National Sports Day : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್‌ ಆಟ ಕಂಡು ಬೆರಗಾಗಿದ್ದ ಹಿಟ್ಲರ್, ಅವರ ಮುಂದಿಟ್ಟಿದ್ದ ಪ್ರಸ್ತಾಪವೇನು?

ಒಬ್ಬ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರವು ಅಗಾಧವಾಗಿದೆ. ಭಾರತದಲ್ಲಿ ಕ್ರೀಡೆಗೆ ವಿಶೇಷ ಮಹತ್ವ ನೀಡುವ ಉದ್ದೇಶದಿಂದ ಅಪ್ರತಿಮ ಹಾಕಿಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮದಿನವಾದ ಆಗಸ್ಟ್‌ 29 ಅನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ಈ ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ, ಥೀಮ್ ಹಾಗೂ ಮಹತ್ವವೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

National Sports Day : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್‌ ಆಟ ಕಂಡು ಬೆರಗಾಗಿದ್ದ ಹಿಟ್ಲರ್, ಅವರ ಮುಂದಿಟ್ಟಿದ್ದ ಪ್ರಸ್ತಾಪವೇನು?
ಟಿವಿ9 ಫೋಟೋ (ಸಾಂದರ್ಭಿಕ ಚಿತ್ರ)
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 29, 2024 | 9:29 AM

ಒಬ್ಬ ವ್ಯಕ್ತಿಯನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಕ್ಕೆ ಕಾಪಾಡುವಲ್ಲಿ ಕ್ರೀಡೆಯೂ ಬಹುಮುಖ್ಯ ಪಾತ್ರವಹಿಸುತ್ತದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ವ್ಯಕ್ತಿಯನ್ನು ಸದಾ ಕ್ರಿಯಾಶೀಲರನ್ನಾಗಿಸುತ್ತದೆ. ಕ್ರೀಡೆಯ ಮಹತ್ವ ತಿಳಿಸಲು ಹಾಗೂ ಯುವ ಸಮುದಾಯವನ್ನು ಕ್ರೀಡೆಯತ್ತ ಸಕ್ರಿಯರನ್ನಾಗಿಸಲು ಭಾರತದಲ್ಲಿ ಪ್ರತಿವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕ್ರೀಡಾ ದಿನದ ಇತಿಹಾಸ ಹಾಗೂ ಮಹತ್ವ

ದೇಶದಲ್ಲಿ ಕ್ರೀಡೆಗೆ ವಿಶೇಷ ಮಹತ್ವ ನೀಡುವ ಸಲುವಾಗಿ 2012ರಲ್ಲಿ ದೇಶ ಕಂಡ ಅಪ್ರತಿಮ ಹಾಕಿಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮದಿನವನ್ನು ಆಗಸ್ಟ್‌ 29 ಅನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 29 ಆಗಸ್ಟ್ 1905 ರಂದು ಜನಿಸಿದ ಧ್ಯಾನ್​ ಚಂದ್ ಅವರನ್ನು ಗೌರವಿಸಲು ಈ ದಿನವು ವಿಶೇಷವಾಗಿದೆ. ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ.

ರಾಷ್ಟ್ರೀಯ ಕ್ರೀಡಾ ದಿನದ ಥೀಮ್ ಹಾಗೂ ಆಚರಣೆ

ಪ್ರತೀ ವರ್ಷವೂ ರಾಷ್ಟ್ರೀಯ ಕ್ರೀಡಾ ದಿನವನ್ನು ಒಂದೊಂದು ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ಈ ವರ್ಷ “ಶಾಂತಿಯುತ ಮತ್ತು ಅಂತರ್ಗತ ಸಮಾಜಗಳ ಉತ್ತೇಜನಕ್ಕಾಗಿ ಕ್ರೀಡೆ’ ಎನ್ನುವ ಥೀಮ್ ನೊಂದಿಗೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸಲಾಗುತ್ತದೆ. ಅದಲ್ಲದೇ, ರಾಷ್ಟ್ರೀಯ ಕ್ರೀಡಾ ದಿನದಂದು ಅತ್ಯುತ್ತಮ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ವಿವಿಧ ಪ್ರಶಸ್ತಿಗಳಾದ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ರಾಜೀವ್ ಗಾಂಧಿ ಕೇಲ್ ರತ್ನ, ದ್ರೋಣಾಚಾರ್ಯ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಮುಂತಾದವುಗಳನ್ನು ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ರಾಷ್ಟ್ರಪತಿ ಭವನದಲ್ಲಿ ನಡೆಯುತ್ತದೆ. ಭಾರತದ ರಾಷ್ಟ್ರಪತಿಯವರು ಕ್ರೀಡಾಪಟುಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾರೆ.

ಇದನ್ನೂ ಓದಿ: ಸೆಪ್ಟೆಂಬರ್​​ನಲ್ಲಿ ಆಚರಿಸುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳಿವು

ಯಾರು ಈ ಮೇಜರ್ ಧ್ಯಾನ್ ಚಂದ್?

  • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಹಾಕಿ ಕ್ರೀಡಾಪಟು ಎನಿಸಿಕೊಂಡಿದ್ದ ಮೇಜರ್ ಧ್ಯಾನ್ ಚಂದ್ ಆತ್ಯಾದ್ಭುತ ಪ್ರತಿಭೆ. ಮೇಜರ್ ಧ್ಯಾನದ ಚಂದ್ ಆಗಸ್ಟ್ 29,1905 ರಲ್ಲಿ ಅಹಮದಾಬಾದ್‌ನಲ್ಲಿ ಜನಿಸಿದರು. ಇವರು ಅತ್ಯುತ್ತಮ ಹಾಕಿ ಆಟಗಾರ ಎಂಬ ಖ್ಯಾತಿ ಗಳಿಸಿಕೊಂಡಿದ್ದರು.
  • ಸಣ್ಣ ವಯಸ್ಸಿನಲ್ಲಿಯೇ ಹಾಕಿಯ ಬಗ್ಗೆ ಆಸಕ್ತಿ ಹೊಂದಿದ್ದ ಈ ಧ್ಯಾನ್‌ಚಂದ್‌ ತನ್ನ ಹದಿನಾರನೇ ವಯಸ್ಸಿಗೆ ಸೇನೆಯತ್ತ ಮುಖ ಮಾಡಿದರು. ಆದರೆ ಇತ್ತ ಹಾಕಿಯಲ್ಲಿ ತೊಡಗಿಸಿಕೊಂಡಿದ್ದ ಧ್ಯಾನ್ ಚಂದ್ ಅವರು ಅಂತಾರಾಷ್ಟ್ರೀಯ ಹಾಕಿ ವೃತ್ತಿಯನ್ನು 1926ರಲ್ಲಿ ಆರಂಭಿಸಿದರು.
  •  1928, 1932, 1936 ರಲ್ಲಿ ಒಲಂಪಿಕ್ ನಲ್ಲಿ ಭಾರತಕ್ಕೆ ಸತತವಾಗಿ ಮೂರು ಬಂಗಾರದ ಪದಕಗಳನ್ನು ತಂದುಕೊಟ್ಟರು. ಹಾಕಿಯಲ್ಲಿ ಸಾಧನೆ ಮಾಡಿ ದೇಶವೇ ಹಿಂದೆ ತಿರುಗಿ ನೋಡುವಂತೆ ಮಾಡಿದ ಧ್ಯಾನ್‌ಚಂದ್‌ ಅವರು 1948ರಲ್ಲಿ ನಿವೃತ್ತರಾದರು.
  • ಕ್ರೀಡೆಯಲ್ಲೂ 400 ಕ್ಕೂ ಹೆಚ್ಚು ಗೋಲ್‌ಗಳನ್ನು ಹೊಡೆದು ಹಾಕಿ ಮಾಂತ್ರಿಕರೆನಿಸಿದ ಧ್ಯಾನ್‌ಚಂದ್‌ ಸಾಧನೆಗೆ ಭಾರತ ಸರ್ಕಾರವು 1956ರಲ್ಲಿ ಉನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ನೀಡಿ ಗೌರವಿಸಿತು.
  • ಧ್ಯಾನ್‌ಚಂದ್‌ ಅವರ ಸಾಧನೆಯನ್ನು ಗೌರವಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆಯು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ.
  • ಹೊಸದಿಲ್ಲಿಯ ಕ್ರಿಡಾಂಗಣಕ್ಕೆ ಈ ಆಟಗಾರನ ಹೆಸರನ್ನು ಇಡಲಾಗಿದೆ. ಈಗಾಗಲೇ ಈ ಸ್ಟೇಡಿಯಂ ಧ್ಯಾನ್‌ಚಂದ್‌ ನ್ಯಾಷನಲ್‌ ಸ್ಟೇಡಿಯಂ ಎಂದೇ ಖ್ಯಾತಿಗಳಿಸಿದೆ.
  • 2002ರಿಂದ ಭಾರತ ಸರ್ಕಾರವು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ‘ಧ್ಯಾನ್‌ಚಂದ್‌ ’ ಪ್ರಶಸ್ತಿಯನ್ನು ನೀಡುತ್ತಿದೆ.
  • 1936ರ ಬರ್ಲಿನ್ ಒಲಿಂಪಿಕ್ಸ್ ವೇಳೆ ಧ್ಯಾನ್ ಚಂದ್ ಆಟ ನೋಡಿ ಬೆಕ್ಕಸ ಬೆರಗಾಗಿದ್ದರು ಸರ್ವಾಧಿಕಾರಿ ಹಿಟ್ಲರ್. ಈ ವೇಳೆಯಲ್ಲಿ ಮೇಜರ್ ಧ್ಯಾನ್‌ ಚಂದ್‌ ಅವರಿಗೆ ಜರ್ಮನ್ ಪೌರತ್ವ ಮತ್ತು ತಮ್ಮ ಸೇನೆಯಲ್ಲಿ ದೊಡ್ಡ ಹುದ್ದೆಯನ್ನು ನೀಡುವುದಾಗಿ ಪ್ರಸ್ತಾಪವಿಟ್ಟಿದ್ದರು.
  • ಅಪ್ಪಟ ದೇಶಪ್ರೇಮಿ ಧ್ಯಾನಚಂದ್‌ ನಾನು ಭಾರತ ದೇಶಕ್ಕಾಗಿ ಆಡುತ್ತೇನೆ ಹೊರತು ಹಣಕ್ಕಾಗಿ ಅಲ್ಲ ಎನ್ನುವ ಮೂಲಕ ಹಿಟ್ಲರ್ ಅವರ ಪ್ರಸ್ತಾಪವನ್ನು ನಿರಾಕರಿಸಿದ್ದರು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ