AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ

ಪ್ರತಿವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ವಿಜ್ಞಾನಿಗಳು, ಎಂಜಿನಿಯರ್‌ಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸಲು, ದೇಶದ ಅಭಿವೃದ್ಧಿಯಲ್ಲಿ ತಂತ್ರಜ್ಞಾನ ಕ್ಷೇತ್ರ ವಹಿಸುವ ಪಾತ್ರದ ಬಗ್ಗೆ ಜನರಿಗೆ ತಿಳಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಆಚರಣೆಗೆ ಹೇಗೆ ಪ್ರಾರಂಭವಾಯಿತು ಎಂಬುದನ್ನು ನೋಡೋಣ ಬನ್ನಿ.

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ
ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on: May 11, 2026 | 10:17 AM

Share

ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸವೇನು?

ವಾಸ್ತವವಾಗಿ, ಮೇ 11 ರಂದು, ಭಾರತವು ರಾಜಸ್ಥಾನದ ಪೋಖ್ರಾನ್‌ನಲ್ಲಿ ಒಂದಲ್ಲ, ಎರಡಲ್ಲ, ಮೂರು ಪರಮಾಣು ಬಾಂಬ್‌ಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಪರೀಕ್ಷೆಗೆ ಆಪರೇಷನ್ ಶಕ್ತಿ ಎಂದು ಹೆಸರಿಡಲಾಯಿತು. ಡಾ. ಎಪಿಜೆ ಅಬ್ದುಲ್ ಕಲಾಂ ನೇತೃತ್ವ ವಹಿಸಿದ್ದರು  ಆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದರು. ಈ ಪರೀಕ್ಷೆಗಳೊಂದಿಗೆ, ಭಾರತವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡ ಆರನೇ ರಾಷ್ಟ್ರವಾಯಿತು. ಅಲ್ಲದೆ ಮೇ 11 ರಂದು   “ತ್ರಿಶೂಲ್” ಕ್ಷಿಪಣಿಯ ಯಶಸ್ವಿ ಪರೀಕ್ಷೆ ಮತ್ತು ಸ್ಥಳೀಯ ವಿಮಾನ “ಹಂಸ-3” ನ ಮೊದಲ ಹಾರಾಟವು  ಯಶಸ್ವಿಯಾಗಿ ನಡೆಯಿತು. ಈ ಐತಿಹಾಸಿಕ ಸಾಧನೆಗಳ ಗೌರವಾರ್ಥವಾಗಿ, ಭಾರತ ಸರ್ಕಾರವು 1999 ರಿಂದ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರತಿವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ?

ರಾಷ್ಟ್ರೀಯ ತಂತ್ರಜ್ಞಾನ ದಿನದ ಮಹತ್ವವೇನು?

  • ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವ ಹಿಂದಿನ ಪ್ರಮುಖ ಉದ್ದೇಶವೆಂದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಗಳನ್ನು ಗೌರವಿಸುವುದು. ಇದರ ಜೊತೆಗೆ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಸಹ ಇದರ ಉದ್ದೇಶವಾಗಿದೆ.
  • ಈ ದಿನವು ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಯನ್ನು ಆಚರಿಸುವ ಸಂದರ್ಭವಾಗಿದೆ.
  • ಈ ದಿನವು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಯುವಜನರನ್ನು ಪ್ರೇರೇಪಿಸುತ್ತದೆ.
  • ಈ ದಿನವು ರಾಷ್ಟ್ರೀಯ ಭದ್ರತೆಯಲ್ಲಿ ತಂತ್ರಜ್ಞಾನದ ಪ್ರಮುಖ ಪಾತ್ರವನ್ನು ನಮಗೆ ನೆನಪಿಸುತ್ತದೆ.
  • ಈ ದಿನವು ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ.
  • ಅಲ್ಲದೆ ಈ ದಿನದಂದು ಭಾರತದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಜ್ಞಾನಿಗಳನ್ನು ಗೌರವಿಸಲಾಗುತ್ತದೆ.
  • ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯಂದು, ಶಾಲೆಗಳು, ಕಾಲೇಜುಗಳು ಮತ್ತು ಇತರ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ