AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ ಕೋವಿಡ್-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಆದ್ದರಿಂದ ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ
ರಾಷ್ಟ್ರೀಯ ಲಸಿಕೆ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Mar 16, 2026 | 10:26 AM

Share

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಲಸಿಕೆ ದಿನದ ಇತಿಹಾಸವೇನು?

ಭಾರತದಲ್ಲಿ ಲಸಿಕೆ ಅಭಿಯಾನವು 1955 ರಲ್ಲಿ ಆಚರಿಸಲಾಯಿತು. ಆ ಸಮಯದಲ್ಲಿ ಪೋಲಿಯೊ ಒಂದು ಪ್ರಮುಖ ಸಮಸ್ಯೆಯಾಗಿತ್ತು, ಆದ್ದರಿಂದ ಭಾರತ ಸರ್ಕಾರವು ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಮಾರ್ಚ್ 16, 1995 ರಂದು, ವಿಶ್ವ ಆರೋಗ್ಯ ಸಂಸ್ಥೆಯ (WHO) ಜಾಗತಿಕ ಪೋಲಿಯೊ ಉಪಕ್ರಮದ ಭಾಗವಾಗಿ ಭಾರತದಲ್ಲಿ ಮೌಖಿಕ ಪೋಲಿಯೊ ಲಸಿಕೆಯ ಮೊದಲ ಡೋಸ್ ಅನ್ನು ನೀಡಲಾಯಿತು. ಈ ಅಭಿಯಾನದಡಿಯಲ್ಲಿ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ನೀಡಲಾಯಿತು. ಇದರ ನಂತರ, ಪೋಲಿಯೊ ಪ್ರಕರಣಗಳು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸಿದವು ಮತ್ತು ಅಂತಿಮವಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಯಿತು. 2014 ರಲ್ಲಿ, ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಲಸಿಕೆಯ ಮಹತ್ವವನ್ನು ಎತ್ತಿ ತೋರಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಉದ್ದೇಶವನ್ನು ತಿಳಿಯಿರಿ

ರಾಷ್ಟ್ರೀಯ ಲಸಿಕೆ ದಿನದ ಮಹತ್ವವೇನು?

  • ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿವೆ. ಲಸಿಕೆಗಳ ಪಾತ್ರ ಮತ್ತು ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.
  • ಲಸಿಕೆಗಳು ಜೀವ ಉಳಿಸುವುದು ಮಾತ್ರವಲ್ಲ, ಆರೋಗ್ಯ ಹಾಗೂ ಜೀವನ ಮಟ್ಟವನ್ನು ಸುಧಾರಿಸುತ್ತವೆ, ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದು ಕಾಲು ಸಹಾಯ ಮಾಡುತ್ತದೆ. ಇದರ ಈ ಮಹತ್ವದ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ.
  • ಅಪಾಯಕಾರಿ ಮತ್ತು ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಲಸಿಕೆಗಳು ಪರಿಣಾಮಕಾರಿ ಸಾಧನಗಳಾಗಿವೆ. ಜಾಗತಿಕವಾಗಿ, ವ್ಯಾಪಕವಾದ ಲಸಿಕೆ ಅಭಿಯಾನಗಳು ಸಿಡುಬು, ದಡಾರ ಮತ್ತು ಟೆಟನಸ್‌ನಂತಹ ಸಾಂಕ್ರಾಮಿಕ ಮತ್ತು ಅಪಾಯಕಾರಿ ಕಾಯಿಲೆಗಳನ್ನು ನಿರ್ಮೂಲನೆ ಮಾಡಿವೆ. WHO ಪ್ರಕಾರ, ಲಸಿಕೆಯ ಮೂಲಕ ಪ್ರತಿ ವರ್ಷ 2-3 ಮಿಲಿಯನ್ ಜೀವಗಳನ್ನು ಉಳಿಸಲಾಗುತ್ತಿದೆ. ಈ ಪ್ರಸ್ತುತ ಯುಗದಲ್ಲಿ ಲಸಿಕೆಗಳು ವಹಿಸುವ ಪಾತ್ರವನ್ನು ನಿರ್ಲಕ್ಷಿಸಲಾಗುವುದಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!