National Youth Day 2025: ಸ್ವಾಮಿ ವಿವೇಕಾನಂದರ ಜಯಂತಿಯಂದು ರಾಷ್ಟ್ರೀಯ ಯುವ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ
ಆಧ್ಯಾತ್ಮಿಕ ಲೋಕದ ಮಹಾನ್ ಚೇತನ, ಭವ್ಯ ಭಾರತದ ಹೆಮ್ಮೆಯ ಪುತ್ರ, ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಜೀವಂತ. ಈ ಮಹಾನ್ ವ್ಯಕ್ತಿಯ ಜನ್ಮ ದಿನದ ಸವಿ ನೆನಪಿಗಾಗಿ ನಮ್ಮ ಭಾರತದಲ್ಲಿ ಪ್ರತಿವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು (National Youth Day) ಆಚರಿಸಲಾಗುತ್ತದೆ. ಇದೇ ದಿನದಂದೇ ಏಕೆ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ? ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ.
ರಾಷ್ಟ್ರ ನಿರ್ಮಾಣ, ಒಂದು ದೇಶದ ಅಭಿವೃದ್ಧಿ ಮತ್ತು ಪ್ರಗತಿಯು ಆ ದೇಶದ ಯುವಕ ಕೊಡುಗೆಯನ್ನು ಅವಲಂಬಿಸಿರುತ್ತದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗುವಲ್ಲಿ ಆ ದೇಶದ ಯುವ ಶಕ್ತಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಂತಹ ಯುವ ಸಮೂಹದ ಶಕ್ತಿ, ಸಾಮರ್ಥ್ಯದ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರು. ದೇಶದ ಅಭಿವೃದ್ಧಿಯು ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ವಿವೇಕಾನಂದರು ತಮ್ಮ ಆಲೋಚನೆಗಳು ಮತ್ತು ಚಿಂತನೆಗಳೊಂದಿಗೆ ಯುವಕರನ್ನು ಒಗ್ಗೂಡಿಸಲು ಬಯಸಿದವರು. ಈ ಮಹಾನ್ ವ್ಯಕ್ತಿಯ ಹಾಗೂ ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆಯಾಗಿರುವ ಇವರ ಜನ್ಮ ದಿನದ ಸವಿ ನೆನಪಿಗಾಗಿ ನಮ್ಮ ಭಾರತದಲ್ಲಿ ಪ್ರತಿವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು (National Youth Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.
ರಾಷ್ಟ್ರೀಯ ಯುವ ದಿನದ ಇತಿಹಾಸ:
ಒಂದು ದೇಶದ ಅಭಿವೃದ್ಧಿಯು ಆ ದೇಶದ ಯುವ ಜನತೆಯ ಮೇಲೆ ಅವಲಂಬಿತವಾಗಿದೆ. ಹೀಗಿರುವಾಗ ಸರಿಯಾದ ದಾರಿಯಲ್ಲಿ ಸಾಗಲು ಯುವ ಜನತೆಯನ್ನು ಪ್ರೇರೇಪಿಸಲು ಸರಿಯಾದ ಮಾರ್ಗದರ್ಶನ ನೀಡುವುದು ಬಹಳ ಮುಖ್ಯವಾಗಿದೆ. ಈ ಉದ್ದೇಶದಿಂದ ಭಾರತ ಸರ್ಕಾರವು 1984 ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ಬಳಿಕ 1985 ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯಂದೇ ಏಕೆ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ?
ಸ್ವಾಮಿ ವಿವೇಕಾನಂದರ ತತ್ವಗಳು ಮತ್ತು ಅವರ ಬದುಕಿನ ಹಾದಿ, ಆದರ್ಶಗಳು ನಮಗೆಲ್ಲರಿಗೂ ಸ್ಪೂರ್ತಿ. ದೇಶದ ಅಭಿವೃದ್ಧಿಯು ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಫೂರ್ತಿದಾಯಕ ಮಾತುಗಳೊಂದಿಗೆ ಯುವಕರನ್ನು ಮುಂದುವರೆಯಲು ಪ್ರೋತ್ಸಾಹಿಸುತ್ತಿದ್ದರು. ಇಂದಿಗೂ ಅದೆಷ್ಟೋ ಜನ ವಿವೇಕಾನಂದರ ಮಾತುಗಳ ಸ್ಪೂರ್ತಿಯ ನೆರಳಲ್ಲಿ ಸಾಗುತ್ತಿದ್ದಾರೆ. ಹೀಗೆ ದೇಶದ ಯುವಕರಿಗೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ತಿಳಿಸುವ ಮೂಲಕ ಸರಿಯಾದ ದಾರಿಯಲ್ಲಿ ಸಾಗುವಂತೆ ದಾರಿ ತೋರಿಸುವ ಉದ್ದೇಶದಿಂದ ಈ ಮಹಾನ್ ವ್ಯಕ್ತಿಯ ಜನ್ಮ ದಿನದಂದೇ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಯುವ ದಿನದ ಮಹತ್ವ:
ರಾಷ್ಟ್ರೀಯ ಯುವ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಸ್ವಾಮಿ ವಿವೇಕಾನಂದರ ಚಿಂತನೆಗಳು, ಮೌಲ್ಯಗಳು ಮತ್ತು ಆದರ್ಶಗಳನ್ನು ಪ್ರಚಾರ ಮಾಡುವುದು ಮತ್ತು ಅವರ ಆಲೋಚನೆಗಳ ಬಗ್ಗೆ ದೇಶದ ಯುವ ಜನತೆಗೆ ತಿಳಿಸಿ ಅವರು ದೇಶದ ಪ್ರಗತಿಗೆ ಕೊಡುಗೆ ನೀಡಲು ಪ್ರೇರೇಪಿಸುವುದು ಮತ್ತು ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ಚಿಂತನೆಗಳನ್ನು ಬಿತ್ತರಿಸುವ ಮೂಲಕ ಯುವಕರಿಗೆ ಸ್ಪೂರ್ತಿ ತುಂಬುವುದಾಗಿದೆ.
ಇದನ್ನೂ ಓದಿ: ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ 59 ನೇ ಪುಣ್ಯ ಸ್ಮರಣೆ;ಸ್ಫೂರ್ತಿದಾಯಕ ಉಲ್ಲೇಖ ಇಲ್ಲಿದೆ
ಈ ದಿನವನ್ನು ದೇಶದಾದ್ಯಂತ ಬಹಳ ಉತ್ಸಾಹ ಮತ್ತು ವೈಭವದಿಂದ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ದೇಶದಾದ್ಯಂತ ಶಾಲಾ ಕಾಲೇಜುಗಳಲ್ಲಿ ಈ ವಿಶೇಷ ದಿನದಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಭಾಷಣ, ಯುವ ಸಮ್ಮೇಳನಗಳು, ವಿಚಾರಗೋಷ್ಠಿಗಳು ಸೇರಿದಂತೆ ಅನೇಕ ಸ್ಪರ್ಧೆಗಳನ್ನು ಕೂಡಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗುತ್ತದೆ. ಇದಲ್ಲದೆ, ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಹಕ್ಕುಗಳನ್ನು ಚಲಾಯಿಸುವ ಬಗ್ಗೆ ಯುವಕರಿಗೆ ಶಿಕ್ಷಣ ನೀಡಲು ವಿವಿಧ ರೀತಿಯ ಅಭಿಯಾನಗಳನ್ನು ಸಹ ನಡೆಸಲಾಗುತ್ತಿದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ