AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Day 2026: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯಂದೇ ಯುವ ದಿನವನ್ನು ಆಚರಿಸುವುದೇಕೆ ಗೊತ್ತಾ?

ರಾಷ್ಟ್ರ ನಿರ್ಮಾಣ, ಒಂದು ದೇಶದ ಅಭಿವೃದ್ಧಿ ಮತ್ತು ಪ್ರಗತಿಯು ಆ ದೇಶದ ಯುವಕ ಕೊಡುಗೆಯನ್ನು ಅವಲಂಬಿಸಿರುತ್ತದೆ. ಒಂದು ದೇಶವು ಅಭಿವೃದ್ಧಿಯತ್ತ ಸಾಗುವಲ್ಲಿ ಆ ದೇಶದ ಯುವ ಶಕ್ತಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಂತಹ ಯುವ ಸಮೂಹದ ಶಕ್ತಿ, ಸಾಮರ್ಥ್ಯದ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರು. ಹಾಗಾಗಿ ಇವರ ಜನ್ಮ ದಿನದ ಸವಿನೆನಪಿಗಾಗಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.

National Youth Day 2026: ಸ್ವಾಮಿ ವಿವೇಕಾನಂದರ ಜನ್ಮ ಜಯಂತಿಯಂದೇ ಯುವ ದಿನವನ್ನು ಆಚರಿಸುವುದೇಕೆ ಗೊತ್ತಾ?
ರಾಷ್ಟ್ರೀಯ ಯುವ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on: Jan 12, 2026 | 8:00 AM

Share

ಸ್ವಾಮಿ ವಿವೇಕಾನಂದರ (Swami Vivekananda) ತತ್ವಗಳು ಮತ್ತು ಅವರ ಬದುಕಿನ ಹಾದಿ, ಆದರ್ಶಗಳು ನಮಗೆಲ್ಲರಿಗೂ ಸ್ಪೂರ್ತಿ. ದೇಶದ ಅಭಿವೃದ್ಧಿಯು ಯುವಕರಿಂದ ಮಾತ್ರ ಸಾಧ್ಯ ಎಂದು ನಂಬಿದ್ದ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಫೂರ್ತಿದಾಯಕ ಮಾತುಗಳೊಂದಿಗೆ ಯುವಕರನ್ನು ಮುಂದುವರೆಯಲು ಪ್ರೋತ್ಸಾಹಿಸುತ್ತಿದ್ದರು. ಆಧ್ಯಾತ್ಮಿಕ ಲೋಕದ ಮಹಾನ್‌ ಚೇತನ, ಭವ್ಯ ಭಾರತದ ಹೆಮ್ಮೆಯ ಪುತ್ರ, ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ ಸ್ವಾಮಿ ವಿವೇಕಾನಂದರ ಈ ತತ್ವಾದರ್ಶಗಳು ಇಂದಿಗೂ ಎಂದೆಂದಿಗೂ ಜೀವಂತ. ಇಂದಿಗೂ ಅದೆಷ್ಟೋ ಜನ ವಿವೇಕಾನಂದರ ಮಾತುಗಳ ಸ್ಪೂರ್ತಿಯ ನೆರಳಲ್ಲಿ ಸಾಗುತ್ತಿದ್ದಾರೆ. ಹೀಗೆ ದೇಶದ ಯುವಕರಿಗೆ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ತಿಳಿಸುವ ಮೂಲಕ ಸರಿಯಾದ ದಾರಿಯಲ್ಲಿ ಸಾಗುವಂತೆ ದಾರಿ ತೋರಿಸುವ ಉದ್ದೇಶದಿಂದ ಈ ಮಹಾನ್‌ ವ್ಯಕ್ತಿಯ ಜನ್ಮ ದಿನವಾದ ಜನವರಿ 12 ರಂದು  ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಯುವ ದಿನದ ಇತಿಹಾಸವೇನು?

ಒಂದು ದೇಶದ ಅಭಿವೃದ್ಧಿಯು ಆ ದೇಶದ ಯುವ ಜನತೆಯ ಮೇಲೆ ಅವಲಂಬಿತವಾಗಿದೆ. ಹೀಗಿರುವಾಗ ಸರಿಯಾದ ದಾರಿಯಲ್ಲಿ ಸಾಗಲು ಯುವ ಜನತೆಯನ್ನು ಪ್ರೇರೇಪಿಸಲು ಸರಿಯಾದ ಮಾರ್ಗದರ್ಶನ ನೀಡುವುದು ಬಹಳ ಮುಖ್ಯವಾಗಿದೆ. ಈ ಉದ್ದೇಶದಿಂದ ಭಾರತ ಸರ್ಕಾರವು 1984 ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ಬಳಿಕ 1985 ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ರಾಷ್ಟ್ರೀಯ ಯುವ ದಿನವನ್ನು ಏಕೆ ಆಚರಿಸಲಾಗುತ್ತದೆ?

ಯುವಕರನ್ನು ದೇಶದ ಭವಿಷ್ಯ ಎಂದು ಕರೆಯಲಾಗುತ್ತದೆ. ಯಾವುದೇ ರಾಷ್ಟ್ರದ ಪ್ರಗತಿಯು ಅಲ್ಲಿನ ಯುವಕರ ಚಿಂತನೆ ಮತ್ತು ದಕ್ಷತೆಯನ್ನು ಅವಲಂಬಿಸಿರುತ್ತದೆ. ಆದ್ದರಿಂದ, ಯುವಜನರು ಸರಿಯಾದ ಮಾರ್ಗದರ್ಶನ ಪಡೆಯುವುದು ಬಹಳ ಮುಖ್ಯವಾಗುತ್ತದೆ. ಈ ಉದ್ದೇಶಕ್ಕಾಗಿ ಪ್ರತಿ ವರ್ಷ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು?

ರಾಷ್ಟ್ರೀಯ ಯುವ ದಿನದ ಮಹತ್ವವೇನು?

  • ರಾಷ್ಟ್ರೀಯ ಯುವ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಸ್ವಾಮಿ ವಿವೇಕಾನಂದರ ಚಿಂತನೆಗಳು, ಮೌಲ್ಯಗಳು ಮತ್ತು ಆದರ್ಶಗಳನ್ನು ಪ್ರಚಾರ ಮಾಡುವುದು ಮತ್ತು ಅವರ ಆಲೋಚನೆಗಳ ಬಗ್ಗೆ ದೇಶದ ಯುವ ಜನತೆಗೆ ತಿಳಿಸಿ ಅವರು ದೇಶದ ಪ್ರಗತಿಗೆ ಕೊಡುಗೆ ನೀಡಲು ಪ್ರೇರೇಪಿಸುವುದು ಮತ್ತು ವಿವೇಕಾನಂದರ ಆದರ್ಶಗಳನ್ನು ಅನುಸರಿಸಲು ಯುವಜನರನ್ನು ಪ್ರೇರೇಪಿಸುವುದು.
  • ಭಾರತದ ಯುವಜನರಿಗೆ ಸ್ಫೂರ್ತಿ ನೀಡುವುದು ಮತ್ತು ಅವರ ಜೀವನ ಗುರಿಗಳ ಬಗ್ಗೆ ಅರಿವು ಮೂಡಿಸುವುದು ರಾಷ್ಟ್ರೀಯ ಯುವ ದಿನದ ಉದ್ದೇಶವಾಗಿದೆ.
  • ರಾಷ್ಟ್ರೀಯ ಯುವ ದಿನವು ಯುವಜನರಿಗೆ ತಮ್ಮ ಧ್ವನಿ ಎತ್ತಲು, ತಮ್ಮ ಸಮಸ್ಯೆಗಳು ಮತ್ತು ಕಳವಳಗಳನ್ನು ವ್ಯಕ್ತಪಡಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ ಜೊತೆಗೆ ಅವರ ಹಕ್ಕುಗಳು ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸಲು ಒಂದು ಅವಕಾಶವನ್ನು ಒದಗಿಸುತ್ತದೆ.
  • ಈ ದಿನದಂದು, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಭಾಷಣ, ಯುವ ಸಮ್ಮೇಳನಗಳು, ವಿಚಾರಗೋಷ್ಠಿಗಳು ಸೇರಿದಂತೆ ಅನೇಕ ಸ್ಪರ್ಧೆಗಳು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!