AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಸಿಕೊಳ್ಳುವ ಸಂದರ್ಭದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ

ಹೆಚ್ಚಿನ ಮಂದಿ ತೂಕ ಇಳಿಸಿಕೊಳ್ಳಬೇಕೆಂದು ವ್ಯಾಯಾಮ, ಜಿಮ್, ಡಯಟ್​ಗಳನ್ನು ಮಾಡುತ್ತಾರೆ. ಆದರೆ ಈ ಸಂದರ್ಭದಲ್ಲಿ ಮಾಡುವ ಕೆಲವು ತಪ್ಪುಗಳಿಂದ ನಿಮ್ಮ ಆರೋಗ್ಯವನ್ನು ನೀವೇ ಹಾಳು ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ.

ತೂಕ ಇಳಿಸಿಕೊಳ್ಳುವ ಸಂದರ್ಭದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ
ತೂಕ ಇಳಿಕೆ
TV9 Web
| Edited By: |

Updated on: May 08, 2022 | 6:24 PM

Share

ಹೆಚ್ಚಿನ ಮಂದಿ ತೂಕ ಇಳಿಸಿಕೊಳ್ಳಬೇಕೆಂದು ವ್ಯಾಯಾಮ, ಜಿಮ್, ಡಯಟ್​ಗಳನ್ನು ಮಾಡುತ್ತಾರೆ. ಆದರೆ ಈ ಸಂದರ್ಭದಲ್ಲಿ ಮಾಡುವ ಕೆಲವು ತಪ್ಪುಗಳಿಂದ ನಿಮ್ಮ ಆರೋಗ್ಯವನ್ನು ನೀವೇ ಹಾಳು ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ನಾವು ಸೇವನೆ ಮಾಡುವ ಆಹಾರದಲ್ಲಿ ದಿನದ ಮೊದಲನೆಯ ಆಹಾರ ಎಂದರೆ ಉಪಹಾರ. ಕೆಲವರಿಗೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು ಎನ್ನುವುದು ಕೇವಲ ಮನಸ್ಸಿನಲ್ಲಿರುತ್ತದೆ ಅಷ್ಟೇ. ಕೆಲವರು ಸಂಪೂರ್ಣವಾಗಿ ಬೆಳಗಿನ ಉಪಹಾರವನ್ನು ಸೇವನೆ ಮಾಡುವುದನ್ನು ಬಿಟ್ಟು ಬಿಡುತ್ತಾರೆ. ಇದು ಕೂಡ ತುಂಬ ದೊಡ್ಡ ತಪ್ಪು. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬದಲಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಇನ್ನಷ್ಟು ಹೆಚ್ಚಾಗಲಿದೆ.

ಆದರೆ ಬೆಳಗಿನ ಉಪಹಾರದ ಸಮಯದಲ್ಲಿ ಹೆಚ್ಚು ಎಣ್ಣೆಯ ಅಂಶವನ್ನು ಒಳಗೊಂಡಿರುವ ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುವುದು ಮಾತ್ರವಲ್ಲ ದೇಹದ ತೂಕ ಕೂಡ ಹೆಚ್ಚಾಗಲು ಪ್ರಮುಖ ಕಾರಣವಾಗುತ್ತದೆ. ತೂಕ ಇಳಿಸುವ ಪ್ರಕ್ರಿಯೆಯಲ್ಲಿ ನಾವು ಏನು ಮಾಡಬಾರದು ಎಂಬುದರ ಬಗ್ಗೆ ತಿಳಿದುಕೊಳ್ಳುವುದ ಬಹುಮುಖ್ಯ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಉಪಾಹಾರ ಸೇವಿಸದಿರುವುದು: ಡಯಟ್ ಹೆಸರಿನಲ್ಲಿ ಅನೇಕರು ಬೆಳಗಿನ ಉಪಾಹಾರವನ್ನು ಬಿಟ್ಟುಬಿಡುತ್ತಾರೆ. ಇದು ಆರೋಗ್ಯದ ವಿಷಯದಲ್ಲಿ ಮಾಡುವ ದೊಡ್ಡ ತಪ್ಪಾಗಿದ್ದು, ಬೆಳಗಿನ ಉಪಾಹಾರವು ದಿನದ ಪ್ರಮುಖ ಊಟವೆಂದು ಆರೋಗ್ಯ ತಜ್ಞರು ಹೇಳುತ್ತಾರೆ, ಬೆಳಗಿನ ಉಪಾಹಾರ ಸೇವಿಸಿದರೆ ದಿನವಿಡೀ ಶಕ್ತಿ ನಿಮ್ಮಲ್ಲಿ ಹಾಗೆಯೇ ಉಳಿಯುತ್ತದೆ.

ದೀರ್ಘಕಾಲ ಹಸಿವಿನಿಂದ ಇರಬೇಡಿ: ದೀರ್ಘಕಾಲದವರೆಗೆ ಹಸಿವಿನಿಂದ ಇದ್ದರೆ ನಿಮ್ಮ ತೂಕ ಕಡಿಮೆಯಾಗುವುದಿಲ್ಲ ಬದಲಾಗಿ ನಿಮ್ಮ ದೇಹ ದುರ್ಬಲವಾಗುತ್ತದೆ. ಏಕೆಂದರೆ ಹೀಗೆ ಮಾಡುವುದರಿಂದ ಚಯಾಪಚಯ ಪ್ರಕ್ರಿಯೆ ಕಡಿಮೆಯಾಗುತ್ತದೆ. ಇದರಿಂದ ತೂಕ ನಷ್ಟವಾಗುವ ಬದಲು ದೇಹವು ದುರ್ಬಲವಾಗಬಹುದು. ಹೀಗಾಗಿ ದೀರ್ಘಕಾಲ ಹಸಿವಿನಿಂದ ಇರುವುದು ಒಳ್ಳೆಯದಲ್ಲ.

ರಾತ್ರಿ ವಾಕ್ ಮಾಡಬೇಕು: ರಾತ್ರಿಯ ಊಟದ ನಂತರ ವಾಕ್ ಮಾಡಲು ಸಮಯ ತೆಗೆದುಕೊಳ್ಳುವುದು ಮುಖ್ಯ. ತಜ್ಞರ ಪ್ರಕಾರ ರಾತ್ರಿ 15 ನಿಮಿಷಗಳ ನಡಿಗೆ ಆರೋಗ್ಯಕ್ಕೆ ಒಳ್ಳೆಯದು. ಇದು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಬಲ್ಲದು.

ಸಂರಕ್ಷಿತ ಆಹಾರ ತಿನ್ನುವುದು: ಮಾರುಕಟ್ಟೆಯಲ್ಲಿ ಕಂಡುಬರುವ ಅನೇಕ ಸಂರಕ್ಷಿತ ಆಹಾರ ಪದಾರ್ಥಗಳು ಆರೋಗ್ಯಕರವೆಂದು ಹೇಳಲಾಗುತ್ತದೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ಸಂರಕ್ಷಕಗಳು ಮತ್ತು ಸಕ್ಕರೆಯನ್ನು ಹೊಂದಿರಬಹುದು. ಇಂತಹ ‘ಡಯಟ್ ಆಹಾರಗಳು’ ಆರೋಗ್ಯವನ್ನು ಹಾಳುಮಾಡುತ್ತವೆ. ಹೀಗಾಗಿ ನೀವು ತಾಜಾ ಆಹಾರವನ್ನು ಮಾತ್ರ ಸೇವಿಸುವುದು ಉತ್ತಮ.

ಕಡಿಮೆ ಪ್ರೋಟೀನ್ ಆಹಾರ ತಿನ್ನುವುದು: ತೂಕವನ್ನು ಕಳೆದುಕೊಳ್ಳುವ ಆಲೋಚನೆಯಲ್ಲಿ ಅನೇಕರು ಪ್ರೋಟೀನ್-ಭರಿತ ಆಹಾರ ಸೇವಿಸುವುದನ್ನು ಮರೆತೇಬಿಡುತ್ತಾರೆ. ಈ ರೀತಿ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಏಕೆಂದರೆ ಈ ಪೋಷಕಾಂಶವು ನಮ್ಮ ಸ್ನಾಯುಗಳ ಬೆಳವಣಿಗೆಗೆ ಬಹಳ ಮುಖ್ಯವಾಗಿದೆ. ಸಿರಿಧಾನ್ಯ, ಸೋಯಾಬೀನ್ ಮತ್ತು ಮೊಟ್ಟೆಯ ಬಿಳಿಭಾಗಗಳಲ್ಲಿ ಉತ್ತಮ ಪ್ರಮಾಣದ ಪ್ರೋಟೀನ್ ಇರುತ್ತದೆ.

ಜೀವನಶೈಲಿಗೆ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ