National Technology Day 2023: ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವದ ಕುರಿತು ಮಾಹಿತಿ ಇಲ್ಲಿದೆ

|

Updated on: May 09, 2023 | 3:19 PM

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷದಿನದಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತದೆ.

National Technology Day 2023: ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವದ ಕುರಿತು ಮಾಹಿತಿ ಇಲ್ಲಿದೆ
National Technology Day 2023
Follow us on

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ(National Technology Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷದಿನದಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಗೌರವಿಸುವುದಾಗಿದೆ. ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪೋಖ್ರಾನ್​ನಲ್ಲಿ ಶಕ್ತಿ-1 ಅಣ್ವಸ್ತ್ರ ಕ್ಷಿಪಣಿಯನ್ನು ಯಶಸ್ವಿಯ ಸ್ಮರಣಾರ್ಥ 1999 ರಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಫೋಷಿಸಿದರು. ಆ ಕಾರ್ಯಾಚರಣೆಯನ್ನು ಮುನ್ನಡೆಸಿದವರು ಮಾಜಿ ರಾಷ್ಟ್ರಪತಿ, ದಿವಂಗತರಾದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ. ತಾಂತ್ರಿಕ ಪ್ರಗತಿಯ ಕೊಡುಗೆಯಿಂದಾಗಿ ಭಾರತವು ಸ್ಫೋಟಕ ಬೆಳವಣಿಗೆಯನ್ನು ಕಂಡಿದೆ. ರಾಷ್ಟ್ರೀಯ ತಂತ್ರಜ್ಞಾನ ದಿನವು ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳ ಬೆಳವಣಿಗೆಯ ಚಾಲಕರ ಪ್ರಯತ್ನವನ್ನು ಅಂಗೀಕರಿಸುವ ಪರಿಪೂರ್ಣ ಸಂದರ್ಭವಾಗಿದೆ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸ:

11 ಮೇ 1999 ರಂದು, ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗೌರವಿಸಲು ಮತ್ತು ಅವರ ಸಾಧನೆಗಳನ್ನು ಎತ್ತಿ ತೋರಿಸಲು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಭಾರತದಲ್ಲಿ ಮೊದಲು ಆಚರಿಸಲಾಯಿತು. ಕೌನ್ಸಿಲ್ ಫಾರ್ ಟೆಕ್ನಾಲಜಿ ಡೆವಲಪ್‌ಮೆಂಟ್ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಉಪಸ್ಥಿತಿಯಲ್ಲಿ ಮೊದಲ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಯೋಜಿಸಿತು.

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನ ಎಂದು ಘೋಷಿಸಿದರು. ಇದು 1998 ರಲ್ಲಿ ರಾಜಸ್ಥಾನದ ಪೋಖ್ರಾನ್‌ನಲ್ಲಿ ಭಾರತೀಯ ಸೇನೆಯು ನಡೆಸಿದ ಪೋಖ್ರಾನ್ ಪರಮಾಣು ಪರೀಕ್ಷೆಗಳ ಸ್ಮರಣಾರ್ಥವಾಗಿತ್ತು. ಕೌನ್ಸಿಲ್ ಫಾರ್ ಟೆಕ್ನಾಲಜಿ ದೇಶವು ಕ್ರಿಯಾತ್ಮಕ ಸಾಧನೆಯನ್ನು ಸ್ಮರಿಸಲು ವಾರ್ಷಿಕವಾಗಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುತ್ತದೆ ಎಂದು ಘೋಷಿಸಿತು.

ಇದನ್ನೂ ಓದಿ: ತಾಯಂದಿರ ದಿನ, ದಿನಾಂಕ, ಇತಿಹಾಸ, ಮಹತ್ವ ಮತ್ತು ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ಇಲ್ಲಿದೆ

ರಾಷ್ಟ್ರೀಯ ತಂತ್ರಜ್ಞಾನ ದಿನದ ಮಹತ್ವ:

ಭಾರತವು ಅಣುಬಾಂಬ್‌ ಸ್ಫೋಟ, ಕ್ಷಿಪಣಿ ಉಡಾವಣೆ, ವಿಮಾನಗಳ ನಿರ್ಮಾಣ , ಕೃಷಿ, ನೀರಾವರಿ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡುವ ಮೂಲಕ ಜಗತ್ತಿನ ಸೂಪರ್‌ ಪವರ್‌ ರಾಷ್ಟ್ರವಾಗಿ ಹೊರಹೊಮ್ಮಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಎದುರಾಗುವ ಎಲ್ಲ ಅಡ್ಡಿಗಳನ್ನು ಸಮರ್ಥವಾಗಿ ಎದುರಿಸಲು ಸಮರ್ಥವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳ ನೆನಪಿಗಾಗಿ ಈ ದಿನವನು ಆಚರಿಸಲಾಗುತ್ತದೆ.

ರಾಷ್ಟ್ರೀಯ ತಂತ್ರಜ್ಞಾನ ದಿನ 2023 ಧ್ಯೇಯ:

ಪ್ರತಿ ವರ್ಷ, ರಾಷ್ಟ್ರೀಯ ತಂತ್ರಜ್ಞಾನ ದಿನದಂದು ಹೊಸ ಥೀಮ್ ಘೋಷಿಸಲಾಗುತ್ತದೆ. ಈ ವರ್ಷ, “ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಮಗ್ರ ವಿಧಾನ” ಎಂಬ ವಿಷಯವನ್ನು ನಿರ್ಧರಿಸಲಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: