National Vaccination Day 2024: ಹೆತ್ತವರೇ ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿ, ಲಸಿಕೆ ಹಾಕಿಸಿ ಜಾಗೃತಿ ಮೂಡಿಸಿ

ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಉತ್ತಮ ದೇಹಾರೋಗ್ಯವನ್ನು ಪಡೆಯುವುದು ಕಷ್ಟವೆನ್ನುವಂತಾಗಿದೆ. ವಯಸ್ಸು ಆದಂತೆ ಬರುವ ಕಾಯಿಲೆಗಳು ಒಂದೆಡೆಯಾದರೆ ಮಕ್ಕಳಾಗಿದ್ದಾಗ ಕೆಲವು ಕಾಯಿಲೆಗಳು ಬಾರದಂತೆ ಚುಚ್ಚು ಮದ್ದು ಹಾಕುವುದು ಬಹಳ ಮುಖ್ಯ. ಹೀಗಾಗಿ ಪ್ರತಿ ವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಮಹತ್ವ ಹಾಗೂ ಇತಿಹಾಸದ ಕುರಿತಾದ ಸಂಪೂರ್ಣ ಮಾಹಿತಿಯು ಇಲ್ಲಿದೆ.

National Vaccination Day 2024: ಹೆತ್ತವರೇ ಮಕ್ಕಳ ಆರೋಗ್ಯ ನಿಮ್ಮ ಕೈಯಲ್ಲಿ, ಲಸಿಕೆ ಹಾಕಿಸಿ ಜಾಗೃತಿ ಮೂಡಿಸಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 15, 2024 | 12:23 PM

ಆರೋಗ್ಯದ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಲುವುದಿಲ್ಲ. ಎಷ್ಟೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ ಕೆಲ ಕಾಯಿಲೆಗಳು ಬಂದೇ ಬಿಡುತ್ತದೆ. ಇನ್ನು ಕೆಲವು ಆರೋಗ್ಯ ಸಮಸ್ಯೆಗಳನ್ನು ಬಾರದಂತೆ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕಾಗುತ್ತದೆ. ಈ ಲಸಿಕೆಗಳು ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವನ್ನು ಕಾಪಾಡುತ್ತದೆ. ಮಗು ಹುಟ್ಟಿದಾಗಿನಿಂದ ಐದು ವರ್ಷದವರೆಗೆ ಮಗುವಿನ ವಯಸ್ಸಿಗೆ ತಕ್ಕಂತೆ ಲಸಿಕೆಯನ್ನು ನೀಡಲಾಗುತ್ತದೆ. ಆದರೆ ಯಾವ ಯಾವ ವರ್ಷಕ್ಕೆ ಯಾವ ಯಾವ ಲಸಿಕೆಯನ್ನು ನೀಡಬೇಕು ಎನ್ನುವುದನ್ನು ಈಗಾಗಲೇ ಅರೋಗ್ಯ ಇಲಾಖೆಯು ನಿಗದಿ ಪಡಿಸಿದೆ. ಪ್ರತಿ ವರ್ಷ ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ರಾಷ್ಟ್ರೀಯ ಲಸಿಕೆ ದಿನದ ಇತಿಹಾಸ

ರಾಷ್ಟ್ರೀಯ ಲಸಿಕೆ ದಿನವನ್ನು ರಾಷ್ಟ್ರೀಯ ರೋಗನಿರೋಧಕ ದಿನ ಎಂದೂ ಕರೆಯಲಾಗುತ್ತದೆ. ದೇಶದಲ್ಲಿ 1995ರ ಮಾರ್ಚ್ 16ರಂದು ಮೊದಲ ಲಸಿಕೆ ದಿನಾಚರಣೆಯನ್ನು ಆಚರಿಸಲಾಯಿತು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ ‘ಪಲ್ಸ್ ಪೋಲಿಯೊ’ ಅಭಿಯಾನಕ್ಕೆ ಚಾಲನೆ ಸಿಕ್ಕಿತು. . ಎರಡು ದಶಕಗಳ ಬಳಿಕಭಾರತ ದೇಶದಲ್ಲಿ ಪೋಲಿಯೊ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ಈ ದಿನದಂದು ಚುಚ್ಚು ಮದ್ದುಗಳನ್ನುಗಳನ್ನು ನೀಡುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ನಿದ್ರಾಹೀನತೆಯಿಂದ ಹದಿಹರೆಯದವರಲ್ಲಿ ನರವೈಜ್ಞಾನಿಕ ಸಮಸ್ಯೆ ಉಂಟಾದೀತು!

ರಾಷ್ಟ್ರೀಯ ಲಸಿಕೆ ದಿನದ ಮಹತ್ವ

ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ದಿನದಂದು ಲಸಿಕೆಯ ಅವಶ್ಯಕತೆ ಕುರಿತು ಜನರಲ್ಲಿ ಅರಿವು ಮೂಡಿಸಲು ಕೆಲಸವನ್ನು ಮಾಡಲಾಗುತ್ತದೆ. ಈ ದಿನದಂದು ಮಕ್ಕಳಿಗೆ ಪೋಲಿಯೊ ಲಸಿಕೆಯ ಮಾತ್ರವಲ್ಲದೇ ದಡಾರ, ಸಿಡುಬು, ಕ್ಷಯಗಳ ಲಸಿಕೆಗಳನ್ನು ನೀಡಲಾಗುತ್ತದೆ. ಅದಲ್ಲದೇ ಲಸಿಕೆ ಹಾಕಿಸುವುದರಿಂದ ಮಕ್ಕಳನ್ನು ಈ ಕೆಲವು ರೋಗಗಳಿಂದ ಹೇಗೆ ರಕ್ಷಿಸಬಹುದು ಎನ್ನುವ ಬಗ್ಗೆ ಮಾಹಿತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಮಕ್ಕಳ ಆರೋಗ್ಯವನ್ನು ಕಾಪಾಡುವಲ್ಲಿ ಲಸಿಕೆ ಎಷ್ಟು ಮುಖ್ಯ ಎನ್ನುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುತ್ತದೆ. ಈ ರಾಷ್ಟ್ರೀಯ ಲಸಿಕೆ ದಿನದಂದು ಲಸಿಕಾ ಅಭಿಯಾನಗಳು ನಡೆಯುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ