AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Startup Day 2025: ರಾಷ್ಟ್ರೀಯ ನವೋದ್ಯಮ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಕಳೆದ ಕೆಲವು ವರ್ಷಗಳಿಂದ ಹೊಸ ಉದ್ಯಮಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಈ ಸ್ಟಾರ್ಟ್ ಅಪ್ ಗಳು ಭಾರತದ ಹಳ್ಳಿಗಳು ಹಾಗೂ ಪಟ್ಟಣಗಳಲ್ಲಿ ವ್ಯಾಪಿಸುತ್ತಿದೆ. ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಈ ನವೋದ್ಯಮ ಸಂಸ್ಕೃತಿಯನ್ನು ತಳಪಟ್ಟದಿಂದಲೇ ಗಟ್ಟಿಗೊಳಿಸುವುದು ಹಾಗೂ ದೇಶದ ಮೂಲೆ ಮೂಲೆಗಳಲ್ಲಿ ಪಸರಿಸುವುದೇ ಈ ರಾಷ್ಟ್ರೀಯ ನವೋದ್ಯಮ ದಿನ ಉದ್ದೇಶ. ಹಾಗಾದ್ರೆ ಈ ರಾಷ್ಟ್ರೀಯ ನವೋದ್ಯಮ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

National Startup Day 2025: ರಾಷ್ಟ್ರೀಯ ನವೋದ್ಯಮ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 16, 2025 | 8:45 AM

Share

ನಮ್ಮ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸ್ಟಾರ್ಟ್‌ ಅಪ್‌ ಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಎಷ್ಟೋ ಜನರು ಸ್ಟಾಪ್ ಅಪ್ ಗಳ ಮೂಲಕ ಬದುಕುವ ದಾರಿಯನ್ನು ಕಂಡುಕೊಂಡಿದ್ದಾರೆ. ಈಗಾಗಲೇ ಯುವ ಹಾಗೂ ಪ್ರತಿಭಾವಂತ ಉದ್ಯಮಿಗಳು ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸ್ಟಾರ್ಟ್‌ ಅಪ್‌ ಗಳನ್ನು ಆರಂಭಿಸಿ ಪ್ರಗತಿಯನ್ನು ಕಾಣುತ್ತಿದ್ದಾರೆ. ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿದ್ದು ಉಳಿದವರಿಗೆ ಮಾದರಿಯಾಗಿದ್ದಾರೆ. ಅಮೆರಿಕ ಹಾಗೂ ಚೀನಾವನ್ನು ಹೊರತುಪಡಿಸಿದರೆ ಅತೀ ಹೆಚ್ಚು ನವೋದ್ಯಯದ ಮೂಲಕ ಮೂರನೇ ಸ್ಥಾನವನ್ನು ಭಾರತವು ಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇನ್ನಷ್ಟು ಈ ಉದ್ಯಮವನ್ನು ಪಸರಿಸುವ ಉದ್ದೇಶದಿಂದ ಭಾರತದಲ್ಲಿ ಪ್ರತಿ ವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ರಾಷ್ಟ್ರೀಯ ನವೋದ್ಯಮ ದಿನದ ಇತಿಹಾಸ

2022 ಜನವರಿ 16 ರಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ನವೋದ್ಯಮ ದಿನವನ್ನು ಮೊದಲು ಘೋಷಿಸಿದರು. 2016, ಜನವರಿ 16 ರಲ್ಲಿ ಸ್ಟಾರ್ಟ್ಅಪ್ ಇಂಡಿಯಾವನ್ನು ಪ್ರಾರಂಭಿಸಿದ್ದರಿಂದ ಈ ದಿನವನ್ನು ರಾಷ್ಟ್ರೀಯ ನವೋದ್ಯಮ ದಿನವನ್ನು ಘೋಷಿಸಲಾಯಿತು. ನವೋದ್ಯಮ ಸಂಸ್ಕೃತಿಯನ್ನು ತಳಪಟ್ಟದಿಂದಲೇ ಗಟ್ಟಿಗೊಳಿಸುವುದೇ ಈ ದಿನದ ಆಚರಣೆಯ ಉದ್ದೇಶವಾಗಿತ್ತು. ಅಂದಿನಿಂದ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ವ್ಯಕ್ತಿಯಲ್ಲಿ ಭಾವನಾತ್ಮಕ ಪ್ರಬುದ್ಧತೆಯ ಈ ನಡವಳಿಕೆ ಕಂಡು ಬಂದ್ರೆ ಮದ್ವೆಗೆ ಓಕೆ ಹೇಳ್ಬಿಡಿ

ರಾಷ್ಟ್ರೀಯ ನವೋದ್ಯಮ ದಿನದ ಮಹತ್ವ

ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳ ಸಾಧನೆಗಳನ್ನು ಶ್ಲಾಘಿಸಲು ಹಾಗೂ ನಾವೀನ್ಯತೆ ಮತ್ತು ಆರ್ಥಿಕತೆಗೆ ಯುವಕರ ಕೊಡುಗೆಯನ್ನು ಚರ್ಚಿಸಲು ಸ್ಟಾರ್ಟ್ ಅಪ್ ಉದ್ಯಮಿಗಳಿಗೆ ವೇದಿಕೆಯನ್ನು ಒದಗಿಸಲು ಈ ದಿನವನ್ನು ಆಚರಿಸಲಾಗುತ್ತದೆ. ದೇಶದ ಮೂಲೆ ಮೂಲೆಗಳಲ್ಲಿ ನವೋದ್ಯಮ ಸಂಸ್ಕೃತಿಯನ್ನು ಉತ್ತೇಜಿಸಲು, ಉದ್ಯೋಗಗಳನ್ನು ಸೃಷ್ಟಿಸುವಲ್ಲಿ, ತಾಂತ್ರಿಕ ಪ್ರಗತಿ ಹಾಗೂ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಸ್ಟಾರ್ಟ್ ಅಪ್ ಗಳು ವಹಿಸುವ ಪ್ರಮುಖ ಪಾತ್ರವನ್ನು ಗುರುತಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಜನರಲ್ಲಿ ಸ್ಟಾರ್ಟ್‌ಅಪ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ