AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Sports Day 2025: ಆಗಸ್ಟ್‌ 29 ರಂದೇ ಏಕೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಗೊತ್ತಾ?

ಕ್ರೀಡೆಯು ನಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿಡುವಲ್ಲಿ, ಸಕ್ರಿಯವಾಗಿಡುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯ ಈ ಮಹತ್ವವನ್ನು ಸಾರಲು ಹಾಗೂ ಜನರು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಲು ಹಾಕಿ ದಂತಕಥೆ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ಆಗಸ್ಟ್‌ 29 ರಂದು ಭಾರತರದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

National Sports Day 2025: ಆಗಸ್ಟ್‌ 29 ರಂದೇ ಏಕೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ ಗೊತ್ತಾ?
ರಾಷ್ಟ್ರೀಯ ಕ್ರೀಡಾದಿನ
ಮಾಲಾಶ್ರೀ ಅಂಚನ್​
|

Updated on: Aug 29, 2025 | 8:00 AM

Share

ನಮ್ಮನ್ನು ಆರೋಗ್ಯಕರವಾಗಿ ಮತ್ತು ಫಿಟ್‌ ಆಗಿ ಇಡುವಲ್ಲಿ ಕ್ರೀಡೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಯಲ್ಲಿ (Sports) ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಉತ್ತಮಗೊಳ್ಳುತ್ತದೆ. ಹೌದು ಕ್ರೀಡೆಯಿಂದ ಒತ್ತಡ ಕಡಿಮೆಯಾಗುತ್ತದೆ, ಮಾನಸಿಕ ಸ್ಥಿತಿ ಸುಧಾರಿಸುತ್ತದೆ. ಸಾಮಾಜಿಕ ಕೌಶಲ್ಯಗಳು, ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಕ್ರೀಡೆಗಳ ಈ ಮಹತ್ವವನ್ನು ಸಾರಲು ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜನರು ಹೆಚ್ಚು ಹೆಚ್ಚು ಭಾಗವಹಿಸುವಂತೆ ಪ್ರೋತ್ಸಾಹಿಸಲು ಹಾಕಿ ದಂತಕಥೆ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮ ದಿನವಾದ ಆಗಸ್ಟ್‌ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು(National Sports Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ:

ಭಾರತವು ಆಗಸ್ಟ್ 29, 2012 ರಂದು ಮೊದಲ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿತು. ಹಾಕಿ ಮಾಂತ್ರಿಕ ಹಾಗೂ ಶ್ರೇಷ್ಠ ಕ್ರೀಡಾಪಟು ಧ್ಯಾನ್‌ ಚಂದ್‌ ಅವರ ಮಹಾನ್‌ ಸಾಧನೆಯನ್ನು ಗೌರವಿಸುವ ಸಲುವಾಗಿ ಭಾರತ ಸರ್ಕಾರವು 2012 ರಂದು ಧ್ಯಾನ್‌ ಚಂದ್‌ ಅವರ ಜನ್ಮ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ಧ್ಯಾನ್‌ ಚಂದ್‌ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಆಗಸ್ಟ್‌ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕೀಡಾ ದಿನದ ಉದ್ದೇಶ:

ರಾಷ್ಟ್ರೀಯ ಕ್ರೀಡಾ ದಿನದ ಪ್ರಮುಖ ಉದ್ದೇಶವೆಂದರೆ ಕ್ರೀಡೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ದೈನಂದಿನ ಜೀವನದಲ್ಲಿ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವುದಾಗಿದೆ. ಫಿಟ್ ಇಂಡಿಯನ್ ವೆಬ್‌ಸೈಟ್ ಪ್ರಕಾರ, ಈ ದಿನದ ಉದ್ದೇಶವೆಂದರೆ ಕ್ರೀಡೆಯ ಮೌಲ್ಯಗಳಾದ ಶಿಸ್ತು, ಪರಿಶ್ರಮ, ಕ್ರೀಡಾ ಮನೋಭಾವ ಮತ್ತು ತಂಡದ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಜನರು ಕ್ರೀಡೆಗಳನ್ನು ಜೀವನದ ಅವಿಭಾಜ್ಯ ಅಂಗವಾಗಿಸಲು ಪ್ರೋತ್ಸಾಹಿಸುದಾಗಿದೆ.  ಅಲ್ಲದೆ ಈ ದಿನ ಫಿಟ್ ಮತ್ತು ಆರೋಗ್ಯವಾಗಿರುವುದರ ಮಹತ್ವವನ್ನು ಒತ್ತಿ ಹೇಳಲಾಗುತ್ತದೆ.

ಇದನ್ನೂ ಓದಿ
Image
ಅಂತಾರಾಷ್ಟ್ರೀಯ ಶ್ವಾನ ದಿನವನ್ನು ಆಚರಿಸುವುದೇಕೇ?
Image
ಸೊಳ್ಳೆಗಳ ದಿನವನ್ನು ಆಚರಿಸೋದೇಕೆ ಗೊತ್ತಾ?
Image
ಫೋಟೋಗ್ರಫಿ ದಿನದ ಇತಿಹಾಸ, ಮಹತ್ವವೇನು ತಿಳಿಯಿರಿ
Image
ವಿಶ್ವ ಆನೆ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು ಗೊತ್ತಾ?

ಇದನ್ನೂ ಓದಿ:  ಶ್ವಾನ ದಿನವನ್ನು ಆಚರಿಸುವುದೇಕೇ? ಈ ಆಚರಣೆಯ ಇತಿಹಾಸ, ಮಹತ್ವ ತಿಳಿಯಿರಿ

ಈ ದಿನದಂದು ಸರ್ಕಾರವು ಕ್ರೀಡೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಜೊತೆಗೆ ಈ ದಿನ ದೇಶದ ಪ್ರತಿಭಾನ್ವಿತ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಅನೇಕ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇವುಗಳಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ, ಧ್ಯಾನ್ ಚಂದ್ ಖೇಲ್‌ ರತ್ಮ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸೇರಿವೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಈ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ಪ್ರಶಸ್ತಿ ಪ್ರಧಾನ ಮಾಡುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ