National Technology Day 2024 : ತಂತ್ರಜ್ಞಾನದ ಅಭಿವೃದ್ಧಿ, ದೇಶ ಸುಭದ್ರ ಸಂಪದ್ಭರಿತ!
ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ವಿಜ್ಞಾನಿ ಹಾಗೂ ತಂತ್ರಜ್ಞಗಳ ಸಾಧನೆಯನ್ನು ಗುರುತಿಸುವ ಉದ್ದೇಶವು ಈ ದಿನದ್ದಾಗಿದೆ. ಹಾಗಾದ್ರೆ ಈ ದಿನದ ಮಹತ್ವ, ಇತಿಹಾಸದ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.
ನಾವಿಂದು ತಂತ್ರಜ್ಞಾನದ ಯುಗದಲ್ಲಿದ್ದೇವೆ. ಎಲ್ಲಾ ಕ್ಷೇತ್ರವನ್ನು ಯಂತ್ರಗಳು ವ್ಯಾಪಿಸಿದೆ. ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದುತ್ತಿದ್ದಂತೆ ಜನರು ಎಲ್ಲಾ ವಿಚಾರಗಳಿಗೂ ತೆರೆದುಕೊಳ್ಳುವಂತಹರಾಗಿದ್ದಾರೆ. ಇಂದು ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿಯು ತನ್ನದೇ ಮೈಲಿಗಲ್ಲನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಭಾರತೀಯ ವಿಜ್ಞಾನಿಗಳು ಹಾಗೂ ತಂತ್ರಜ್ಞರು ಮಾಡಿದ ಸಾಧನೆಯನ್ನು ಗುರುತಿಸುವ ಸಲುವಾಗಿ ಒಂದು ದಿನವನ್ನು ಮೀಸಲಾಗಿಡಲಾಗಿದೆ. ಅದುವೇ ರಾಷ್ಟ್ರೀಯ ತಂತ್ರಜ್ಞಾನ ದಿನ. ಪ್ರತಿ ವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.
ರಾಷ್ಟ್ರೀಯ ತಂತ್ರಜ್ಞಾನ ದಿನ ಆಚರಣೆಯು ಆರಂಭವಾದದ್ದು ಯಾವಾಗ?
1998 ಮೇ 11ರಂದು, ರಾಜಸ್ಥಾನದ ಪೋಖ್ರಾನ್‌ನಲ್ಲಿ ಸರಣಿ ಪರಮಾಣು ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಯಿತು. ಅಂದು ಭಾರತವು ಪ್ರಮುಖ ತಾಂತ್ರಿಕ ಪ್ರಗತಿಯನ್ನು ಸಾಧಿಸಿತ್ತು. 1998ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮೇ 11 ರಂದು ದೇಶಕ್ಕೆ ಮಹತ್ವದ ಸಾಧನೆಯ ದಿನವೆಂದು ಘೋಷಿಸಿದರು. ಅಂದಿನಿಂದ ಪ್ರತಿ ವರ್ಷ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.
ರಾಷ್ಟ್ರೀಯ ತಂತ್ರಜ್ಞಾನ ದಿನದ ಮಹತ್ವ ಹಾಗೂ ಆಚರಣೆ ಹೇಗೆ?
ಭಾರತದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜ್ಞಾನಿಗಳನ್ನು ಗುರುತಿಸುವುದು. ದೇಶದ ಯುವಕ ಯುವತಿಯರನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಉತ್ತೇಜಿಸುವುದು ಈ ದಿನದ ಉದ್ದೇಶವಾಗಿದೆ. ಈ ದಿನದಂದು ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (TDB) ಮೂರು ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿಗಳು, MSME ಪ್ರಶಸ್ತಿಗಳು ಮತ್ತು ಸ್ಟಾರ್ಟ್ಅಪ್ ಪ್ರಶಸ್ತಿಗಳ ಅಡಿಯಲ್ಲಿ ತಂತ್ರಜ್ಞಾನಗಳ ವಾಣಿಜ್ಯೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ. ಸ್ವದೇಶಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿ ಯಶಸ್ವಿಯಾದವರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸುವ ಕೆಲಸವನ್ನು ಮಾಡಲಾಗುತ್ತದೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ