Guava Leaves Benefits: ಪೇರಳೆ ಮಾತ್ರವಲ್ಲದೆ ಅದರ ಎಲೆಗಳೂ ಆರೋಗ್ಯಕ್ಕೆ ಒಳ್ಳೆಯದು

| Updated By: ಅಕ್ಷತಾ ವರ್ಕಾಡಿ

Updated on: Oct 10, 2023 | 6:38 PM

ಪೇರಳೆ ಹಣ್ಣು ತಿನ್ನಲು ಎಷ್ಟು ರುಚಿಕರವೋ ಅದೇ ರೀತಿ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಅದರ ಎಲೆಗಳು ಕೂಡಾ ನಮ್ಮ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯಾ? ಪೇರಳೆ ಎಲೆಗಳಲ್ಲಿ ಹಲವಾರು ಔಷಧೀಯ ಗುಣಗಳಿದ್ದು, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತದೆ.

Guava Leaves Benefits: ಪೇರಳೆ ಮಾತ್ರವಲ್ಲದೆ ಅದರ ಎಲೆಗಳೂ ಆರೋಗ್ಯಕ್ಕೆ ಒಳ್ಳೆಯದು
Guava Leaves Benefits
Follow us on

ಸೀಬೆ ಅಥವಾ ಪೇರಳೆ ಹಣ್ಣಿನ ಪ್ರಯೋಜನಗಳ ಬಗ್ಗೆ ಬಹುತೇಕ ನಮಗೆಲ್ಲರಿಗೂ ತಿಳಿದಿದೆ. ಆದರೆ ಅದರ ಎಲೆಗಳಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಹೌದು ಪೇರಳೆಯಂತೆ ಅದರ ಎಲೆಗಳಲ್ಲೂ ಸಹ ಹಲವಾರು ಔಷದೀಯ ಗುಣಗಳಿವೆ. ಅಲ್ಲದೆ ಈ ಎಲೆಗಳು ಉತ್ಕರ್ಷಣ ನಿರೋಧಕಗಳು, ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋದಿ ಗುಣಲಕ್ಷಣಗಳು, ಪ್ರೋಟೀನ್, ವಿಟಮಿನ್ ಸಿ, ವಿಟಮಿನ್ ಬಿ, ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೇಸಿಯಂ, ರಂಜಕ, ಪೊಟ್ಯಾಸಿಯಂ, ಗ್ಯಾಲಿಕ್ ಆಮ್ಲ, ಮತ್ತು ಫಿನಾಲಿಕ್ ಸಂಯುಕ್ತಗಳು ಸೇರಿದಂತೆ ಹಲವು ಜೀವಸತ್ವ, ಖನಿಜಗಳು ಮತ್ತು ಪೋಷಕಾಂಶದ ಸಮೃದ್ಧ ಮೂಲವಾಗಿದೆ. ಹಾಗಾಗಿ ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ತಯಾರಿಸಿದ ಕಷಾಯವನ್ನು ಕುಡಿಯುವುದರಿಂದ ಅಥವಾ ಪೇರಳೆ ಚಿಗುರೆಲೆಗಳನ್ನು ಜಗಿಯುವುದರಿಂದ ನೀವು ಹಲವಾರು ಆರೋಗ್ಯ ಲಾಭಗಳನ್ನು ಗಳಿಸಬಹುದು.

ಪೇರಳೆ ಎಲೆಯನ್ನು ಸೇವಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ:

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪೇರಳೆ ಎಲೆಗಳನ್ನು ಜಗಿಯುವುದರಿಂದ, ಅಥವಾ ಅದರ ಕಷಾಯವನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಹೌದು ಈ ಎಲೆಗಳು ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುವ ಮೂಲಕ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರದಲ್ಲಿಡುತ್ತದೆ.

ಮಧುಮೇಹಿಗಳಿಗೆ ಪ್ರಯೋಜನಕಾರಿ:

ಮಧುಮೇಹ ರೋಗಿಗಳಿಗೆ ಪೇರಳೆ ಎಲೆಯು ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಫೀನಾಲಿಕ್ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ನೀವು ಮಧುಮೇಹವನ್ನು ನಿಯಂತ್ರಣದಲ್ಲಿಡಲು ಬಯಸಿದರೆ ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಆ ಕಷಾಯವನ್ನು ಪ್ರತಿನಿತ್ಯ ಕುಡಿಯಿರಿ.

ಹಿಮೋಗ್ಲೋಬೀನ್ ಮಟ್ಟವನ್ನು ಹೆಚ್ಚಿಸಲು ಸಹಕಾರಿ:

ಪೇರಳೆ ಎಲೆಯ ಕಷಾಯ ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಉತ್ತಮ ಔಷಧಿಯಾಗಿದೆ. ಇದು ರಕ್ತದಲ್ಲಿ ಕೆಂಪುರಕ್ತಕಣಗಳನ್ನು ಹೆಚ್ಚಿಸುತ್ತದೆ. ಅಲ್ಲದೆ ಇದು ಡೆಂಗ್ಯೂ ರೋಗಿಗಳಲ್ಲಿ ಪ್ಲೇಟ್ಲೇಟ್ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಬಾಯಿ ಹುಣ್ಣು ಸಮಸ್ಯೆಗೆ ಪರಿಹಾರ ನೀಡುತ್ತದೆ:

ದೇಹದ ಉಷ್ಣತೆ ಹೆಚ್ಚಾಗಿ ಬಾಯಿ ಮತ್ತು ನಾಲಿಗೆಯಲ್ಲಿ ಹುಣ್ಣು ಅಥವಾ ಗುಳ್ಳೆಗಳಾಗಿದ್ದರೆ, ಪೇರಳೆ ಎಲೆಯಿಂದ ತಯಾರಿಸಿದ ಕಷಾಯವನ್ನು ಕುಡಿಯುವ ಮೂಲಕ ಈ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದು.

ಇದನ್ನೂ ಓದಿ: ಪಾಲಕ್ ಸೊಪ್ಪನ್ನು ಸೂಪರ್ ಫುಡ್ ಎಂದು ಕರೆಯೋದೇಕೆ?

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ:

ಪೇರಳೆ ಎಲೆಯ ಕಷಾಯ ನೈಸರ್ಗಿಕ ರಕ್ತ ಶುದ್ಧೀಕರಣ ಮತ್ತು ಡಿಟಾಕ್ಸ್ ಪಾನೀಯವಾಗಿದೆ. ಇದು ನಿಮ್ಮ ದೇಹದಲ್ಲಿರುವ ವಿಷ ಮತ್ತು ಹಾನಿಕಾರಕ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರೊಂದಿಗೆ ಈ ಕಷಾಯದ ನಿಯಮಿತ ಸೇವನೆಯಿಂದ ಮುಖದಲ್ಲಿ ಕಾಣಿಸಿಕೊಳ್ಳುವ ಕಲೆ ಮತ್ತು ಮೊಡವೆಗಳ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು.

ತೂಕ ಇಳಿಕೆಗೆ ಸಹಕಾರಿ:

ಪೇರಳೆ ಎಲೆಗಳು ತೂಕ ನಷ್ಟಕ್ಕೆ ಪರಿಣಾಮಕಾರಿಯಾಗಿದೆ. ಈ ಎಲೆಗಳನ್ನು ತಿನ್ನುವುದರಿಂದ ಅಥವಾ ಪೇರಳೆ ಎಲೆಯಿಂದ ತಯಾರಿಸಿದ ಕಷಾಯವನ್ನು ಕುಡಿಯುವುದರಿಂದ ದೇಹದಲ್ಲಿ ಸಂಗ್ರಹಗೊಂಡ ಕೊಬ್ಬನ್ನು ಕರಗಿಸಬಹುದು. ಅಲ್ಲದೆ ಪೇರಳೆ ಎಲೆಯ ಕಷಾಯ ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಇದರಿಂದ ತೂಕವೂ ಕಡಿಮೆಯಾಗಿ ದೇಹವು ಫಿಟ್ ಆಗಿ ಕಾಣುತ್ತದೆ.

ಶೀತ ಮತ್ತು ಕೆಮ್ಮುವಿಗೆ ಪರಿಣಾಮಕಾರಿ:

ನೆಗಡಿ ಮತ್ತು ಕೆಮ್ಮನ್ನು ಶಮನ ಮಾಡಲು ಪೇರಳೆ ಎಲೆಗಳು ಸಹಕಾರಿಯಾಗಿದೆ. ಈ ಎಲೆಗಳಲ್ಲಿ ಕಂಡುಬರುವ ವಿಟಮಿನ್ ಸಿ ಮತ್ತು ಕಬ್ಬಿಣಾಂಶವು ಕಾಲೋಚಿತ ಜ್ವರ ಮತ್ತು ಸೋಂಕುಗಳನ್ನು ಬಾರದಂತೆ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: