AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Olympic Day 2023: ಅಂತರಾಷ್ಟ್ರೀಯ ಒಲಿಂಪಿಕ್ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

ಜೀವನದಲ್ಲಿ ಆಟಗಳ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿವರ್ಷ ಜೂನ್ 23 ರಂದು ಅಂತರಾಷ್ಟ್ರೀಯ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Olympic Day 2023: ಅಂತರಾಷ್ಟ್ರೀಯ ಒಲಿಂಪಿಕ್ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 23, 2023 | 6:36 AM

Share

ಆಧುನಿಕ ಒಲಿಂಪಿಕ್‌ ಕ್ರೀಡಾಕೂಟದ ಆರಂಭದ ನೆನಪಿಗಾಗಿ ಮತ್ತು ಜೀವನದಲ್ಲಿ ಆಟಗಳ ಪ್ರಾಮುಖ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಜೂನ್ 23 ರಂದು ಅಂತರಾಷ್ಟ್ರೀಯ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಏಕೆಂದರೆ ಒಲಿಂಪಿಕ್ ಜಗತ್ತಿನ ಪ್ರಮುಖ ಕ್ರೀಡಾಕೂಟಗಳಲ್ಲಿ ಒಂದಾಗಿದ್ದು ಈ ಬಗ್ಗೆ ಸಾಮಾನ್ಯ ಜನರಿಗೂ ಅರಿವು ಮೂಡಿಸಲು ಈ ದಿನ ಅವಶ್ಯವಾಗಿದೆ. ಎಲ್ಲಾ ವಯೋಮಾನದ ಸಾವಿರಾರು ಜನರು ಒಟ್ಟುಗೂಡಿ ವಿವಿಧ ರೀತಿಯ ಕ್ರೀಡೆ, ಓಟಗಳು, ಮ್ಯಾರಥಾನ್‌, ಬೇರೆ ಬೇರೆ ಪ್ರದರ್ಶನಗಳು, ಸಂಗೀತ ಕಾರ್ಯಕ್ರಮ ಮತ್ತು ಶೈಕ್ಷಣಿಕ ಸೆಮಿನಾರ್‌ಗಳಂತಹ ಹಲವಾರು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ಒಲಿಂಪಿಕ್ ದಿನವನ್ನು ಆಚರಣೆ ಮಾಡಲಾಗುತ್ತದೆ.

ಒಲಿಂಪಿಕ್‌ ದಿನದ ಇತಿಹಾಸ:

ಮೊದಲ ಒಲಿಂಪಿಕ್ ದಿನವನ್ನು ಜೂನ್ 23, 1948 ರಂದು ಆಚರಿಸಲಾಯಿತು, ಇದರಲ್ಲಿ ಪೋರ್ಚುಗಲ್, ಗ್ರೀಸ್, ಆಸ್ಟ್ರಿಯಾ, ಕೆನಡಾ, ಸ್ವಿಟ್ಜರ್ಲೆಂಡ್, ಗ್ರೇಟ್ ಬ್ರಿಟನ್, ಉರುಗ್ವೆ, ವೆನೆಜುವೆಲಾ ಮತ್ತು ಬೆಲ್ಜಿಯಂ ಎಂಬ 9 ದೇಶಗಳು ಮೊದಲ ಬಾರಿಗೆ ಭಾಗವಹಿಸಿದ್ದವು. ಈ ಕಾರ್ಯಕ್ರಮವನ್ನು ಅಂದಿನ ಐಒಸಿ ಅಧ್ಯಕ್ಷ ಸಿಗ್ಫ್ರಿಡ್ ಎಡ್ಸ್ಟ್ರಾಮ್ ಉದ್ದೇಶಿಸಿ ಮಾತನಾಡಿದ್ದರು.

ಒಲಿಂಪಿಕ್‌ ಕ್ರೀಡಾಕೂಟದ ಮೂಲ ಗ್ರೀಸ್‌ ದೇಶದ್ದಾಗಿದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಮುರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜನೆ ಮಾಡುತ್ತಾ ಬರಲಾಗಿತ್ತು. ಬಳಿಕ ಕ್ರಮೇಣ ಈ ಕ್ರೀಡಾಕೂಟವನ್ನು ನಿಲ್ಲಿಸಲಾಯಿತು. ನಂತರ ಮತ್ತೇ ಈ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿದ್ದು, 1859 ರಲ್ಲಿ. ಇವಾಂಜೆಲಾಸ್ ಝಪ್ಪಾನ್ ಎಂಬುವವರು ಪ್ರಪ್ರಥಮವಾಗಿ ಒಲಿಂಪಿಕ್ ಕ್ರೀಡಾಕೂಟವನ್ನು ಪ್ರಾಯೋಜಿಸಿದರು. 1896 ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಾಧಾನಿ ಅಥೆನ್ಸ್ ನಗರದಲ್ಲಿ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್ ಕ್ರೀಡಾ ಕೂಟವಾಗಿದೆ.

ಭಾರತ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದು, 900ರ ಪ್ಯಾರೀಸ್‌ ಒಲಿಂಪಿಕ್ಸ್‌ನಲ್ಲಿ. ಆಗ ಪ್ಯಾರಿಸ್‌ನಲ್ಲಿ ರಜೆ ಕಳೆಯಲೆಂದು ತೆರಳಿದ್ದ ಆಂಗ್ಲೋ- ಇಂಡಿಯನ್‌ ಅಥ್ಲೀಟ್‌ ನಾರ್ಮನ್‌ ಪಿಚರ್ಡ್‌ ಭಾರತವನ್ನು ಪ್ರತಿನಿಧಿಸಿ 200 ಮೀ. ಓಟ ಮತ್ತು 200 ಮೀ. ಹರ್ಡಲ್ಸ್‌ನಲ್ಲಿ ಚಿನ್ನ ಗೆದ್ದಿದ್ದರು. ಬಳಿಕ 1920ರಲ್ಲಿ ಬೆಲ್ಜಿಯಂನ ಎಂಟ್‌ವರ್ಪ್‌ನಲ್ಲಿ ನಡೆದ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಭಾರತದ ಇಬ್ಬರು ಹಾಗೂ 1924ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಎಂಟು ಮಂದಿಯ ತಂಡ ಭಾಗವಹಿಸಿತ್ತು. 1928ರಲ್ಲಿ ನೆದರ್ಲೆಂಡ್‌ನ ಆಮ್‌ಸ್ಟರ್‌ಡಂ ಒಲಿಂಪಿಕ್‌ ಕ್ರೀಡಾಕೂಟ ನಡೆಯುವ ವೇಳೆ ಭಾರತೀಯ ಒಲಿಂಪಿಕ್‌ ಸಮಿತಿ ಅಸ್ತಿತ್ವಕ್ಕೆ ಬಂದಿತ್ತು. ಆಗ ಭಾರತದ ಅಧಿಕೃತ ಹಾಕಿ ಕ್ರೀಡಾ ತಂಡ ಪ್ರತಿನಿಧಿಸಿ ಮೊದಲ ಬಾರಿ ಚಿನ್ನ ಗೆದ್ದು ತಂದಿತ್ತು.

ಇದನ್ನೂ ಓದಿ: World Elephant Day 2021: ಇಂದು ವಿಶ್ವ ಆನೆಗಳ ದಿನ..: ಹೇಗೆ ಶುರುವಾಯ್ತು ಗಜರಾಜನ ದಿನಾಚರಣೆ? ಇಲ್ಲಿದೆ ಮಾಹಿತಿ

ಇನ್ನೊಂದಿಷ್ಟು ಸ್ವಾರಸ್ಯಕರ ವಿಷಯಗಳು:

-ಬ್ಯಾರನ್ ಪಿಯರೆ ಡಿ ಕೂಬರ್ಟಿನ್ ಅವರನ್ನು ಆಧುನಿಕ ಒಲಿಂಪಿಕ್ ಕ್ರೀಡಾಕೂಟದ ಪಿತಾಮಹ ಎಂದು ಕರೆಯಲಾಗುತ್ತದೆ.

-2020ರಲ್ಲಿ ನಡೆಯಬೇಕಾಗಿದ್ದಒಲಿಂಪಿಕ್ ಕ್ರೀಡಾಕೂಟ ಕೋವಿಡ್ ನಿಂದಾಗಿ 2021 ನಡೆಯಿತು. ಅದರಲ್ಲಿ 206 ರಾಷ್ಟ್ರಗಳು 339 ಕ್ರೀಡೆಗಳಲ್ಲಿ ಭಾಗವಹಿಸಿದ್ದವು.

-ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದೇಶ ಯುಎಸ್ಎ ಇದು 113 ಪದಕಗಳನ್ನು ಪಡೆದಿದ್ದು, ಚೀನಾ 89 ಮತ್ತು ಜಪಾನ್ 58 ಪದಕಗಳನ್ನು ಪಡೆದು ಕೊಂಡಿದೆ.

-2021ರ ಟೊಕಿಯೋ ಓಲಿಂಪಿಕ್ಸ್‌ನಲ್ಲಿ ಭಾರತವು ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ, ಹಾಗೂ ನಾಲ್ಕು ಕಂಚಿನ ಪದಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿತ್ತು. ಭಾರತವು 7 ಪದಕ ಗಳಿಸುವ ಮೂಲಕ 48 ನೇ ಸ್ಥಾನವನ್ನು ಪಡೆದುಕೊಂಡಿದೆ.

-1900 ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರು ಮೊದಲ ಬಾರಿಗೆ ಭಾಗವಹಿಸಿದ್ದರು. -ನೀರಜ್ ಚೋಪ್ರಾ 87.58 ಮೀ ದಾಖಲೆಯನ್ನು ಗಳಿಸುವ ಮೂಲಕ ಟೋಕಿಯೊ ಒಲಿಂಪಿಕ್ಸ್ 2021 ರಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಜಾವೆಲಿನ್ ಎಸೆತಗಾರರಾದರು.

-ಕರ್ಣಂ ಮಲ್ಲೇಶ್ವರಿ ಅವರು 2000 ರಲ್ಲಿ ಒಲಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ವೇಟ್‌ಲಿಫ್ಟರ್ ಆಗಿದ್ದರು.

ಮುಂದಿನ ಭಾರಿ ಭಾರತೀಯ ಆಟಗಾರರ ಮೇಲೆ ತುಂಬಾ ಭರವಸೆ ಇದ್ದು, ಇನ್ನೆಷ್ಟು ಪದಕ ಬಾಚಿಕೊಳ್ಳುತ್ತಾರೆ ಎಂದು ಕ್ರೀಡಾಭಿಮಾನಿಗಳು ಉತ್ಸುಕರಾಗಿದ್ದಾರೆ. ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಅನೇಕ ಕ್ರೀಡಾ ಪಟುಗಳು ಉತ್ತಮ ಸಾಧನೆ ತೋರಿದ್ದು, ಇವರೆಲ್ಲಾ ಒಲಿಂಪಿಕ್ ಕ್ರೀಡಾಕೂಟದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್