No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನವು ಆರೋಗ್ಯದ ಮೇಲೆ ಆಳವಾದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೌದು ಧೂಮಪಾನದ ಅಭ್ಯಾಸವು ಕ್ಯಾನ್ಸರ್‌, ಶ್ವಾಸಕೋಶದ ಕಾಯಿಲೆಯಂತಹ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಧೂಮಪಾನವು ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯಿರಿ.

No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ
ಧೂಮಪಾನ ನಿಷೇಧ ದಿನ
Image Credit source: vecteezy

Updated on: Mar 11, 2026 | 10:19 AM

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್‌ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್‌ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ.

ಧೂಮಪಾನ ನಿಷೇಧ ದಿನದ ಇತಿಹಾಸವೇನು?

ಧೂಮಪಾನದಿಂದ ಉಂಟಾಗುವ ಆರೋಗ್ಯ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಧೂಮಪಾನ ತ್ಯಜಿಸುವುದನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಅಭಿಯಾನವಾಗಿ 1984 ರಲ್ಲಿ ಐರ್ಲೆಂಡ್‌ನಲ್ಲಿ ಮೊದಲ ಬಾರಿಗೆ ನೋ ಸ್ಮೋಕಿಂಗ್ ದಿನವನ್ನು ಆಚರಿಸಲಾಯಿತು. ಮೂಲತಃ ಮಾರ್ಚ್‌ನಲ್ಲಿ ಮೊದಲ ಬುಧವಾರದಂದು ಅಂದರೆ ಆಶ್‌ ವೆಡ್‌ನೆಸ್‌ ಡೇ ಯಂದು ಆಚರಿಸಲಾಗುತ್ತಿತ್ತು, ನಂತರ ಈ ದಿನವನ್ನು ಮಾರ್ಚ್‌  ಎರಡನೇ ಬುಧವಾರದಂದು ಆಚರಿಸಲಾಯಿತು. ನಂತರ ಈ ಜಾಗೃತಿ ದಿನ ವಿಶ್ವಾದ್ಯಂತ ಮನ್ನಣೆ ಗಳಿಸಿತು.  ಇಂದು ಈ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಆಚರಿಸಲಾಗುತ್ತದೆ.

ಇದನ್ನೂ ಓದಿ: ಮಹಿಳಾ ದಿನದ ಆಚರಣೆ ಆರಂಭವಾದದ್ದು ಹೇಗೆ ಗೊತ್ತಾ?

ಧೂಮಪಾನ ನಿಷೇಧ ದಿನದ ಮಹತ್ವವೇನು?

  • ಧೂಮಪಾನದ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರು ಸಮಯಕ್ಕೆ ಸರಿಯಾಗಿ ಧೂಮಪಾನವನ್ನು ತ್ಯಜಿಸಲು ಪ್ರೋತ್ಸಾಹಿಸಲು ಈ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನ ಜಗತ್ತನ್ನು ಧೂಮಪಾನ ಮುಕ್ತಗೊಳಿಸಲು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಅನೇಕ ಕಡೆ ವಿಚಾರ ಸಂಕಿರಣಗಳು ಮತ್ತು ಕಾರ್ಯಾಗಾರಗಳನ್ನು ಸಹ ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us