
ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸಲು ಪ್ರತಿವರ್ಷ ಮೇ 11 ರಂದು ಭಾರತದಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.
ವಾಸ್ತವವಾಗಿ, ಮೇ 11 ರಂದು, ಭಾರತವು ರಾಜಸ್ಥಾನದ ಪೋಖ್ರಾನ್‌ನಲ್ಲಿ ಒಂದಲ್ಲ, ಎರಡಲ್ಲ, ಮೂರು ಪರಮಾಣು ಬಾಂಬ್‌ಗಳನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಪರೀಕ್ಷೆಗೆ ಆಪರೇಷನ್ ಶಕ್ತಿ ಎಂದು ಹೆಸರಿಡಲಾಯಿತು. ಡಾ. ಎಪಿಜೆ ಅಬ್ದುಲ್ ಕಲಾಂ ನೇತೃತ್ವ ವಹಿಸಿದ್ದರು ಆ ಸಮಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನಿಯಾಗಿದ್ದರು. ಈ ಪರೀಕ್ಷೆಗಳೊಂದಿಗೆ, ಭಾರತವು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡ ಆರನೇ ರಾಷ್ಟ್ರವಾಯಿತು. ಅಲ್ಲದೆ ಮೇ 11 ರಂದು “ತ್ರಿಶೂಲ್” ಕ್ಷಿಪಣಿಯ ಯಶಸ್ವಿ ಪರೀಕ್ಷೆ ಮತ್ತು ಸ್ಥಳೀಯ ವಿಮಾನ “ಹಂಸ-3” ನ ಮೊದಲ ಹಾರಾಟವು ಯಶಸ್ವಿಯಾಗಿ ನಡೆಯಿತು. ಈ ಐತಿಹಾಸಿಕ ಸಾಧನೆಗಳ ಗೌರವಾರ್ಥವಾಗಿ, ಭಾರತ ಸರ್ಕಾರವು 1999 ರಿಂದ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಅಂದಿನಿಂದ ಪ್ರತಿವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.
ಇದನ್ನೂ ಓದಿ: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ?
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ