National Voter’s Day: ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಯಾವೆಲ್ಲಾ ಅರ್ಹತೆಗಳಿರಬೇಕು? ಇದರ ಹಿಂದಿರುವ ಮಹತ್ವ ಏನು?

ಪ್ರಜಾಪ್ರಭುತ್ವದ ವ್ಯವಸ್ಥೆಯೂ ಸುಗಮವಾಗಿ ನಡೆಯಬೇಕಾಗದರೆ ಮತದಾರರು ಬಹಳ ಮುಖ್ಯವಾಗುತ್ತಾರೆ.1950 ರಲ್ಲಿ ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಹಾಗಾದ್ರೆ ರಾಷ್ಟ್ರೀಯ ಮತದಾರರ ದಿನದ ಮಹತ್ವವೇನು?

National Voter's Day: ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಯಾವೆಲ್ಲಾ ಅರ್ಹತೆಗಳಿರಬೇಕು? ಇದರ ಹಿಂದಿರುವ ಮಹತ್ವ ಏನು?
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 23, 2024 | 5:55 PM

ಭಾರತದಂತಹ ದೇಶದಲ್ಲಿ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಮೂಲಭೂತ ಹಕ್ಕನ್ನು ನೀಡಲಾಗಿದೆ. ಹೀಗಾಗಿ ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶವನ್ನು ಆಳಲು ಯೋಗ್ಯವಾದ ವ್ಯಕ್ತಿಯನ್ನು ಮತದಾನದ ಮೂಲಕ ಆರಿಸಬೇಕಾಗುತ್ತದೆ. ಮತದಾನದ ಸಮಯದಲ್ಲಿ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡುವುದರಿಂದ ದೇಶದ ಪ್ರಗತಿಯಾಗಲು ಸಾಧ್ಯ. ಚುನಾವಣಾ ಪ್ರಕ್ರಿಯೆಯಲ್ಲಿ ಹೊಸ ಮತದಾರರನ್ನು, ಯುವಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜನವರಿ 25 ರಂದು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ.

ರಾಷ್ಟ್ರೀಯ ಮತದಾರರ ದಿನದ ಇತಿಹಾಸ

ಭಾರತದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಪ್ರತೀವರ್ಷ ಜನವರಿ 25ರಂದು ಆಚರಿಸಲಾಗುತ್ತದೆ. 2011ರಲ್ಲಿ ಮೊದಲ ಬಾರಿಗೆ ದೇಶಾದ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. 1950ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ಸವಿನೆನಪಿಗಾಗಿ ಈ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಮತದಾರರ ದಿನದ ಮಹತ್ವ

ಹೊಸ ಮತದಾರರನ್ನು ಸೆಳೆಯುವ, ಉತ್ತೇಜಿಸುವುದು ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಮತದಾರರ ದಿನದಂದು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನತೆಯ ಪಾತ್ರ ಅಗಾಧವಾಗಿದೆ. ಹೀಗಾಗಿ ಈ ದಿನದಂದು ಹೊಸ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಹಸ್ತಾಂತರ ಮಾಡಲಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಜಗತ್ತಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಅಗತ್ಯ

ಮತ ಹಾಕಲು ಒಬ್ಬ ವ್ಯಕ್ತಿಗೆ ಯಾವೆಲ್ಲಾ ಅರ್ಹತೆಗಳಿರಬೇಕು?

ಚುನಾವಣಾ ಆಯೋಗವು ಒಬ್ಬ ವ್ಯಕ್ತಿಗೆ ವಾಸಿಸುವ ಸ್ಥಳದಲ್ಲಿ ಮತ ಚಲಾಯಿಸಲು ಅವಕಾಶ ನೀಡುತ್ತದೆ. ಆದರೆ ವ್ಯಕ್ತಿಯೂ ತನ್ನ ವಾಸಸ್ಥಳವನ್ನು ಬದಲಾಯಿಸಿದಾಗಲೆಲ್ಲ ಚುನಾವಣಾ ಆಯೋಗಕ್ಕೆ ತಿಳಿಸಬೇಕು. ಎರಡು ಅಥವಾ ಹೆಚ್ಚು ಬೇರೆ ಬೇರೆ ಸ್ಥಳಗಳಿಂದ ಮತ ಹಾಕಿದರೆ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಭಾರತದಲ್ಲಿ ಒಬ್ಬ ವ್ಯಕ್ತಿಯೂ 18 ವರ್ಷ ತುಂಬಿದಾಗ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು. ಮತದಾನದ ಸಮಯದಲ್ಲಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿರುವ ವೋಟರ್ ಐಡಿ, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಯಾವುದಾದರೊಂದು ದಾಖಲೆಯನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ. ಈ ಮೂಲಕ ಮತದಾರರು ಮತ ಹಾಕಿ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ದೇಶ ಪ್ರಗತಿಯಾಗಲು ಸಾಧ್ಯ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?