
ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಮತಪೆಟ್ಟಿಗೆಯಲ್ಲಿದೆ. ನಾಗರಿಕನು ಹಾಕುವಂತರ ಒಂದು ಮತದಿಂದ (Vote) ದೇಶದ ಭವಿಷ್ಯ ನಿರ್ಧಾರವಾಗುತ್ತದೆ. ಮತದಾನ ಸಂವಿಧಾನ ನಾಗರಿಕರಿಗೆ ನೀಡಿರುವ ಅತ್ಯಮೂಲ್ಯ ಹಕ್ಕಾಗಿದ್ದು, ಈ ಹಕ್ಕನ್ನು ಚಲಾಯಿಸುವ ಮೂಲಕ ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಮತದಾನ ಪ್ರಾಮುಖ್ಯತೆ ಹಾಗೂ ಮತದಾನವೆಂಬ ಅತ್ಯಮೂಲ್ಯ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಭಾರತದಲ್ಲಿ ಪ್ರತಿವರ್ಷ ಗಣರಾಜ್ಯೋತ್ಸವದ ಮುನ್ನಾ ದಿನದಂದು ಅಂದರೆ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನುಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.
ಭಾರತದ ಎಲ್ಲಾ ನಾಗರಿಕರಿಗೆ ರಾಷ್ಟ್ರದ ಅಭಿವೃದ್ಧಿ, ಏಳಿಗೆಯ ಕಡೆಗೆ ಅವರ ಜವಾಬ್ದಾರಿ, ಕರ್ತವ್ಯವನ್ನು ನೆನಪಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮತ್ತು ರಾಜಕೀಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ಉತ್ತೇಜಿಸುವ ದೃಷ್ಟಿಯಿಂದ ಭಾರತ ಸರ್ಕಾರವು 1950 ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ಸವಿನೆನಪಿಗಾಗಿ 2011 ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿವರ್ಷ ಜನವರಿ 25 ರಂದು ಈ ವಿಶೇಷ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಾ ಬರಲಾಗುತ್ತಿದೆ.
ರಾಷ್ಟ್ರೀಯ ಮತದಾರರ ದಿನದ ಅಧಿಕೃತ ಧ್ಯೇಯವಾಕ್ಯವನ್ನು ಪ್ರತಿ ವರ್ಷ ಭಾರತೀಯ ಚುನಾವಣಾ ಆಯೋಗ ಘೋಷಿಸುತ್ತದೆ. 2026 ರ ಮತದಾರರ ದಿನದ ಧ್ಯೇಯವಾಕ್ಯವು ನನ್ನ ಭಾರತ, ನನ್ನ ಮತ (My India, My Vote). ಮತದಾರರ ದಿನದ ಧ್ಯೇಯವಾಕ್ಯವು ಈ ಕೆಳಗಿನ ಮೇಲೆ ಕೇಂದ್ರೀಕರಿಸುತ್ತದೆ,
ಇದನ್ನೂ ಓದಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು?
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:48 am, Sun, 25 January 26