಂದು ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿಯ ‘ಶಿವ ಶಕ್ತಿ’ ಬಿಂದುವಿನಲ್ಲಿ ಯಶಸ್ವಿಯಾಗಿ ಇಳಿಯಿತು. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ 3 ಸಾಫ್ಟ್‌ ಲ್ಯಾಂಡಿಂಗ್‌ ಯಶಸ್ವಿಯಾದ ಕ್ಷಣವಿದು. ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಲ್ಯಾಂಡರ್ ಇಳಿಸಿದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಗೆ ಭಾರತವು ಪಾತ್ರವಾಯಿತು. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಆಗಸ್ಟ್ 23 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲು ಮುಂದಾಗಿದೆ.

ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಘೋಷಿಸಿದ್ದ ಮೋದಿ

ಆಗಸ್ಟ್ 26 ರಂದು ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ತಿಳಿಸಿದ್ದರು. ಈ ಮೂಲಕ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದ್ದರು.

ರಾಷ್ಟ್ರೀಯ ಬಾಹ್ಯಾಕಾಶ ದಿನದ ಮೊದಲ ವರ್ಷದ ಥೀಮ್

ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ. ಭಾರತವು ತನ್ನ ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು (ಎನ್‌ಎಸ್‌ಪಿಡಿ -2024) 2024ರ ಆಗಸ್ಟ್‌ 23ರಂದು ‘ಚಂದ್ರನನ್ನು ಸ್ಪರ್ಶಿಸುವಾಗ ಜೀವನವನ್ನು ಸ್ಪರ್ಶಿಸುವುದು: ಭಾರತದ ಬಾಹ್ಯಾಕಾಶ ಕಥೆ’ ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಸರಿಸುಮಾರು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

ಇದನ್ನೂ ಓದಿ: EOS-8 ಮಿಷನ್ ಉಡಾವಣೆ ಯಶಸ್ವಿ, ಇದು ಭಾರತಕ್ಕೆ ಬರುವ ಅಪಾಯಗಳ ಬಗ್ಗೆ ನೀಡುತ್ತೆ ಎಚ್ಚರಿಕೆ

ಯಶಸ್ವಿಯಾಗಿದ್ದ ಚಂದ್ರಯಾನ-3 ಉಡಾವಣೆ

ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು 2023 ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬಾಹುಬಲಿ ಲಾಂಚ್ ವೆಹಿಕಲ್ ಮಾರ್ಕ್-III (LVM-3) ನಲ್ಲಿ ಯಶಸ್ವಿಯಾಗಿ ಉಡಾಯಿಸಲಾಗಿತ್ತು. ಇದು ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್ ಮಾಡ್ಯೂಲ್ (ವಿಕ್ರಮ್) ಮತ್ತು ರೋವರ್ (ಪ್ರಜ್ಞಾನ್) ಹೊಂದಿರುವ ಬಾಹ್ಯಾಕಾಶ ನೌಕೆಯನ್ನು ಹೊಂದಿತ್ತು. ಆದರೆ ಈ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಇಳಿಯುವುದಕ್ಕೂ ಮೊದಲ ಅಂತಿಮ 15 ರಿಂದ 20 ನಿಮಿಷಗಳು ಬಹಳ ನಿರ್ಣಾಯಕ ಪಾತ್ರವನ್ನು ವಹಿಸಿತ್ತು. ಹೌದು, ಭೂಮಿಯಿಂದ ಚಂದ್ರನಲ್ಲಿಗೆ ತಲುಪಿದ್ದ 41ನೇ ದಿನದ ನಂತರದಲ್ಲಿ ಅಂದರೆ ಆಗಸ್ಟ್​ 23ರ ಸಂಜೆ ಚಂದ್ರನನ್ನು ವಿಕ್ರಮ್‌ ಲ್ಯಾಂಡರ್‌ ಸ್ಪರ್ಶಿಸಿತು. ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್​ ಇಳಿಯುವ ಮೂಲಕ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆಯನ್ನು ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ