AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಿಮೆಣಸು ಮಾತ್ರವಲ್ಲ, ಕರಿಮೆಣಸಿನ ತೈಲದಿಂದಲೂ ಲಭಿಸುತ್ತದೆ ಹಲವು ಆರೋಗ್ಯ ಪ್ರಯೋಜನಗಳು

ಕರಿಮೆಣಸು ಅಥವಾ ಕಾಳುಮೆಣಸು ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುವ ಮಸಾಲೆ ಪದಾರ್ಥವಾಗಿದ್ದು, ವಿಶ್ವಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಬೇಡಿಕೆಯಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ಕರಿಮೆಣಸಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಆದರೆ ನಿಮಗೆ ಕರಿಮೆಣಸಿನ ತೈಲದಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿದೆಯಾ? ಇಲ್ಲಿದೆ ಈ ತೈಲದ ಅದ್ಭುತ ಆರೋಗ್ಯ ಪ್ರಯೋಜಗಳ ಮಾಹಿತಿ.

ಕರಿಮೆಣಸು ಮಾತ್ರವಲ್ಲ, ಕರಿಮೆಣಸಿನ ತೈಲದಿಂದಲೂ ಲಭಿಸುತ್ತದೆ ಹಲವು ಆರೋಗ್ಯ ಪ್ರಯೋಜನಗಳು
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 15, 2023 | 6:11 PM

ಪ್ರಾಚೀನ ಕಾಲದಿಂದಲೂ ಕರಿಮೆಣಸು ಭಾರತೀಯ ಅಡುಗೆಗಳಲ್ಲಿ ಬಳಸಲಾಗುವ ಒಂದು ಮಸಾಲೆ ಪದಾರ್ಥವಾಗಿದೆ. ಅಲ್ಲದೆ ಇದನ್ನು ಮನೆಮದ್ದು ಹಾಗೂ ಆಯುರ್ವೇದದಲ್ಲಿಯೂ ಬಳಸಲಾಗುತ್ತದೆ. ಇದು ಆಹಾರಕ್ಕೆ ರುಚಿಯನ್ನು ನೀಡುವುದು ಮಾತ್ರವಲ್ಲದೆ ನಮ್ಮ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕರಿಮೆಣಸಿನಲ್ಲಿ ಜೀವಸತ್ವಗಳು, ಮ್ಯಾಂಗನೀಸ್, ರಂಜಕ, ಸೆಲೆನಿಯಮ್ ಮತ್ತು ಕ್ಯಾರೋಟಿನ್ ನಂತಹ ಖನಿಜಗಳು ಹೇರಳವಾಗಿದೆ. ಇದು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಕರಿಮೆಣಸಿನಂತೆಯೇ ಇದರ ತೈಲವೂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕರಿಮೆಣಸು ಸಾಕಷ್ಟು ಪ್ರಸಿದ್ಧವಾಗಿದ್ದರೂ ಕರಿಮೆಣಸಿನ ಎಣ್ಣೆಯ ಬಗ್ಗೆ ವ್ಯಾಪಕವಾಗಿ ತಿಳಿದಿಲ್ಲ. ಹಾಗಾಗಿ ಈ ಕರಿಮೆಣಸಿನ ತೈಲದಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಾವಿಂದು ತಿಳಿಸಿಕೊಡುತ್ತೇವೆ.

ಕರಿಮೆಣಸಿನ ತೈಲದ ಆರೋಗ್ಯ ಪ್ರಯೋಜನಗಳು

ಸಂಧಿವಾತಕ್ಕೆ ಪರಿಹಾರ ಒದಗಿಸುತ್ತದೆ:

ಕರಿಮೆಣಸಿನ ಎಣ್ಣೆಯನ್ನು ಆಯುರ್ವೇದದಲ್ಲಿ ಸಂಧಿವಾತ ಮತ್ತು ಕೀಲು ನೋವಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಕರಿ ಮೆಣಸಿನ ಎಣ್ಣೆಯು ಅದರ ಉಷ್ಣತೆ, ಉರಿಯೂತ ವಿರೋಧಿ ಮತ್ತು ಆ್ಯಂಟಿಸ್ಪಾಸ್ಮೊಡಿಕ್ ಗುಣಲಕ್ಷಣಗಳಿಂದಾಗಿ ಸ್ನಾಯುವಿನ ಗಾಯಗಳು, ಸ್ನಾಯು ರಜ್ಜು ಉರಿಯೂತ ಮತ್ತು ಸಂಧಿವಾತದ ಲಕ್ಷಣಗಳನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಈ ಎಣ್ಣೆಯಿಂದ ಕೀಲುಗಳಿಗೆ ಮಸಾಜ್ ಮಾಡುವುದರಿಂದ ಸಂಧಿವಾತ ನೋವಿನಿಂದ ಪರಿಹಾರ ಪಡೆಯಬಹುದು.

ಒತ್ತಡವನ್ನು ಕಡಿಮೆ ಮಾಡಲು ಸಹಕಾರಿ:

ಕರಿಮೆಣಸಿನಿಂದ ತಯಾರಿಸಿದ ಸಾರಭೂತ ತೈಲವು ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಮೂಲಕ ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಈ ತೈಲದ ಪರಿಮಳವು ನಿಮ್ಮ ನರಗಳನ್ನು ಶಾಂತಗೊಳಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಿ ನಿಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಕರಿಮೆಣಸಿನ ಸಾರಭೂತ ತೈಲವನ್ನು ಸೇವಿಸಿದಾಗ ಅದು ಆರೋಗ್ಯಕರ ರಕ್ತಪರಿಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಜರ್ನಲ್ ಆಫ್ ಕಾರ್ಡಿಯೋವಾಸ್ಕುಲರ್ ಫಾರ್ಮಾಕಾಲಜಿ ನಿಯತಕಾಲಿಕೆಯಲ್ಲಿ ಪ್ರಕಟವಾದ ಅಧ್ಯನವು ಕರಿಮೆಣಸಿನ ಸಕ್ರಿಯ ಘಟಕವಾದ ಪೈಪರಿನ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ತೋರಿಸಿದೆ.

ಇದನ್ನೂ ಓದಿ: ನಿತ್ಯ ನೀವು ಮಾಡುವ ಈ ತಪ್ಪುಗಳು ಮೆದುಳಿಗೆ ಹಾನಿ ಮಾಡಬಹುದು ಎಚ್ಚರ

ಚರ್ಮಕ್ಕೆ ಪ್ರಯೋಜನಕಾರಿ:

ಚರ್ಮದ ಆರೈಕೆಗಾಗಿ ಕರಿಮೆಣಸಿನ ಸಾರಭೂತ ತೈಲವನ್ನು ಬಳಸುವುದು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕರಿಮೆಣಸಿನ ಎಣ್ಣೆಯು ಆ್ಯಂಟಿವೈರಲ್ ಮತ್ತು ಆ್ಯಂಟಿಮೈಕ್ರೋಬಿಯಲ್ ಗುಣಗಳನ್ನು ಹೊಂದಿದೆ, ಇದು ಚರ್ಮವನ್ನು ಶುದ್ಧೀಕರಿಸುತ್ತದೆ ಮತ್ತು ಧೂಳು ಕೊಳಕು ಹಾಗೂ ಬ್ಯಾಕ್ಟೀರಿಯಾದಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಚರ್ಮದ ಅಲರ್ಜಿಗಳು ಮತ್ತು ಸೋಂಕುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಕಾರಿ:

ಅಧಿಕ ಕೊಲೆಸ್ಟ್ರಾಲ್ ಪ್ರಸ್ತುತ ಜಗತ್ತಿನ ಪ್ರಮುಖ ಸಮಸ್ಯೆಯಾಗುತ್ತಿದೆ. ಕರಿಮೆಣಸಿನ ತೈಲವು ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು

ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು:

ಕರಿಮೆಣಸಿನ ಎಣ್ಣೆಯನ್ನು ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಪರಿಗಣಿಸಲಾಗಿದೆ. ಕರಿಮೆಣಸಿನ ಸಾರಭೂತ ತೈಲದಲ್ಲಿರುವ ಅತಿಸಾರ ನಿವಾರಕ ಮತ್ತು ಆ್ಯಂಟಿಸ್ಪಾಸ್ಮೊಡಿಕ್ ಗುಣಲಕ್ಷಣಗಳು ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹೊಟ್ಟೆಯಲ್ಲಿ ಹೈಡ್ರೋಕ್ಲೋರಿಕ್ ಆಮ್ಲದ ಸ್ರವಿಸುವಿಕೆಯನ್ನು ಸುಧಾರಿಸುವ ಮೂಲಕ ಇದು ಆಹಾರದ ಜೀರ್ಣಕ್ರಿಯೆ ಮತ್ತು ಗ್ಯಾಸ್, ಮಲಬದ್ಧತೆ, ಆಮ್ಲೀಯತೆ ಮತ್ತು ಅತಿಸಾರದಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!